ಬಿಜೆಪಿ ಗಂಗಾವತಿ ನಗರ ಘಟಕದ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೋಗದ ದುರ್ಗಪ್ಪ ನಾಯಕ ಅವರಿಗೆ  ನಾಗರಾಜ್ ಅಂಗಡಿ ಹಾಗೂ ಶ್ರೀ ರಾಘವೇಂದ್ರ ರಾಯಚೂರು ಇವರಿಂದ ಸನ್ಮಾನಿಸಿ ದರು.
Jogada Durgappa Nayaka, who was elected as the Vice President of BJP Gangavathi Urban Unit, was felicitated by Nagaraj Angadi and Shri Raghavendra Raichur.




ಬಿಜೆಪಿ ಗಂಗಾವತಿ ನಗರ ಘಟಕದ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೋಗದ ದುರ್ಗಪ್ಪ ನಾಯಕ ಅವರಿಗೆ  ನಾಗರಾಜ್ ಅಂಗಡಿ ಹಾಗೂ ಶ್ರೀ ರಾಘವೇಂದ್ರ ರಾಯಚೂರು ಇವರಿಂದ ಸನ್ಮಾನಿಸಿ ದರು.

  

ಗಂಗಾವತಿ: ಬಿಜೆಪಿ ಗಂಗಾವತಿ ನಗರ ಘಟಕದ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೋಗದ ದುರ್ಗಪ್ಪ ನಾಯಕ ಇವರಿಗೆ  ನಾಗರಾಜ್ ಅಂಗಡಿ ಹಾಗೂ ಶ್ರೀ ರಾಘವೇಂದ್ರ ರಾಯಚೂರು ಇವರಿಂದ  ಶ್ರೀ ಜೋಗದ ದುರ್ಗಪ್ಪ ಅವರಿಗೆ ಸನ್ಮಾನಿಸಿ ಅಭಿನಂದಿಸಿದರು.

ಈ ಸಂಧರ್ಬದಲ್ಲಿ ರಾಜೇಶ್ ಬಿ, ನಾಗಭೂಷಣ ಸಿರಿಗೇರಿ ಇತರರಿದ್ದರು

 

.

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

Missing person: Request for assistance in finding him/her

ಕೊಪ್ಪಳ ಫೆಬ್ರವರಿ 24, (ಕರ್ನಾಟಕ ವಾರ್ತೆ): ಕುಷ್ಟಗಿ ತಾಲ್ಲೂಕಿನ ಕ್ಯಾದಿಗುಪ್ಪಾ ಗ್ರಾಮದ ನಿವಾಸಿ ಪರಸಪ್ಪ ಸತ್ಯಪ್ಪ ಗೌಂಡಿ ಎಂಬ 30 ವರ್ಷದ ವ್ಯಕ್ತಿಯು 2025 ರ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಕೂಲಿ ಕೆಲಸಕ್ಕೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋಗಿದ್ದು, ವಾಪಸ್ ಮನೆಗೆ ಬಂದಿರುವುದಿಲ್ಲ. ಈ ಬಗ್ಗೆ ಕುಷ್ಟಗಿಯ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.222/2025 ಕಲಂ: ಮನುಷ್ಯ ಕಾಣೆ ಬಿಎನ್‌ಎಸ್–2023 ರ ಅಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ವಿವರ:
ವ್ಯಕ್ತಿಯು 4 ಅಡಿ ಎತ್ತರವಿದ್ದು, ದುಂಡು ಮುಖ, ಕೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದಾಗ ಬಿಳಿಯ ಬಣ್ಣದ ಆಫ್ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ ಮತ್ತು ತೆಲುಗು (ವಡ್ಡರ ಭಾಷೆ) ಭಾಷೆಯನ್ನು ಮಾತನಾಡುತ್ತಾರೆ.
ಮೇಲ್ಕಂಡ ಚಹರೆಯ ವ್ಯಕ್ತಿಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕುಷ್ಟಗಿ ಪೊಲೀಸ್ ಠಾಣೆಗೆ ಮತ್ತು ಕೊಪ್ಪಳ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬಹುದು. ಅಥವಾ ಜಿಲ್ಲಾ ಪೊಲೀಸ್ ಅಧೀಕ್ಷಕರು:  08539-230111, ಗಂಗಾವತಿ ಡಿ.ಎಸ್.ಪಿ:9480803721, ಕುಷ್ಟಗಿ ಸಿ.ಪಿ.ಐ: 9480803732 ಹಾಗೂ ಕುಷ್ಟಗಿ ಪಿ.ಎಸ್.ಐ: 9480803757 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕುಷ್ಟಗಿ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.

ಬಿಸಿಎಂ: ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಿಸಿಎಂ: ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

BCM: Application deadline for fee refund extended

ಕೊಪ್ಪಳ ಫೆಬ್ರವರಿ 24, (ಕರ್ನಾಟಕ ವಾರ್ತೆ): ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅಲೆಮಾರಿ ವಿದ್ಯಾರ್ಥಿಗಳಿಂದ 2025-26 ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಪೋಷಕರು, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿಯ ಮೇರೆಗೆ ಮಾರ್ಚ್ 5 ರವರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.
B.Arch,M.C.A.M.Ch(Medical), M.D, M.S(Master of Surgery), MS, M.Sc (Allied Sciences), MPT (Physiotherapy), MHA, MASTER OF PUBLIC HEALTH, MPH(Allied Sciences), M.Sc. Nursing, M.Sc, M.Tech, MBA, MBA FINTECH, MBA (LOGISTICS MANAGEMENT), MBBS, MS AYURVEDA, MD (Ayurveda), MD (Hom), MDS, PG DIPLOMA IN DENTAL, Pharm.D(Post Baccalaureate), M.Pharm, B.E, B.Tech, B.Sc. (Hons), B.V.Sc.&A.H. BAMS (Ayurveda), BHMS (Homeopathy), BNYS (Yoga and Naturopathy), BUMS (Unani), BAMS, BDS, M.Arch, B.F.Sc, B.Pharm, Pharm. D, B.Sc (Allied Sciences), BPT (Physiotherapy). BACHELOR OF OCCUPATIONAL THERAPY, B.Des, B.Sc. (Nursing), B.Sc.(Post Basic), B.Ed, B.Plan, DM (Medical), M.Phil, B TECH COMPUTER SCIENCE AND ENGINEERING (FULL STACK DEVELOPMENT), B TECH ELECTRICAL AND ELECTRONICS ENGINEERING (ELECTRIC VEHICLE TECHNOLOGY), Paramedical and all diploma courses ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
https://ssp.postmatric.karnataka.gov.in     ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್ ವಿಳಾಸ   https://bcwd.karnataka.gov.in     ಗೆ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ, ದೂರವಾಣಿ ಸಂಖ್ಯೆ: 8050770004, ಇ-ಮೇಲ್:   bcwdhelpline@gmail.com     ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್:    postmatrichelp@karnataka.gov.in     ದೂರವಾಣಿ ಸಂಖ್ಯೆ: 1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನಧಿಕೃತ ರೆಸಾರ್ಟ್ಗಳ ವಿರುದ್ಧ ಕ್ರಮ ಜರುಗಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ

