ಬಿಸಿಎಂ: ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
BCM: Application deadline for fee refund extended
ಕೊಪ್ಪಳ ಫೆಬ್ರವರಿ 24, (ಕರ್ನಾಟಕ ವಾರ್ತೆ): ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅಲೆಮಾರಿ ವಿದ್ಯಾರ್ಥಿಗಳಿಂದ 2025-26 ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಪೋಷಕರು, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿಯ ಮೇರೆಗೆ ಮಾರ್ಚ್ 5 ರವರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.
B.Arch,M.C.A.M.Ch(Medical), M.D, M.S(Master of Surgery), MS, M.Sc (Allied Sciences), MPT (Physiotherapy), MHA, MASTER OF PUBLIC HEALTH, MPH(Allied Sciences), M.Sc. Nursing, M.Sc, M.Tech, MBA, MBA FINTECH, MBA (LOGISTICS MANAGEMENT), MBBS, MS AYURVEDA, MD (Ayurveda), MD (Hom), MDS, PG DIPLOMA IN DENTAL, Pharm.D(Post Baccalaureate), M.Pharm, B.E, B.Tech, B.Sc. (Hons), B.V.Sc.&A.H. BAMS (Ayurveda), BHMS (Homeopathy), BNYS (Yoga and Naturopathy), BUMS (Unani), BAMS, BDS, M.Arch, B.F.Sc, B.Pharm, Pharm. D, B.Sc (Allied Sciences), BPT (Physiotherapy). BACHELOR OF OCCUPATIONAL THERAPY, B.Des, B.Sc. (Nursing), B.Sc.(Post Basic), B.Ed, B.Plan, DM (Medical), M.Phil, B TECH COMPUTER SCIENCE AND ENGINEERING (FULL STACK DEVELOPMENT), B TECH ELECTRICAL AND ELECTRONICS ENGINEERING (ELECTRIC VEHICLE TECHNOLOGY), Paramedical and all diploma courses ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
https://ssp.postmatric.karnataka.gov.in ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್ ವಿಳಾಸ https://bcwd.karnataka.gov.in ಗೆ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ, ದೂರವಾಣಿ ಸಂಖ್ಯೆ: 8050770004, ಇ-ಮೇಲ್: bcwdhelpline@gmail.com ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ: 1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…