ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ-1 ಸ್ಥಾಪನೆ: ಅರ್ಜಿ ಆಹ್ವಾನ

Mallikarjun
1 Min Read

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ-1 ಸ್ಥಾಪನೆ: ಅರ್ಜಿ ಆಹ್ವಾನ

Establishment of Karnataka-1 in Urban Local Bodies: Applications invited




ಕೊಪ್ಪಳ ಫೆಬ್ರವರಿ 18, (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಜಿಲ್ಲೆಯ ನಾಲ್ಕು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.
ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತಿ, ಕೊಪ್ಪಳ ನಗರಸಭೆ, ಕುಕನೂರು ಪಟ್ಟಣ ಪಂಚಾಯತಿ ಹಾಗೂ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯಲ್ಲಿ ತಲಾ ಒಂದು ಕರ್ನಾಟಕ-1 ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಆದ್ದರಿಂದ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಆಯಾ ಸ್ಥಳೀಯ ಸಂಸ್ಥೆಗಳಲ್ಲಿನ ಆಸಕ್ತರು ಮಾರ್ಚ್ 2 ರೊಳಗೆ ಆನ್‌ಲೈನ್ ಮೂಲಕ  https://www.karnatakaone.gov.in/public/FranchiseeTerms       ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article