
ಶ್ರೀ ತ್ರಯಂಬಕೇಶ್ವರ ದೇವಸ್ಥಾನನಲ್ಲಿ ಮಹಾಶಿವರಾತ್ರಿ ಸಂಭ್ರಮ
Mahashivratri celebrations at Sri Trimbakeshwar Temple

ಗಂಗಾವತಿ: ಮಹಾಶಿವರಾತ್ರಿ ಅಂಗವಾಗಿ ನಗರದ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಶ್ರೀ ತ್ರಯಂಬಕೇಶ್ವರ ಸೇವಾ ಟ್ರಸ್ಟ್ ಕಮಿಟಿಯಿಂದ ಭಕ್ತಿಭಾವದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆಯಿಂದಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ, ಅಭಿಷೇಕ ಹಾಗೂ ಶಿವನಾಮ ಸ್ಮರಣೆಗಳಲ್ಲಿ ಪಾಲ್ಗೊಂಡರು ಮತ್ತು ಆಧ್ಯಾತ್ಮಿಕ ಉಪನ್ಯಾಸ, ವಿವಿಧ ಕ್ಷೇತ್ರದಲ್ಲಿ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.
ನಂತರ ಶ್ರೀ ತ್ರಯಂಬಕೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್.ಬಿ.ಹಿರೇಮಠ, ಕಾರ್ಯದರ್ಶಿ ಆದಯ್ಯಸ್ವಾಮಿ ಹಿರೇಮಠ, ಗೌರವ ಅಧ್ಯಕ್ಷ ಶಂಕ್ರಯ್ಯಸ್ವಾಮಿ ಹಿರೇಮಠ, ಅವರು ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾಪ್ರಸಾದ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ತ್ರಯಂಬಕೇಶ್ವರ ಸೇವಾ ಟ್ರಸ್ಟ್ ಕಮಿಟಿ ವರ್ಗದವರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಭಕ್ತರಿಗೆ ಶುಭಾಶಯ ಕೋರಿದರು. ಮಹಾಶಿವರಾತ್ರಿ ಪ್ರಯುಕ್ತ ದೇವಸ್ಥಾನವನ್ನು ಆಕರ್ಷಕವಾಗಿ ಅಲಂಕರಿಸಲಾಗಿದ್ದು, ಭಕ್ತರಿಗಾಗಿ ವಿಶೇಷ ವ್ಯವಸ್ಥೆಗಳು ಮಾಡಲಾಗಿತ್ತು. ಸಮಸ್ತ ಭಕ್ತರು ಶಾಂತಿ ಮತ್ತು ಸೌಹಾರ್ದತೆಯೊಂದಿಗೆ ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಶ್ರೀ ತ್ರಯಂಬಕೇಶ್ವರ ಸೇವಾ ಟ್ರಸ್ಟ್ ಕಮಿಟಿಯ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರು,ಮಾಜಿ ಕಾಡಾ ಅಧ್ಯಕ್ಷರಾದ ಬಿ.ಹೆಚ್.ಎಂ. ತಿಪ್ಪೇರುದ್ರಸ್ವಾಮಿ, ನಗರಸಭೆ ಸದಸ್ಯ ಮನೋಹರ್ ಸ್ವಾಮಿ ಹಿರೇಮಠ್, ಅಶೋಕ್ ಸ್ವಾಮಿ ಹೇರೂರು ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರು, ಮಾಜಿ ನಗರಸಭೆ ಅಧ್ಯಕ್ಷ ರಾಘವೇಂದ್ರ ಶೆಟ್ಟಿ , ಮಾಜಿ ನಗರಸಭೆ ಸದಸ್ಯರು ಪರಮೇಶ್ವರ್, ಗಿರೀಶ ಬಳ್ಳಾರಿ, ಶರಣಯ್ಯಸ್ವಾಮಿ, ಮಹಿಳಾ ಮುಖಂಡರಾದ ಸಹನಾ ಹಿರೇಮಠ, ಕಸ್ಥೂರಮ್ಮ ಕೆಂಬಾವಿಮಠ, ಸೇರಿದಂತೆ ಅಪಾರಭಕ್ತ ಸಮೂಹ ರೊಂದಿಗೆ ಮಹಾಶಿವರಾತ್ರಿ ಕಾರ್ಯಕ್ರಮ ಅದ್ದೂರಿಯಿಂದ ನಡೆಯಿತು.



