ಅಜೀಂ ಪ್ರೇಮ್‌ಜಿ ವಿವಿಯಲ್ಲಿ ಎಬಿವಿಪಿ ದಾಂಧಲೆ: ಬಂಧನಕ್ಕೆ ಎಸ್‌ಎಫ್‌ಐ ಆಗ್ರಹ

ಅಜೀಂ ಪ್ರೇಮ್‌ಜಿ ವಿವಿಯಲ್ಲಿ ಎಬಿವಿಪಿ ದಾಂಧಲೆ: ಬಂಧನಕ್ಕೆ ಎಸ್‌ಎಫ್‌ಐ ಆಗ್ರಹ

ABVP vandalism at Azim Premji University: SFI demands arrest

ವಿಜಯನಗರ (ಹೊಸಪೇಟೆ): ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಎಬಿವಿಪಿ ಗೂಂಡಾಗಳನ್ನು ಬಂಧಿಸುವಂತೆ ಹಾಗೂ ಸೂಕ್ತ ತನಿಖೆ ನಡೆಸುವಂತೆ ಎಸ್ ಎಫ್ ಐ ಒತ್ತಾಯ.

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸರ್ಜಾಪುರ ಬಳಿಯ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ 20 ಜನರ ಎಬಿವಿಪಿ ಗುಂಡಾ ಗುಂಪು ಕ್ಯಾಂಪಸ್‌ಗೆ ಅಕ್ರಮವಾಗಿ ಪ್ರವೇಶ ಮಾಡಿ ವಿಶ್ವ ವಿದ್ಯಾಲಯದ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಖಂಡಿಸುತ್ತದೆ ಹಾಗೂ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಜೊತೆ ಎಸ್ ಎಫ್ ಐ ನಿಲ್ಲುತ್ತದೆ.

ಮಂಗಳವಾರ ಸಂಜೆ ಕಾಶ್ಮೀರದ ಬಗ್ಗೆ ಅನೌಪಚಾರಿಕ ಚರ್ಚೆ ಮಾಡಲು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ತೀರ್ಮಾನಿಸಿರುವುದಾಗಿ ವರದಿಯಾಗಿದೆ. ಆದರೆ ಇದರ ಕುರಿತು ವಿಶ್ವ ವಿದ್ಯಾಲಯದಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ. ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ 20 ಕ್ಕೂ ಹೆಚ್ಚು ಎಬಿವಿಪಿ ಗೂಂಡಾಗಳು ವಿಶ್ವ ವಿದ್ಯಾಲಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ವಿಶ್ವವಿದ್ಯಾಲಯದ ಆಸ್ತಿಗಳನ್ನು ಧ್ವಂಸ ಮಾಡಿ, ಭದ್ರತಾ ಸಿಬ್ಬಂದಿಗಳ ಮೇಲೆ ಮಾತ್ರವಲ್ಲದೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ.

ನಮ್ಮ ಕ್ಯಾಂಪಸ್‌ನಲ್ಲಿ ಹೊರಗಿನ ಜನರ ಗುಂಪೊಂದು ನಡೆಸಿದ ಗದ್ದಲ ಮತ್ತು ಹಿಂಸಾಚಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದು ವಿಶ್ವವಿದ್ಯಾಲಯ ಹೇಳಿಕೆ ಬಿಡುಗಡೆ ಮಾಡಿದೆ ಹಾಗೂ ಈ ವಿಶ್ವವಿದ್ಯಾಲಯದಲ್ಲಿ ಯಾವುದೇ ಕಾರ್ಯಕ್ರಮವು ನಡೆಯಲೇ ಇಲ್ಲ ಸ್ಪಷ್ಟಪಡಿಸಿದೆ.

