ಡಾ. ಕೋಲ್ಕಾರ ಪುಸ್ತಕ ಪ್ರಶಸ್ತಿಗೆ ಭಾಜನ
Dr. Kolkara Book Award Winner
ಗಂಗಾವತಿಯ ಕಲ್ಮಠ ಮಹಿಳಾ ಕಾಲೇಜಿನ ಪ್ರಾಚಾರ್ಯ ಹಾಗೂ ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ ಅವರ ಪುಸ್ತಕ ಕಲಬುರ್ಗಿಯ ಕನ್ನಡನಾಡು ಲೇಖಕರ ಮತ್ತು ಓದುಗರ ಸಂಘದ ‘ಸಾಹಿತ್ಯ ಕೃತಿ’ ಪ್ರಶಸ್ತಿಗೆ ಭಾಜನವಾಗಿದೆ. ಸಂಘವು ಪ್ರತಿವರ್ಷ ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಸಾಹಿತಿಗಳ ಆರು ಪುಸ್ತಕಗಳಿಗೆ ಪ್ರಶಸ್ತಿ ನೀಡುತ್ತಾ ಬರುತ್ತಿದೆ. 2025 ರ ಸಾಲಿನಲ್ಲಿ ಸಂಕೀರ್ಣ ಸಾಹಿತ್ಯ ಪ್ರಕಾರದಲ್ಲಿ ಡಾ. ಶರಣಬಸಪ್ಪ ಕೋಲ್ಕಾರ ಅವರ ‘ ಕಲ್ಯಾಣ ಕರ್ನಾಟಕದ ಪ್ರಾಗಿತಿಹಾಸ ಮತ್ತು ಆದಿಮ ಸಂಸ್ಕೃತಿ’ ಎಂಬ ಪುಸ್ತಕ ಪರಿಗಣಿಸಲ್ಪಟ್ಟಿದೆ. ಲೇಖಕರಿಗೆ ಇದೆ ಫೆಬ್ರವರಿ 22 ರಂದು ಕಲಬುರಗಿಯಲ್ಲಿ ಶ್ರೀಮತಿ ಬಸಮ್ಮ ತುಳಜಪ್ಪ ಉಪಳಾಂವಕರ್ ಸ್ಮರಣಾರ್ಥ ಸಾಹಿತ್ಯ ಕೃತಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು. ಮತ್ತು ಪ್ರಶಸ್ತಿಯು ನಗದು ಹಣ ಮತ್ತು ಅಭಿನಂಧನಾ ಪತ್ರ ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷರಾದ ಅಪ್ಪಾರಾವ್ ಅಕ್ಕೊಣೆಯವರು ತಿಳಿಸಿದ್ದಾರೆ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…