ಅನಧಿಕೃತ ರೆಸಾರ್ಟ್ಗಳ ವಿರುದ್ಧ ಕ್ರಮ ಜರುಗಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ

Action taken against unauthorized resorts: Deputy Commissioner Dr. Suresh B. Itnal




ಕೊಪ್ಪಳ ಫೆಬ್ರವರಿ 24, (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿರುವ ಅನಧಿಕೃತ ರೆಸಾರ್ಟ್ಗಳ ವಿರುದ್ಧ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯಲ್ಲಿರುವ ಅನಧಿಕೃತ ರೆಸಾರ್ಟ್ ಮತ್ತು ಹೋಂಸ್ಟೇಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಗಾಗಲೇ ಎಫ್‌ಐಆರ್ ಆದ ರೆಸಾರ್ಟ್ಗಳ ಟ್ರೇಡ್ ಲೈಸೆನ್ಸ್ ರದ್ದುಪಡಿಸಿ ಇತರೆ ಕ್ರಮಗಳನ್ನು ಜರುಗಿಸಬೇಕು. ಪ್ರತಿಯೊಂದಕ್ಕೂ ನಾನೇ ಕರೆದು ತಮಗೆ ಹೇಳಬೇಕಾ, ಹಾಗಾದರೆ ತಮ್ಮ ಜವಾಬ್ದಾರಿ ಏನು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಮ್ಮ ಇಲಾಖೆಗಳಿಗೆ ಸಂಬAಧಿಸಿದ ಕೆಲಸವನ್ನು ಜವಾಬ್ದಾರಿಯಿಂದ ತಾವು ನಿರ್ವಹಿಸಬೇಕು. ಸರ್ಕಾರದ ನಿಯಮಗಳನ್ವಯ ಅಗತ್ಯ ದಾಖಲೆಗಳನ್ನು ಪರಿಶೀಲಿಸದೆ ಹೋಂಸ್ಟೇ ಮತ್ತು ರೆಸಾರ್ಟ್ಗಳಿಗೆ ಕಟ್ಟಡ ಪರವಾನಗಿ ನೀಡಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು.
ಪರಿಸರ ಸೂಕ್ಷö್ಮ ವಲಯದ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ರೆಸಾರ್ಟ್ ಹಾಗೂ ಹೋಂಸ್ಟೇಗಳು ಇರುವ ಹಾಗಿಲ್ಲ.  ಈ ಕುರಿತು ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸರ್ವೆ ಕಾರ್ಯ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಅನಧಿಕೃತ ಮದ್ಯ ಮಾರಾಟ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದರೆ ತಕ್ಷಣ ಅವುಗಳಿಗೆ ಸಂಬAಧಿಸಿದ ಇಲಾಖೆಯವರು ಕಡಿವಾಣ ಹಾಕಬೇಕು. ಹವಾಮಾ ವ್ಯಾಪ್ತಿಯಲ್ಲಿ ಯಾವುದೇ ರೆಸಾರ್ಟ್ಗಳಿಗೆ ಅನುಮತಿ ನೀಡಲು ಬರುವುದಿಲ್ಲ. ಈ ಕುರಿತು ಅಧಿಕಾರಿಗಳು ಗಮನಹರಿಸಬೇಕು. ಹಂಪಿ ಕೆಫೆ, ರಾಖಿ ಮಿಡೋಸ್ ರೆಸಾರ್ಟ್  ಸೇರಿದಂತೆ ಇತರೆ ನಿಯಮ ಉಲ್ಲಂಘನೆ ಮಾಡಿದ ರೆಸಾರ್ಟ್ಗಳ ಟ್ರೇಡ್ ಲೈಸೆನ್ಸ್ ಕ್ಯಾನ್ಸಲ್ ಆಗಿರುವ ಕುರಿತು ಮಾಹಿತಿ ನೀಡಿ ಎಂದರು.  ಉಪಲೋಕಾಯುಕ್ತರು ದಾಖಲಿಸಿದ ಸೊಮೊಟೊ ಪ್ರಕರಣಗಳ ಕಂಪ್ಲೆöÊಯನ್ಸ್ ರಿಪೋರ್ಟ್ಗಳನ್ನು ಕೊಡಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಕೆಲಸ ಕೇವಲ ಪೇಪರ್‌ನಲ್ಲಿ ಆಗಬಾರದು. ಗ್ರೌಂಡ್ ಲೇವಲ್‌ನಲ್ಲಿ  ಕೆಲಸ  ಆಗಬೇಕು. ಟ್ರೇಡ್ ಲೈಸೆನ್ಸ್ ರದ್ದಾದ ಮೇಲೆ ಅವುಗಳನ್ನು ಮುಚ್ಚುವ ಕೆಲಸ ಆಗಬೇಕು. ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪಿಡಿಓಗಳು ಏನು ಮಾಡುತ್ತಿದ್ದೀರಾ, ಈ ಕುರಿತು ಗಮನ ಹರಿಸುತ್ತಿರಬೇಕು. ಸಭೆಗೆ ಬಂದಾಗ ಮಾತ್ರವೇ ಕೆಲಸ ಮಾಡಿದಹಾಗೆ ಹೇಳಬಾರದು  ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, ಅಧಿಕಾರಿಗಳು ಯಾವುದೇ  ಅನುಮತಿ ನೀಡುವ ಮುಂಚೆ ಎಲ್ಲವನ್ನೂ ಪರಿಶೀಲನೆ ಮಾಡಿ ಕೊಡಬೇಕು. ಇಲ್ಲವಾದರೆ ಕಾನೂನು ಸಮಸ್ಯೆ ಆಗುತ್ತವೆ. ನಮ್ಮ ಪೊಲೀಸರು ಕೇಳಿದಾಗ ಅವರು ಆ ಅನುಮತಿ ಪಡೆದಿದ್ದೇವೆ, ಇದು ಪಡೆದಿದ್ದೇವೆ ಎಂದು ರೆಸಾರ್ಟ್ನವರು ನಮ್ಮ ಪೊಲೀಸರಿಗೆ ಹೇಳುತ್ತಾರೆ. ಮೊನ್ನೆ ಮುನಿರಾಬಾದನಲ್ಲಿ ಘಟನೆಯಾದ ನಂತರ ಗಂಗಾವತಿ ಮತ್ತು ಸಾಣಾಪುರದಲ್ಲಿ ನಮ್ಮ ಪೊಲೀಸರನ್ನು ಗಸ್ತಿಗೆ ನಿಯೋಜಿಸಲಾಗಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಸಹಾಯಕ ಆಯುಕ್ತರಾದ ಕ್ಯಾ. ಮಹೇಶ ಮಾಲಗಿತ್ತಿ. ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಓ ಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಆಚಾರ್ಯ ಪಾಠಶಾಲಾ ಎಜುಕೇಶನಲ್ ಟ್ರಸ್ಟ್ನಲ್ಲಿ ಸದಸ್ಯರ ದಿನಾಚರಣೆ : 21 ಸಾಧಕರಿಗೆ ಸನ್ಮಾನ