ಈಗಾಗಲೇ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಆಸ್ತಿಯನ್ನು ಧ್ವಂಸಗೊಳಿಸಿ, ಕ್ಯಾಂಪಸ್‌ಗೆ ನುಗ್ಗಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗೆ ಸೇರಿದ ವಿದ್ಯಾರ್ಥಿಗಳ ಗುಂಪನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿದ್ಯಮಾನಗಳು, ಪ್ರಸ್ತುತ ಆರ್ಥಿಕ, ಸಾಮಾಜಿಕ, ರಾಜಕೀಯ ಚರ್ಚೆ ನಡೆಸುವುದು ಸಾಮಾನ್ಯ
ಇದು ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಮಟ್ಟ ಹೆಚ್ಚಿಸುವುದಕ್ಕೆ ಸಹಾಯವಾಗುತ್ತದೆ. ಇದು ವಿಶ್ವವಿದ್ಯಾಲಯದ ಪ್ರಜಾಪ್ರಭುತ್ವವಾಗಿದೆ. ವಿಶ್ವ ವಿದ್ಯಾಲಯಗಳಲ್ಲಿ ಕ್ಯಾಂಪಸ್ ಡೆಮಾಕ್ರಸಿ ಇರಬೇಕೆಂದು ಎಸ್ ಎಫ್ ಐ ಒತ್ತಾಯಿಸುತ್ತದೆ. ಎಬಿವಿಪಿ ವಿದ್ಯಾರ್ಥಿ ಸಂಘಟನೆ ವಿಶ್ವ ವಿದ್ಯಾಲಯಗಳಲ್ಲಿ ಕೋಮುವಾದವನ್ನು ಉಂಟು ಮಾಡುತ್ತಿದೆ. ಕಾಲೇಜು ಕ್ಯಾಂಪಸ್ ಗಳಲ್ಲಿ, ವಿಶ್ವ ವಿದ್ಯಾಲಯಗಳಲ್ಲಿ ಎಬಿವಿಪಿ ಹಿಂಸೆ, ಪ್ರಚೋದನೆ ಹಾಗೂ ಉದ್ದೇಶ ಪೂರ್ವಕವಾಗಿ ಗಲಭೆಗಳನ್ನು ಸೃಷ್ಟಿಸಿ ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ನಡುವೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದೆ. JNU ಸೇರಿದಂತೆ ದೇಶದ ಹಲವು ವಿಶ್ವ ವಿದ್ಯಾಲಯಗಳಲ್ಲಿ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದನ್ನು ನಾವು ಗಮನಿಸಬಹುದು. ಅದೇ ರೀತಿಯಲ್ಲಿ ರಾಜ್ಯದ ವಿಶ್ವ ವಿದ್ಯಾಲಯಗಳಲ್ಲಿ ಉದ್ದೇಶ ಪೂರ್ವಕವಾಗಿ ವಿದ್ಯಾರ್ಥಿಗಳಿಗೆ ಹಲ್ಲೆ ಹಾಗೂ ಗಲಭೆಗಳನ್ನು ಸೃಷ್ಟಿ ಮಾಡಲು ಮುಂದಾಗಿದೆ. ಆದರಿಂದ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ಮಾಡಿರುವ ಎಬಿವಿಪಿ ಗೂಂಡಾಗಳ ಮೇಲೆ ಪ್ರಕರಣ ದಾಖಲು ಮಾಡಬೇಕು ಹಾಗೂ ತಕ್ಷಣ ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಎಬಿವಿಪಿ ಗುಂಡಾಗಳನ್ನು ಬಂಧಿಸಬೇಕೆಂದು ಹಾಗೂ ಎಬಿವಿಪಿ ಗೂಂಡಾಗಳನ್ನು ಉದ್ದೇಶ ಪೂರ್ವಕವಾಗಿ ನಡೆಸಿರುವ ಈ ಹಲ್ಲೆಯ ಬಗ್ಗೆ ಬಗ್ಗೆ ಸೂಕ್ತ ತನಿಖೆ ಮಾಡಬೇಕೆಂದು ಹಾಗೂ ವಿಶ್ವ ವಿದ್ಯಾಲಯಗಳಲ್ಲಿ ಪ್ರಜಾಪ್ರಭುತ್ವ ( ಕ್ಯಾಂಪಸ್ ಡೆಮಾಕ್ರಸಿ ) ಉಳಿಸಬೇಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್, ವಿಜಯನಗರ ಜಿಲ್ಲೆ ಸಮಿತಿ ಒತ್ತಾಯಿಸುತ್ತದೆ.ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಜಯಸೂರ್ಯ,ಕಾರ್ಯದರ್ಶಿ
ಶಿವಾರೆಡ್ಡಿ,ಜಿಲ್ಲೆ ಜಂಟಿ ಕಾರ್ಯದರ್ಶಿ
ಕೆ.ಎ.ಪವನ ಕುಮಾರ್ ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago