ಕಾನೂನು ಬಾಹಿರವಾಗಿ 10 ಲಕ್ಷ ರೂ ಪಡೆದ ಮದರಸಾ ವಿರುದ್ಧ ಹೈಕೋರ್ಟ್ ಆದೇಶದಂತೆ ಕ್ರಮ ಜರುಗಿಸದ ಅಲ್ಪ ಸಂಖ್ಯಾತ ಇಲಾಖೆ ಅಧಿಕಾರಿಗಳಿಗೆ ಪ್ರಗತಿಪರ ಸಂಘಟನೆಗಳಿಂದ ತರಾಟೆ
Progressive organizations slam minority department officials for not taking action against madrasa that illegally received Rs 10 lakh as per High Court order
ಬೆಂಗಳೂರು,ಫೆ.18: ಜಾಮಿಯ ಮಹಮದ್ದೀಯ ಮನ್ಸೂರ ಶಿಕ್ಷಣ ಸಂಸ್ಥೆಯು ಅಕ್ರಮವಾಗಿ ನಡೆಸುತ್ತಿರುವ ಮದರಸಾಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನೀಡಿರುವ 10 ಲಕ್ಷ ರೂಪಾಯಿ ಅನುದಾನ ವಾಪಸ್ ಪಡೆಯಲು ವಿಫಲವಾಗಿರುವ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯ ಮುಂಭಾಗ ಪ್ರಗತಿಪರ ಸಂಘಟನೆಗಳ ಮುಖಂಡರು ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
ವಿಶ್ವೇಶ್ವರಯ್ಯ ಟವರ್ ನಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಕಚೇರಿಗೆ ತೆರಳಿ ಅಧಿಕಾರಿಗಳ ನಿಷ್ಕಾಳಜಿ ವಿರುದ್ಧ ಹೋರಾಟಗಾರರು.
ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದು,
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನೀಡಿರುವ 10 ಲಕ್ಷ ರೂಪಾಯಿ ಅನುದಾನ ವಾಪಸ್ ಪಡೆಯಬೇಕೆಂದು ಹೈಕೋರ್ಟ್, ಶಿಕ್ಷಣ ಇಲಾಖೆ ಆದೇಶ ನೀಡಿದೆ. ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು
ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಕ್ರಮ ಆಗದಿದ್ದರೆ ಲೋಕಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡುವ ಜೊತೆಗೆ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಸಿದರು.
ನಾಯಂಡಹಳ್ಳಿ ನಿವಾಸಿ ಅಬ್ದುಲ್ ಹಮೀದ್ ಪಾಷ ನೇತೃತ್ವದ ಕನ್ನಡ ಮತ್ತು ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಮಾತನಾಡಿ, ಜಾಮೀಯ ಮಹಮದ್ದೀಯ ಮನ್ಸೂರ, ಅಲ್ ಜಾಮಿಯ ಮಹಮ್ಮದೀಯ, ಸಾಮರ್ ಇಂಟರ್. ಇಸ್ಲಾಮಿಕ್ ನ್ಯಾಷನಲ್ ಮತ್ತಿತರೆ ಹೆಸರಿನಲ್ಲಿ ಶಾಲೆಗಳ ಜೊತೆಗೆ ಕಾನೂನು ಬಾಹಿರವಾಗಿ ಮದರಸ ನಡೆಸುತ್ತಿದ್ದಾರೆ.
2017 – 18 ರಲ್ಲಿ ಈ ಮದರಸಾಗೆ 10 ಲಕ್ಷ ರೂ ಮಂಜೂರಾಗಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಆದೇಶವನ್ನು ಪರಿಪಾಲಿಸಿಲ್ಲ. ಕಾನೂನಿಗೂ ಗೌರವ ನೀಡುತ್ತಿಲ್ಲ.ನಕಲಿ ದಾಖಲೆ ನೀಡಿದವರ ಮೇಲೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ಶಾಲೆಯ ಪ್ರಾಂಶುಪಾಲರಾದ ಖಾಲಿದ್ ಮುಷ್ರಫ್ ವಿರುದ್ಧ ಎಫ್.ಐ.ಆರ್ ಆಗಿದ್ದು, ಆತನನ್ನು ಇನ್ನೂ ಬಂಧಿಸಿಲ್ಲ. ಇದನ್ನು ನೋಡಿದರೆ ಅಧಿಕಾರಿಗಳು ಶಾಮೀಲಾಗಿರುವುದು ಕಂಡು ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…