
ನೈತಿಕ ಪೊಲೀಸ್ ಗಿರಿ ಖಂಡಿಸಿ ಗಂಗಾವತಿಯಲ್ಲಿ ಜ್ವಾಲಾಮುಖಿ ಪ್ರತಿಭಟನೆ”
“ಸುಳ್ಳು ಮೊಕದ್ದಮೆ ಹಿಂಪಡೆಯಿರಿ: ಹಿಂದೂ ಜಾಗರಣ ವೇದಿಕೆಯ ಅಲ್ಟಿಮೇಟಂ”
“ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಮಾನವ ಸರಪಳಿ – ಆರೋಪಿಗಳ ಬಂಧನಕ್ಕೆ ಘೋಷಣೆ”
“ಟೈರ್ ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿದ ಡಿವೈಎಸ್ಪಿ”
Volcanic protest in Gangavathi condemning moral policing"

ಗಂಗಾವತಿ, ಕಳೆದ ದಿನಗಳ ಹಿಂದೆ ಫೆ.03ರಂದು ನಡೆದ ಘಟನೆ.
ಅನ್ಯಕೋಮಿನ ಕುಟುಂಬದ ವೈಯಕ್ತಿಕ ಕಲಹದ ಹಿನ್ನೆಲೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಸಂಭವಿಸಿದ ಘಟನೆಯನ್ನು ಖಂಡಿಸಿ, ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಫೆಬ್ರವರಿ 3ರಂದು ಕೌಟುಂಬಿಕ ಕಲಹದ ಹಿನ್ನೆಲೆ ಊರಿಗೆ ತೆರಳಲು ಮುಂದಾದ ಮಹಿಳೆ ಹಾಗೂ ಮಕ್ಕಳನ್ನು, ಗಂಡನ ಮನವಿಯ ಮೇರೆಗೆ ಕರೆತರುವುದಕ್ಕಾಗಿ ಬಂದಿದ್ದ ವೆಂಕಟೇಶ್ ಎಂಬ ಯುವಕನ ಮೇಲೆ ಕೆಲವರು ಅಪಾರ್ಥ ಮಾಡಿಕೊಂಡು ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಯುವಕ ಮತ್ತು ಅವನ ಕುಟುಂಬದವರ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಮೂಲಕ ಒತ್ತಾಯಿಸಿದರು.
ಪ್ರತಿಭಟನಾಕಾರರು ನಗರದ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಆರೋಪಿಗಳನ್ನು ಬಂಧಿಸಬೇಕು ಎಂದು ಘೋಷಣೆ ಕೂಗಿದರು.
ಈ ವೇಳೆ ಕೆಲವರು ಟೈರಿಗೆ ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ತಡೆಗಟ್ಟಿದರು. ಇದರಿಂದಾಗಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.
ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಜೆ. ಎಸ್. ನ್ಯಾಮಗೌಡರ್ ಅವರು ಪರಿಸ್ಥಿತಿಯನ್ನು ನಿಯಂತ್ರಿಸಿ, ಪ್ರಕರಣದ ಬಗ್ಗೆ ಕೂಲಂಕುಶವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮತ್ತು
ಕಾನೂನು ಕ್ರಮದಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಬಳಿಕ ಪ್ರತಿಭಟನಾಕಾರರು ತಹಸೀಲ್ದಾರರ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಶಿವರಾಮೇಗೌಡ, ಮಾಜಿ ಶಾಸಕ ಪರಣ್ಣ ಮನವಳ್ಳಿ, ಸಮಾಜದ ಅಧ್ಯಕ್ಷ ತಿಪ್ಪಣ್ಣ ಕನಕಪ್ಪ ಮಡಿವಾಳ, ಚಿದಾನಂದಪ್ಪ, ಗುರುರಾಜ, ವಿರುಪಾಕ್ಷಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.




