ಕೇಂದ್ರ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಫೆಬ್ರವರಿ 12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೊಳಿಸಲು ಕರೆ.
Call for a successful all-India general strike on February 12 against the anti-people policies of the central and state governments. ಕೊಪ್ಪಳ: ಪ್ರವಾಸಿ ಮಂದಿರದಲ್ಲಿ ಕರಪತ್ರ ಬಿಡುಗಡೆ ಮಾಡಲಾಯಿತು.ನಾಲ್ಕು ಲೇಬರ್ ಕೋಡ್, ವಿಬಿ. ಬಿ ರಾಮ್. ಜಿ. ವಿಮಾ ಕಾಯ್ದೆ, ವಿದ್ಯುತ್ ತಿದ್ದಪಡಿ ಕಾಯಿದೆ, ಬೀಜ ಕಾಯಿದೆ, ಭೂಸ್ವಾಧೀನ ಕಾಯ್ದೆ ರದ್ದೂಗೊಳಿಸಲು ಹಾಗೂ ಸಾರ್ವಜನಿಕ ವಲಯದ ಉದ್ಯಮಗಳ ಖಾಸಗೀಕರಣ ಖಂಡಿಸಿ ಕೇಂದ್ರ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಫೆಬ್ರವರಿ 12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೊಳಿಸಲು ಕರೆ .
ಕೇಂದ್ರ ಸರ್ಕಾರವು ದೇಶದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಸಾರ್ವಜನಿಕ ಸೇವೆಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸಿ, ಭಾರತೀಯ ಮತ್ತು ವಿದೇಶಿ ಮೂಲದ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ಮಾರಾಟ ಮಾಡುವ ನೀತಿಯನ್ನು ನಿರಂತರವಾಗಿ ಮುಂದುವರಿಸುತ್ತಿದೆ. ರೈಲ್ವೆ, ಬಂದರುಗಳು, ಹಡಗು ಕಟ್ಟೆಗಳು, ಕಲ್ಲಿದ್ದಲು ಗಣಿಗಳು, ತೈಲ, ಉಕ್ಕು, ರಕ್ಷಣಾ ಉತ್ಪಾದನೆ, ರಾಷ್ಟ್ರೀಯ ಹೆದ್ದಾರಿಗಳು, ವಿಮಾನ ನಿಲ್ದಾಣಗಳು, ಬ್ಯಾಂಕುಗಳು, ವಿಮೆ, ದೂರಸಂಪರ್ಕ, ಅಂಚೆ, ಪರಮಾಣು ಶಕ್ತಿ, ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆ ಸೇರಿದಂತೆ ಜನಸಾಮಾನ್ಯರ ಆಧಾರಸ್ತಂಭವಾಗಿರುವ ಎಲ್ಲಾ ಸಾರ್ವಜನಿಕ ವಲಯದ ಸಂಸ್ಥೆಗಳು ಖಾಸಗಿ ಲಾಭಾಸಕ್ತಿಗೆ ಒಪ್ಪಿಸಲಾಗುತ್ತಿದೆ.
ಈ ಖಾಸಗೀಕರಣ ನೀತಿಯಿಂದ ಸ್ಥಳೀಯ ಕೈಗಾರಿಕಾ ಹಾಗೂ ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ತೀವ್ರ ಹಿನ್ನಡೆ ಉಂಟಾಗಿದ್ದು, ಉದ್ಯೋಗ ಸೃಷ್ಟಿ ಕುಂಠಿತಗೊಂಡಿದೆ. ಪರಿಣಾಮವಾಗಿ ನಿರುದ್ಯೋಗ ಸಮಸ್ಯೆ ದೇಶದಲ್ಲಿ ಅತ್ಯಂತ ಗಂಭೀರ ಸ್ವರೂಪ ತಾಳಿದೆ. ಕಾರ್ಮಿಕರ ಉದ್ಯೋಗ ಭದ್ರತೆ ನಾಶವಾಗುತ್ತಿದ್ದು, ಸಾರ್ವಜನಿಕ ಸೇವೆಗಳ ಗುಣಮಟ್ಟ ಕುಸಿಯುತ್ತಿದೆ ಹಾಗೂ ಜನರ ಮೇಲಿನ ಆರ್ಥಿಕ ಭಾರ ಹೆಚ್ಚುತ್ತಿದೆ.