ಆಚಾರ್ಯ ಪಾಠಶಾಲಾ ಎಜುಕೇಶನಲ್ ಟ್ರಸ್ಟ್
ನಲ್ಲಿ ಸದಸ್ಯರ ದಿನಾಚರಣೆ : 21 ಸಾಧಕರಿಗೆ ಸನ್ಮಾನ

Members' Day celebration at Acharya Pathashala Educational Trust: 21 achievers honored

ಬೆಂಗಳೂರು: ಆಚಾರ್ಯ ಪಾಠಶಾಲಾ ಎಜುಕೇಶನಲ್ ಟ್ರಸ್ಟ್ ನಿಂದ 75 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ 21 ಅಜೀವ ಸದಸ್ಯರನ್ನು ಸನ್ಮಾನಿಸಲಾಯಿತು.

ಪ್ರೊ. ಎನ್. ಅನಂತಾಚಾರ್ ಸಭಾಂಗಣದಲ್ಲಿ ಸದಸ್ಯರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಳೆದ 1935ರಲ್ಲಿ ಪ್ರೊ. ಎನ್. ಅನಂತಾಚಾರ್ ಅವರಿಂದ ಸ್ಥಾಪಿತವಾದ ಆಚಾರ್ಯ ಪಾಠಶಾಲಾ ಎಜುಕೇಶನಲ್ ಟ್ರಸ್ಟ್, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ, ವಿಶೇಷವಾಗಿ ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಮಹೋನ್ನತ ಧ್ಯೇಯದೊಂದಿಗೆ ಆರಂಭವಾಯಿತು. 9 ದಶಕಗಳಿಗಿಂತ ಹೆಚ್ಚು ಕಾಲದಿಂದ ಟ್ರಸ್ಟ್ ಸಮಾನ ಶಿಕ್ಷಣದ ದೀಪಸ್ತಂಭವಾಗಿ ಅನೇಕ ತಲೆಮಾರುಗಳ ಭವಿಷ್ಯವನ್ನು ರೂಪಿಸುತ್ತಾ ಬಂದಿದೆ.
ಇದೇ ಮೊದಲ ಬಾರಿಗೆ ಎಪಿಎಸ್ ಸದಸ್ಯರ ದಿನವನ್ನು ವಿಶೇಷವಾಗಿ ಆಚರಿಸಿತು. ಸಂಸ್ಥೆಯ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅವರು ಸಲ್ಲಿಸಿದ ಅಮೂಲ್ಯ ಸೇವೆ, ನಿಷ್ಠೆ ಮತ್ತು ಜೀವನಪರ್ಯಂತದ ಬದ್ಧತೆಯನ್ನು ಗೌರವಿಸಲಾಯಿತು. ಕೃತಜ್ಞತೆಯ ಸಂಕೇತವಾಗಿ ಹಿರಿಯ ಸದಸ್ಯರಿಗೆ ಅವರ ಆರೋಗ್ಯ ಮತ್ತು ಆರಾಮಕ್ಕಾಗಿ ಉಪಯುಕ್ತವಾದ ವಸ್ತುಗಳ ಜೊತೆಗೆ ಸ್ಮರಣಿಕೆಗಳನ್ನು ಶಾಸಕ ಹಾಗೂ ಹಳೆಯ ವಿದ್ಯಾರ್ಥಿ ಎಲ್. ಎ. ರವಿ ಸುಬ್ರಹ್ಮಣ್ಯ ನೀಡಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಒಂಬತ್ತು ದಶಕಗಳಿಗಿಂತ ಹೆಚ್ಚು ಕಾಲ ಎಪಿಎಸ್ ಶಿಕ್ಷಣ ಸಂಸ್ಥೆಯ ಮಹತ್ವದ ಪಯಣವನ್ನು ಶ್ಲಾಘಿಸಿದರು. ಜವಾಬ್ದಾರಿಯುತ ನಾಗರಿಕರು ಹಾಗೂ ನಾಯಕತ್ವವನ್ನು ರೂಪಿಸುವಲ್ಲಿ ಸಂಸ್ಥೆಯು ಮಹತ್ತರ ಪಾತ್ರ ವಹಿಸಿದೆ ಎಂದು ಅವರು ಹೇಳಿದರು.

ಸಂಸ್ಥೆಯ ಅಧ್ಯಕ್ಷರಾದ ಡಾ. ಸಿ.ಎ ವಿಷ್ಣು ಭರತ್ ಅಲಪಲ್ಲಿ ಅವರು “ನಡೆದು ಬಂದ ಹಾದಿ” ಎಂಬ ವಿಶೇಷ ವೀಡಿಯೊವನ್ನು ಪ್ರದರ್ಶಿಸಿದರು. ಈ ಪ್ರಸ್ತುತಿಯಲ್ಲಿ ಶಿಕ್ಷಣ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಆಚಾರ್ಯ ಪಾಠಶಾಲಾ ಎಜುಕೇಶನಲ್ ಟ್ರಸ್ಟ್ ಸಾಧಿಸಿದ ಮೈಲುಗಲ್ಲುಗಳು ಮತ್ತು ಅಭಿವೃದ್ಧಿ ಚಟುವಟಿಕೆಗಳ ಪ್ರತಿಬಿಂಬವನ್ನು ಮನಮೋಹಕವಾಗಿ ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಎ.ಪಿ.ಆಚಾರ್ಯ, ಎ.ಆರ್.ಆಚಾರ್ಯ, ಪಿ. ಕೃಷ್ಣ ಸ್ವಾಮಿ, ಪ್ರೊ.ಕೆ.ಪಿ.ನರಸಿಂಹಮೂರ್ತಿ, ವಿ.ಕೆ.ಪ್ರಹ್ಲಾದ ರಾವ್. ವತ್ಸಲ ಡಾ.ಎಸ್.ಸಿ.ಚಂದ್ರ, ಎಲ್.ಸಿದ್ಧರಾಜು, ಎಸ್.ಪಿ.ಶಂಕರ್, ಎನ್.ಭಾಸ್ಕರ್ ಮಾನೆ, ಡಾ.ಶೈಲಜ ಆಳ್ವ, ಪಿ.ಎಸ್.ನಂದಕುಮಾರ್, ಎಸ್.ಎಂ.ಸತ್ಯನಾರಾಯಣ, ಹೆಚ್.ವಿ.ಗೌತಮ್ ಡಾ.ಜೈಪ್ರಕಾಶ್ ಆಳ್ವ, ಟಿ.ವಿ. ಪ್ರಭು, ಸಿ.ನಾಗರಾಜ್, ಎಲ್. ಬಿಂದುಮಾಧವ ಅವರನ್ನು ಸನ್ಮಾನಿಸಲಾಯಿತು.

