ಫೆ.17 ರಂದು ಎಸ್.ಆರ್ ಮೆಹರೋಜ್ ಖಾನ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಫೆ.17 ರಂದು ಎಸ್.ಆರ್ ಮೆಹರೋಜ್ ಖಾನ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ
S.R. Mehroz Khan's Koppal district tour program on Feb. 17
ಕೊಪ್ಪಳ ಫೆಬ್ರವರಿ 16, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಫೆಬ್ರವರಿ 17 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಉಪಾಧ್ಯಕ್ಷರು ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ನಗರದ ಮಧುಶ್ರೀ ಗಾರ್ಡನ್ ನಲ್ಲಿ ಆಯೋಜಿಸಿರುವ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.