ಈ ಜನವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU) ಹಾಗೂ ವಿವಿಧ ರೈತ–ಜನ ಸಂಘಟನೆಗಳ ನೇತೃತ್ವದಲ್ಲಿ ಫೆಬ್ರವರಿ 12, 2026 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ನಾಲ್ಕು ಲೇಬರ್ ಕೋಡ್‌ಗಳನ್ನು ಹಿಂಪಡೆಯಬೇಕು, ಖಾಸಗೀಕರಣ ನಿಲ್ಲಿಸಬೇಕು, ಸಾರ್ವಜನಿಕ ವಲಯದ ಸಂಸ್ಥೆಗಳನ್ನು ರಕ್ಷಿಸಬೇಕು, ಶ್ರಮಿಕರ ಹಕ್ಕುಗಳನ್ನು ಕಾಪಾಡಬೇಕು ಎಂಬ ಪ್ರಮುಖ ಬೇಡಿಕೆಗಳೊಂದಿಗೆ ಈ ಮುಷ್ಕರ ನಡೆಯಲಿದೆ.
ಕೊಪ್ಪಳ ಜಿಲ್ಲೆಯಲ್ಲಿ ಬ್ಯಾಂಕ್, ವಿಮೆ, ಸಾರಿಗೆ, ವಿದ್ಯುತ್, ಅಂಚೆ, ಶಿಕ್ಷಣ, ಆರೋಗ್ಯ, ನಿರ್ಮಾಣ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮಧ್ಯಾಹ್ನ ಬೋಜನ ಸಿಬ್ಬಂದಿಗಳು, ರೈತರು ಹಾಗೂ ಜನಸಾಮಾನ್ಯರು ಮುಷ್ಕರದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಮುಷ್ಕರದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು ಮತ್ತು ಮೆರವಣಿಗೆಗಳು ನಡೆಯಲಿವೆ.
ಕಾರ್ಮಿಕ–ರೈತ–ಜನತೆಯ ಹಕ್ಕುಗಳ ರಕ್ಷಣೆಗೆ ಈ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಗೆ, ಬೀದಿ ಬದಿ ವ್ಯಾಪಾರಸ್ಥರಿಗೆ, ಕಟಿಂಗ್ ಶಾಪ್ ಅಂಗಡಿ ಮಾಲಕರಿಗೆ, ಟೈಲರ್ ಯೂನಿಯನ್ ಅಧ್ಯಕ್ಷರಿಗೆ, ಅಮಾಲರ ಸಂಘದ, ಆಟೋ ಚಾಲಕರಿಗೆ, ವರ್ತಕರ ಸಂಘದ ಅಧ್ಯಕ್ಷರಿಗೆ ಸ್ವಯಂಪ್ರೇರಿತವಾಗಿ ಕೊಪ್ಪಳ ಬಂದ್ ಮಾಡಲು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರಾದ ಹನುಮೇಶ ಕಲ್ಮಂಗಿ, ಶರಣು ಗಡ್ಡಿ, ಬಸವರಾಜ್ ಸಿಲುವಂತರ್, ಸುಂಕಪ್ಪ ಗದಗ್, ತುಕಾರಾಂ ಪಾತ್ರೋಟಿ, ಮಹದೇವಪ್ಪ,ಕೆ. ಬಿ ಗೋನಾಳ್, ಸಂಜಯ್ ದಾಸ್,ದೊರೆ ವಿಜಯ್, ರಾಮಲಿಂಗ ಸ್ವಾಮಿ, ಮಲ್ಲಪ್ಪ, ಮುಂತಾದ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ಕೇಂದ್ರ – ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU),ಸಂಯುಕ್ತ ಹೋರಾಟ-ಕರ್ನಾಟಕ ಕೊಪ್ಪಳ
(CITU, AIUTUC,IFTU,AITUC, TUCI, AICCTU,AIUKS, NCL,AIAWU, AIIEA,LICAOI, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಸೇರಿದಂತೆ ಇತರ ಸಂಘಟನೆಗಳು)
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…