ಹಿಂದೂ ಮುಸ್ಲಿಂ ಸ್ವಾಮರಸ್ಯ ಸಾರುವ ಹನೂರು ನಾಡ ದೇವತೆ ಬೆಟ್ಟಳ್ಳಿ ಮಾರಮ್ಮನ ಜಾತ್ರೆಗೆ ಸಾರಣೆ

ಹಿಂದೂ ಮುಸ್ಲಿಂ ಸ್ವಾಮರಸ್ಯ ಸಾರುವ ಹನೂರು ನಾಡ ದೇವತೆ ಬೆಟ್ಟಳ್ಳಿ ಮಾರಮ್ಮನ ಜಾತ್ರೆಗೆ ಸಾರಣೆ .‌

Announcement for the Bettalli Maramma fair, a Hindu-Muslim goddess of Hanur Nadu who preaches Hindu-Muslim harmony


ವರದಿ : ಬಂಗಾರಪ್ಪ .ಸಿ .


ಹನೂರು :ಪ್ರತಿ ವರ್ಷದಂತೆ ಈ ವರ್ಷವು ಹನೂರು ಪಟ್ಟಣದ ಗ್ರಾಮ ದೇವತೆಯಾದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದೆ , ಕಳೆದ ನೂರಾರು ವರ್ಷಗಳಿಂದ ಎಲ್ಲಾ ಸಮುದಾಯದವರು ಜಾತ್ರಾ ಮಹೋತ್ಸದ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದಿರ ಮುಂದೆಯು ನೀಡಬೇಕೆಂದು ಪಟ್ಟಣದ ಹಿರಿಯ ಮುಖಂಡರಾದ ಲಿಂಗರಾಜುಗೌಡರು ಸಭೆಯಲ್ಲಿ ಮನವಿ ಮಾಡಿದರು.

ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನ ಜಾತ್ರಾ ಮಹೋತ್ಸವ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಅವರು ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ಪಟ್ಟಣದಲ್ಲಿರುವ ಪ್ರತಿಯೊಂದು ಸಮುದಾಯದವರು ಬಹಳ ಅಚ್ಚುಕಟ್ಟಾಗಿ ನೆರವೇರಿಸಿ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದೇವೆ. ಅದೇ ರೀತಿಯಲ್ಲಿ ಇಂದು ಅಧಿಕೃತವಾಗಿ ಹಬ್ಬಕ್ಕೆ ಚಾಲನೆ ನೀಡುವ ದಿನದಂದು ಎಲ್ಲಾ ಸಮುದಾಯದ ಮುಖಂಡರನ್ನು ಕರೆದು ಹಬ್ಬಕ್ಕೆ ಚಾಲನೆ ನೀಡುವುದು ವಾಡಿಕೆ ಅದರಂತೆ ಎಲ್ಲರ ಅಭಿಪ್ರಾಯದಂತೆ ಈ ವರ್ಷ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ನಡೆಸಲು ಪ್ರತಿಯೊಬ್ಬರ ಸಹಕಾರವು ನಮಗೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಹಾಜರಿದ್ದ ಆರ್ಯವೈಶ್ಯ ಸಮುದಾಯದ ಮುಖಂಡರಾದ ಜಯಪ್ರಕಾಶ್ ಗುಪ್ತ ಮಾತನಾಡಿ ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ದೇವಸ್ಥಾನಗಳ ಪೈಕಿ ಪ್ರತಿಯೊಂದು ಸಮುದಾಯದವರು ಒಂದೊಂದು ದೇವಸ್ಥಾನದ ನಿರ್ವಹಣೆ ಮಾಡುತ್ತಿದ್ದಾರೆ ಅದರಂತೆ ಒಕ್ಕಲಿಗ ಸಮುದಾಯದವರು ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಪ್ರತಿ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪ್ರತಿಯೊಬ್ಬ ಸಮುದಾಯದವರು ಪಾಲ್ಗೊಳ್ಳುತ್ತಿದ್ದಾರೆ ಅದರಂತೆ ಈ ಬಾರಿಯೂ ಜಾತ್ರಾ ಮಹೋತ್ಸವಕ್ಕೆ ನಮ್ಮೆಲ್ಲರ ಸಹಕಾರ ಇರುತ್ತದೆ ಎಂದರು.
ನಂತರ
ಮೊದಲಿಯಾರ್ ಸಮಾಜದ ಮುಖಂಡ ನಟರಾಜ್ ಮಾತನಾಡಿ ಹನೂರು ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುತ್ತಿದ್ದೇವೆ, ಹಲವಾರು ವರ್ಷಗಳ ಹಿಂದೆ ಒಂದು ಸಮುದಾಯದವರು ಹಬ್ಬಕ್ಕೆ ಚಾಲನೆ ನೀಡಲು ಬಾರದಿದ್ದಾಗ ನಮ್ಮ ತಂದೆಯವರೇ ಹಬ್ಬಕ್ಕೆ ಗ್ರಾಮದಲ್ಲೆಲ್ಲ ಹೋಗಿ ಚಾಲನೆ ನೀಡಿದ್ದರು, ಯಾರೋ ಅವರ ವೈಯಕ್ತಿಕ ಹಿತಾಸಕ್ತಿಗಾಗಿ ಬೇರೆ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣ ಮಾಡಿದರೆ ಅಲ್ಲಿ ಹೋಗಿ ಜಾತ್ರೆ ಮಾಡಲು ಸಾಧ್ಯವೇ ನಮ್ಮ ಆಚಾರ ವಿಚಾರ ಸಂಸ್ಕೃತಿಯಂತೆ ನಮ್ಮ ಗ್ರಾಮದಲ್ಲಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸೋಣ ಎಂದರು.
ಮಡಿವಾಳ ಸಮುದಾಯದ ಜಿಲ್ಲಾ ಉಪಾಧ್ಯಕ್ಷರಾದ ಮುಖಂಡ ವಿಜಯ್ ಕುಮಾರ್ ಮಾತನಾಡಿ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದಲ್ಲಿ ನಮ್ಮ ಸಮುದಾಯದವರು ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಅದರಂತೆ ಈ ಬಾರಿಯ ಜಾತ್ರಾ ಮಹೋತ್ಸವದಲ್ಲೂ ನಮ್ಮ ಸೇವೆಯನ್ನು ಮುಂದುವರಿಸಿ ಜಾತ್ರೆಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕುರುಬ ಸಮುದಾಯದ ಮುಖಂಡ ಮಲ್ಲು ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ನಮ್ಮ ಸಮುದಾಯದ ವತಿಯಿಂದ ಜಾತ್ರಾ ಮಹೋತ್ಸವಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಉಪ್ಪಾರ ಸಮುದಾಯದ ಮುಖಂಡ ಮುದ್ದುಗಾಮ ಶೆಟ್ಟಿ ಮಾತನಾಡಿ ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು ಆರ್ ಎಸ್ ದೊಡ್ಡಿ ಹಾಗೂ ಹನೂರು ಪಟ್ಟಣದ ಎಲ್ಲಾ ಸಮುದಾಯದವರು ಒಗ್ಗಟ್ಟಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುತ್ತಿದ್ದೇವೆ. ಅದರಂತೆ ಈ ಬಾರಿಯೂ ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡೋಣ ಎಂದು ಸಲಹೆ ನೀಡಿದರು.

