.
ಜಿಟಿಟಿಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
GTTC: Invited applications for the post of Guest Lecturer
ಕೊಪ್ಪಳ ಫೆಬ್ರವರಿ 25, (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ದದೇಗಲ್‌ನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಟಿ.ಡಿ.ಎಮ್, ಡಿ.ಎಮ್.ಸಿ.ಹೆಚ್ ಮತ್ತು ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೊಮಾ ಟೂಲ್ ಮತ್ತು ಡೈ ಮೇಕಿಂಗ್(ಡಿ.ಟಿ.ಡಿ.ಎಮ್), ಪೋಸ್ಟ್ ಡಿಪ್ಲೊಮಾ ಇನ್ ಟೂಲ್ ಡಿಸೈನ್(ಪಿ.ಟಿ.ಡಿ.ಟಿ), ಎಲೆಕ್ಟಾçನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿAಗ್ ಪದವಿ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಮಾರ್ಚ್ 6 ರೊಳಗಾಗಿ ಜಿಟಿಟಿಸಿ ಕೊಪ್ಪಳ ಕಛೇರಿಗೆ ಅರ್ಜಿ ಸಲ್ಲಿಸಬಹುದು ಅಥವಾ ಇ-ಮೇಲ್ ಐಡಿ: gttckoppal@gmail.com ಗೆ ನಿಮ್ಮ ಸ್ವ-ವಿವರವುಳ್ಳ ಬಯೋಡೆಟಾವನ್ನು ಕಳುಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯ ಅಥವಾ ಮೌನೇಶ್, ವಿಭಾಗದ ಮುಖ್ಯಸ್ಥರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರೋಡ್, ದದೇಗಲ್, ಮೊ. ಸಂಖ್ಯೆ-7507094445 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