ನಂತರ ಎಲ್ಲಾ ಸಮುದಾಯದವರ ಒಮ್ಮತದ ಅಭಿಪ್ರಾಯದಂತೆ ಪಟ್ಟಣದ ಬನ್ನಿಮರ ಬೀದಿಯ ರಂಗಸ್ವಾಮಿ ಎಂಬುವವರು ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ಪೂರ್ವಭಾವಿ
ಸಭೆಯಲ್ಲಿ ಕಮ್ಮವಾರು ಸಮುದಾಯದ ಅಧ್ಯಕ್ಷ ದಿನಮಣಿ ಮುಖಂಡರಾದ ರಮೇಶ್ ನಾಯ್ಡು, ಬಾಲರಾಜ್ ನಾಯ್ಡು, ಬಾಲಸುಂದರ, ಆದಿಜಾಂಬವ ಸಮುದಾಯದ ಯಜಮಾನರಾದ ಮಹದೇವ ಸೋಮಣ್ಣ ಪ್ರದೀಪ್ ಸಚಿನ್, ಮುಸ್ಲಿಂ ಸಮುದಾಯದ ಮುನಾವರ್ ಪಾಷ, ಸಮಿವುಲ್ಲಾ, ಆರ್ಯವೈಶ್ಯ ಸಮುದಾಯದ ರಾಜೇಂದ್ರ ಗುಪ್ತ ಗಾಣಿಗ ಸಮುದಾಯದ ಮುಖಂಡ ಮಣಿ ದೇವಾಂಗ ಸಮುದಾಯದ ಮುಖಂಡರಾದ ರಂಗಸ್ವಾಮಿ ರಾಜು ಬಣಜಿಗ ಸಮುದಾಯದ ತಾಲೂಕು ಅಧ್ಯಕ್ಷ ಪ್ರಸನ್ನ ವೀರಶೈವ ಮುಖಂಡರಾದ ನಂಜುಂಡಸ್ವಾಮಿ ವೀರಭದ್ರ ಮಲ್ಲೇಶ್ ಶಿವಲಿಂಗಪ್ಪ ಕುಮಾರ್ ಮರಾಠ ಸಮುದಾಯದ ಬಾಬು ವಿಶ್ವಕರ್ಮ ಸಮುದಾಯದ ತಮ್ಮಯ್ಯ ಚಾರಿ, ಪುಟ್ಟಸ್ವಾಮಿ ನಾಗಾಚಾರಿ ಮುತ್ತುರಾಜು, ಮಡಿವಾಳ ಸಮುದಾಯದ ಮುಖಂಡರಾದ ರಮೇಶ್ ವಿಜಯ್ ಕುಮಾರ್ ಕೃಷ್ಣಮೂರ್ತಿ ಸವಿತಾ ಸಮಾಜದ ಮುಖಂಡ ರಾಜು, ಉಪ್ಪಾರ ಸಮುದಾಯದ ರಂಗಸ್ವಾಮಿ ಕಾಮಶೆಟ್ಟಿ ಬಸವರಾಜು ಜೈ ರಾಜು ಮಹದೇವ ಶೆಟ್ಟಿ ಕುರುಬ ಸಮುದಾಯದ ಮುಖಂಡರಾದ ಮಲ್ಲು ಅನಂತು ನಾಗಣ್ಣ ನಾಗೇಶ್ ಪುಟ್ಟಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಅಲ್ಪಸಂಖ್ಯಾತ ಯುವಕರಿಗೆ ಉಚಿತ ಲಘು / ಭಾರೀ ವಾಹನ ಚಾಲನಾ ತರಬೇತಿ – ಮಾರ್ಚ್ 23ರಿಂದ ಆರಂಭ

ಅಲ್ಪಸಂಖ್ಯಾತ ಯುವಕರಿಗೆ ಉಚಿತ ಲಘು / ಭಾರೀ ವಾಹನ ಚಾಲನಾ ತರಬೇತಿ – ಮಾರ್ಚ್ 23ರಿಂದ ಆರಂಭ

Free light/heavy vehicle driving training for minority youth – starting from March 23

ಗಂಗಾವತಿ: ಅಲ್ಪಸಂಖ್ಯಾತ ಸಮುದಾಯದ ಯುವಕ / ಯುವತಿಯರಿಗೆ ಉಚಿತ ಲಘು ಹಾಗೂ ಭಾರೀ ವಾಹನ ಚಾಲನಾ ತರಬೇತಿ ಮತ್ತು ಚಾಲನಾ ಪರವಾನಗಿ ವಿತರಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ.

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪಿ.ಎಂ. ಅಜಯ್ ಯೋಜನೆಯಡಿ ಪರಿಶಿಷ್ಟ ಜಾತಿಯ 500 ಫಲಾನುಭವಿಗಳಿಗೆ ಭಾರೀ ವಾಹನ ಚಾಲನಾ ತರಬೇತಿ ನೀಡುವ ಕಾರ್ಯ ಈಗಾಗಲೇ ನಿಗಮದ ತರಬೇತಿ ಕೇಂದ್ರಗಳಲ್ಲಿ ಪ್ರಗತಿಯಲ್ಲಿದ್ದು, ಸಾರಿಗೆ ಇಲಾಖೆಯಿಂದ ಪರವಾನಗಿ ನೀಡಲಾಗುತ್ತಿದೆ. ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಹಿನ್ನೆಲೆ, ಅಲ್ಪಸಂಖ್ಯಾತ ನಿರ್ದೇಶನಾಲಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಹಾಗೂ ಪಾರ್ಸಿ) ಅಭ್ಯರ್ಥಿಗಳಿಗೂ ಉಚಿತ ಲಘು / ಭಾರೀ ವಾಹನ ಚಾಲನಾ ತರಬೇತಿ ನೀಡಲು ನಿರ್ಧರಿಸಲಾಗಿದೆ. ತರಬೇತಿ ದಿನಾಂಕ 23/03/2026ರಿಂದ ಪ್ರಾರಂಭವಾಗಲಿದೆ ಎಂದು ತಿಳಿಸಲಾಗಿದೆ.

ಅರ್ಹತೆ:

18 ವರ್ಷ ಮೇಲ್ಪಟ್ಟು 45 ವರ್ಷ ಒಳಗಿನವರು

ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು

ಒಂದು ತಿಂಗಳ ಅವಧಿಯ ತರಬೇತಿ

ಉಚಿತ ವಸತಿ ಮತ್ತು ಊಟ ವ್ಯವಸ್ಥೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
7760990133, 7019637406, 9902863142, 7349103222
7760990277, 7619343405, 9663266889, 8904045818, 9686684655
7019072560, 9740027655, 9380403676

ಸಾರಿಗೆ ಇಲಾಖೆ (RTO) ಸಹಯೋಗದಲ್ಲಿ ತರಬೇತಿ ಪೂರ್ಣಗೊಳಿಸಿದವರಿಗೆ ಉಚಿತ ಚಾಲನಾ ಪರವಾನಗಿ ನೀಡಲಾಗುತ್ತದೆ.
ಅರ್ಹ ಯುವಕ / ಯುವತಿಯರು ತಮ್ಮ ಹತ್ತಿರದ ತರಬೇತಿ ಕೇಂದ್ರದಲ್ಲಿ ನೇರವಾಗಿ ಅಥವಾ ksrtcjobs.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.

ಅರ್ಹರು ಹೆಚ್ಚಿನ ಸಂಖ್ಯೆಯಲ್ಲಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಶ್ರದ್ಧೆ ಭಕ್ತಿಯಿಂದ ಜರುಗಿದ ಶ್ರೀ ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಮಹೋತ್ಸವ.

ಶ್ರದ್ಧೆ ಭಕ್ತಿಯಿಂದ ಜರುಗಿದ ಶ್ರೀ ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಮಹೋತ್ಸವ.

The birthday celebration of Sri Raghavendra Swami was celebrated with devotion and devotion.





ಗಂಗಾವತಿ:  ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರದಂದು ಗುರು ಸಾರ್ವಭೌಮ ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳವರ 431ನೆಯ ವರ್ಧಂತಿ ಮಹೋತ್ಸವ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ದೆ ಭಕ್ತಿಯಿಂದ ಜರುಗಿತು.
. ಈ ಸಂದರ್ಭದಲ್ಲಿ ರಾಯರ ಬೃಂದಾವನಕ್ಕೆ ಶ್ರೀ ವೆಂಕಟೇಶ್ವರ ಸ್ವಾಮಿಯ ಅಲಂಕಾರ ಭಕ್ತಾದಿಗಳ ಮನದಲ್ಲಿ ಭಕ್ತಿ ಭಾವ ಮೂಡಿಸುವಲ್ಲಿ ಸಫಲತೆಗೊಂಡಿತು. ವರ್ಧಂತಿ ಮಹೋತ್ಸವದ ಅಂಗವಾಗಿ ಕಳೆದ 18ನೇ ಫೆಬ್ರುವರಿಯಿಂದ ಜರುಗಿದ ಮೈಸೂರು ಡಾಕ್ಟರ್ ವಿಜಯೇಂದ್ರ ಆಚಾರ್ ಅವರ ಶ್ರೀಮದ್ ಭಾಗವತ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಹಿಮೆ ಪ್ರವಚನ ಕಾರ್ಯಕ್ರಮ ಮಂಗಳ ಗೊಂಡಿತು. ವೇದ ಉಪನಿಷತ್ತುಗಳ ಸಾರವೆನಿಸಿದ ಸಾವಿರಾರು ವರ್ಷಗಳ ಕಾಲ ತಪಸ್ಸು ಮಾಡಿ ದೊರೆಯುವ ಪುಣ್ಯವೂ ಭಾಗವತ ಪ್ರವಚನ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಿಮೆ ಆಲಿಸುವುದರಿಂದ ಸಮಸ್ತ ಪಾಪ ಕರ್ಮಗಳು ದೂರವಾಗುವುದು ಎಂದು ತಮ್ಮ ಪ್ರವಚನದಲ್ಲಿ ತಿಳಿಸಿದರು ಈ ಸಂದರ್ಭದಲ್ಲಿ ಎಂದಿನಂತೆ ರಾಯರ ಬೃಂದಾವನಕ್ಕೆ ಕ್ಷೀರಭಿಷೇಕ ಪಂಚಾಮೃತ ಅಭಿಷೇಕ ಭಜನೆ ಪಾರಾಯಣ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಶ್ರೀಮಠದ ಅರ್ಚಕ ಭೀಮಸೇನಾಚಾರ್ಯ. ವ್ಯವಸ್ಥಾಪಕ ಗುರುರಾಜ ಆಚಾರ್ಯ ಸಾಮವೇದಿ. ರಾಮಕೃಷ್ಣ ಜಾಗೀರದಾರ್ ಅಪ್ಪಣ್ಣ ದೇಶಪಾಂಡೆ ರಾಘವೇಂದ್ರ ಶ್ರೀನಿವಾಸ್ ದಾಸ್ನಾಳ್ ಅರುಣ ಅಯೋಧ್ಯ ಉದಯ ಜಾಗೀರ್ದಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಬಳಿಕ ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು…

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ- ಸಚಿವ ಶಿವರಾಜ ಎಸ್. ತಂಗಡಗಿ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ- ಸಚಿವ ಶಿವರಾಜ ಎಸ್. ತಂಗಡಗಿ





Ensure that there are no drinking water problems in the district - Minister Shivraj S. Thangadgi

ಕೊಪ್ಪಳ:. ಫೆಬ್ರವರಿ. 23.(ಕರ್ನಾಟಕ ವಾರ್ತೆ):- ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.
 ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಅಮೃತ 2.0 ಯೋಜನಾ ಕಾಮಗಾರಿಗಳ ಪ್ರಗತಿ ಮತ್ತು ಜಲಜೀವನ ಮಿಷನ್ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
 ಜಿಲ್ಲೆಯ 7 ತಾಲ್ಲೂಕಿನಲ್ಲಿ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಲು ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು. ಜೆಇಗಳು. ಎ. ಡಬ್ಲೂಗಳು ತಮ್ಮ ವ್ಯಾಪ್ತಿಯ ಪಂಚಾಯತಿ- ಪಂಚಾಯತಿಯ ಎಲ್ಲಾ ಕಡೆ ಭೇಟಿ ನೀಡಿ ಎಲ್ಲಿ ನೀರಿನ ಸಮಸ್ಯೆಗಳಾಗಬಹುದು ಎನ್ನುವ ಕುರಿತು ಮುಂಚಿತವಾಗಿ ಮಾಹಿತಿ ಪಡೆಯಬೇಕು. ಸಮಸ್ಯೆಗಳಾದರೆ ಜನ ನಮಗೆ ಕರೆ ಮಾಡುತ್ತಾರೆ ಹಾಗಾಗಿ ಜಿಲ್ಲೆಯ ಯಾವ ಒಂದು ಊರಿನಲ್ಲಿ ನೀರಿನ ಸಮಸ್ಯೆಯಾಗಬಾರದು ಎಂದು ಹೇಳಿದರು.
 ಯಾವ ತಾಲೂಕಿನಲ್ಲಿ ನೀರಿನ ಸಮಸ್ಯೆಯಾಗಬಹುದೆಂದು ಗುರುತಿಸಿ ಈಗಿನಿಂದಲೇ ಆಯಾ ತಾಲ್ಲೂಕಿನ ಶಾಸಕರ ಮುಖಾಂತರ ಸಿಇಓ ಅವರಿಗೆ ಮಾಹಿತಿ ನೀಡಿ. ಈ ಕುರಿತು ನಾನು ಬರುವ ಅಧಿವೇಶನದಲ್ಲಿ ಮಾತನಾಡುತ್ತೆನೆ. ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕುಗಳಿಗೆ ಕೃಷ್ಣಾ ನದಿಯಿಂದ ನೀರು ಬರುತ್ತವೆ ಅಲ್ಲಿ ನೀರಿನ ಕಾಮಗಾರಿಗಳು ಸಮರ್ಪಕವಾಗಿ ಆದರೆ ನೀರಿನ ಸಮಸ್ಯೆಗಳೆ ಬರುವದಿಲ್ಲ. ನಮ್ಮ ಜಿಲ್ಲೆಯಲ್ಲಿ ಕುಡಿಯುವ ನೀರಿನ ಎಲ್ಲಾ ಕಾಮಗಾರಿಗಳು ಮುಗಿದರೆ ನೀರಿನ ಸಮಸ್ಯೆ ಇರುವುದಿಲ್ಲ. ಕುಡಿಯುವ ನೀರಿನ ಕೆಲಸ ಮತ್ತು ಕಾಮಗಾರಿಗಳನ್ನು ಅಧಿಕಾರಿಗಳು ಮುತುವರ್ಜಿವಹಿಸಿ ಫಾಲೋ ಮಾಡಬೇಕು. ಕಾಲ ಮಿತಿಯಲ್ಲಿ ಕೆಲಸ ಮಾಡದ ಗುತ್ತಿಗೆದಾರರಿಗೆ ದಂಡ ಹಾಕಬೇಕು. ಇಲ್ಲದಿದ್ದರೆ ಆ ಕೆಲಸವನ್ನು ಸರಿಯಾಗಿ ಮಾಡುವ ಮತ್ತೊಬ್ಬ ಗುತ್ತಿಗೆದಾರರಿಗೆ ಕೊಡಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
 ಈ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ. ಕೊಪ್ಪಳ ಸಂಸದರಾದ ಕೆ. ರಾಜಶೇಖರ ಹಿಟ್ನಾಳ. ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ. ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ. ಸಹಾಯಕ ಆಯುಕ್ತರಾದ ಕ್ಯಾ. ಮಹೇಶ ಮಾಲಗಿತ್ತಿ. ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು. ಎ.ಡಬ್ಲೂ. ಹಾಗೂ ಜೆಇಗಳು ಮತ್ತು ಗುತ್ತಿಗೆದಾರರು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ರೈತರಿಗೆ ಸಮಸ್ಯೆಗಳಾಗದಂತೆ ಕೆಲಸ ನಿರ್ವಹಿಸಬೇಕು: ಸಚಿವ ಶಿವರಾಜ ಎಸ್. ತಂಗಡಗಿ

ರೈತರಿಗೆ ಸಮಸ್ಯೆಗಳಾಗದಂತೆ ಕೆಲಸ ನಿರ್ವಹಿಸಬೇಕು: ಸಚಿವ ಶಿವರಾಜ ಎಸ್. ತಂಗಡಗಿ

Work should be carried out so that farmers do not face problems: Minister Shivaraj S. Thangadgi




ಕೊಪ್ಪಳ ಫೆಬ್ರವರಿ 23, (ಕರ್ನಾಟಕ ವಾರ್ತೆ): ಪವನ ಶಕ್ತಿ ಕೆಲಸವನ್ನು ರೈತರ ಜಮೀನುಗಳಿಗೆ ಸಮಸ್ಯೆಗಳಾಗದಂತೆ ನಿರ್ವಹಿಸುವುದರ ಜೊತೆಗೆ ಅವರ ಸಮಸ್ಯೆಗಳಿಗೆ ತಕ್ಷಣ ಸಂಬAಧಿಸಿದ ಕಂಪನಿಯವರು ಸ್ಪಂದಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.
ಸೋಮವಾರದಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ 2022- 27 ಅನ್ನು ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳು ಹಾಗೂ ವಿಂಡ್ ಎನರ್ಜಿ ಕಂಪನಿಗಳ ಮುಖ್ಯಸ್ಥರು/ ವ್ಯವಸ್ಥಾಪಕರೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ರಸ್ತೆಗಳಲ್ಲಿ 60 ರಿಂದ 70 ಟನ್ ಭಾರೀ ವಾಹನಗಳ ಸಂಚಾರದಿAದ ರಸ್ತೆಗಳು ಹಾಳಾಗುತ್ತಿರುವುದರ ಜೊತೆಗೆ ರೈತರ ಜಮೀನುಗಳಿಗೂ ಸಮಸ್ಯೆಗಳಾಗುತ್ತಿವೆ ಮತ್ತು ಸಂಬAಧಿಸಿದ ಕಂಪನಿಯವರು ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳಿವೆ. ಅವುಗಳನ್ನು ಮರುಕಳಿಸದಂತೆ ನೋಡಿಕೊಳ್ಳಬೇಕು. ನಮಗೆ ವಿಂಡ್ ಎನರ್ಜಿ ಬೇಕು, ಹಾಗಂತ ತಮ್ಮ ಮನಸ್ಸಿಗೆ ಬಂದAತೆ ಮಾಡುವುದಲ್ಲ. ಜನರಿಗೆ ಏನಾದರೂ ಸಮಸ್ಯೆಗಳಾದರು ಅವರು ಮೊದಲು ಕೇಳುವುದು ನಮಗೆ, ನಿಮಗಲ್ಲ ಎಂದು ವಿಂಡ್ ಎನರ್ಜಿ ಕಂಪನಿಯ ಮುಖ್ಯಸ್ಥರು ಹಾಗೂ ವ್ಯವಸ್ಥಾಪಕರಿಗೆ ಹೇಳಿದರು.
ತಾವು ಎಷ್ಟು ಫ್ಯಾನ್‌ಗಳನ್ನು ಹಾಕಲು ಪರ್ಮಿಶನ್ ಪಡೆದಿದ್ದೀರಾ, ಎಷ್ಟು ಹಾಕುತ್ತಿದ್ದೀರಾ ಎನ್ನುವ ಮಾಹಿತಿಯನ್ನು ನೀಡಬೇಕು. ಇದಕ್ಕಾಗಿ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಪಿ.ಆರ್.ಇ.ಡಿ, ಪೊಲೀಸ್, ಜೆಸ್ಕಾಂ, ಅರಣ್ಯ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಒಂದು ಸಮಿತಿಯನ್ನು ರಚಿಸಿ ಅವರು ಕಂಪನಿಯವರು ಪಡೆದ ಅನುಮತಿ ಪರಿಶೀಲಿಸುವುದರ ಜೊತೆಗೆ ಸಿಎಸ್‌ಆರ್ ಅನುದಾನದಲ್ಲಿ ಹಾಳಾದ ರಸ್ತೆಗಳನ್ನು ಎಷ್ಟು ಸರಿಯಾಗಿ ಮಾಡಿದ್ದಾರೆ ಎನ್ನುವ ಕುರಿತು ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಆದಷ್ಟು ಬೇಗನೆ ಇನ್ನೊಂದು ಸಭೆ ಕರೆಯಲಿದ್ದು, ಆ ಸಭೆಯಲ್ಲಿ ಇಲ್ಲಿಯವರೆಗೆ ಜಿಲ್ಲೆಯ ಎಲ್ಲೆಲ್ಲಿ ರೈತರ ದೂರುಗಳು ಬಂದಿವೆ ಎನ್ನುವ ಕುರಿತು ಮಾಹಿತಿ ಕೊಡಬೇಕು ಹಾಗೂ ಎಲ್ಲಾ ಕಂಪನಿಯವರು ಸಮಗ್ರ ಮಾಹಿತಿಯೊಂದಿಗೆ ತಪ್ಪದೆ ಸಭೆಗೆ ಹಾಜರಿರಬೇಕೆಂದು ಹೇಳಿದರು.
ಕರ್ನಾಟಕ ವಿಧಾನಸಭೆ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ ಮಾತನಾಡಿ, ವಿಂಡ್ ಎನರ್ಜಿಯ ಭಾರೀ ವಾಹನಗಳ ಸಂಚಾರದಿAದ ರಸ್ತೆಗಳು ಎಷ್ಟು ಹಾಳಾಗಿವೆ ಎಂದರೆ ತುರ್ತು ಸಂದರ್ಭದಲ್ಲಿ ಅಂಬುಲೆನ್ಸ್ ತಗೊಂಡು ಹೋಗಲಿಕ್ಕೂ ಆಗದ ಪರಿಸ್ಥಿತಿ ಬಂದಿದೆ. ವಾಹನಗಳು ಹೊಲದಲ್ಲಿ ಸಂಚರಿಸುತ್ತಿರುವುದರಿAದ ಧೂಳಿನಿಂದ ಬೆಳೆಗಳು ಹಾಳಾಗಿವೆ. ಈ ಕುರಿತು ಮೊನ್ನೆ ನಾಗರಾಳ ಗ್ರಾಮದಲ್ಲಿ ಗಲಾಟೆ ಆಯಿತು. ರಸ್ತೆಗಳು ಹಾಳಾಗುತ್ತಿರುವುದರಿಂದ ರೈತರು ದಿನಾಲು ಗೋಳಿಡುತ್ತಾರೆ. ಫ್ಯಾನ್‌ಗಳನ್ನು ಹಾಕಲು ಎಷ್ಟು ಪರ್ಮಿಷನ್ ಪಡೆದಿದ್ದಾರೆ ಎನ್ನುವ ಮಾಹಿತಿ ನಮಗೆ ಬೇಕು. ನಾನು ಈ ಕುರಿತು ಬರುವ ಅಧಿವೇಶನದಲ್ಲಿ ಧ್ವನಿ ಎತ್ತದೆ ಬಿಡಲ್ಲ ಎಂದು ಹೇಳಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ ಮಾತನಾಡಿ, ಜಿಲ್ಲೆಯಲ್ಲಿ ವಿಂಡ್ ಎನರ್ಜಿಗೆ 5,400 ಎಕರೆ ಜಮೀನು ಹೋಗುತ್ತದೆ. ಮುಂದೆ ಇದರ ಪರಿಣಾಮ ಏನಾಗುತ್ತದೆ ಎಂಬ ಕುರಿತು ನಾವು ವಿಚಾರ ಮಾಡಬೇಕಿದೆ. ಕಂಪನಿಯವರು ತಮ್ಮ ಕಂಡೀಶನ್‌ಗಳು ಏನಿವೆ ಎನ್ನುವುದನ್ನು ತಿಳಿಸಬೇಕು. ಇತ್ತೀಚೆಗೆ ಕವಲೂರಿನಲ್ಲಿ ಇದೇ ವಿಷಯಕ್ಕೆ ಗಲಾಟೆ ನಡೆಯಿತು. ರೈತರು ಬಂದು ಜಗಳ ಮಾಡಿದರು. ಅವರ ಸಮಸ್ಯೆಗಳಿಗೆ ಯಾಕೆ ತಾವು ಸರಿಯಾಗಿ ಸ್ಪಂದಿಸುತ್ತಿಲ್ಲ. ರೈತರ ಹೊಲ ಮತ್ತು ರಸ್ತೆಗಳು ಹಾಳಾಗುತ್ತಿವೆ. ಸಿಎಸ್‌ಆರ್ ಅನುದಾನದಲ್ಲಿ ರಸ್ತೆಗಳನ್ನು ಸರಿಪಡಿಸುವ ಕೆಲಸ ಮಾಡಬೇಕೆಂದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ವಿಂಡ್ ಎನರ್ಜಿ ಕಂಪನಿಗಳ ಮುಖ್ಯಸ್ಥರು/ವ್ಯವಸ್ಥಾಪಕರು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.