ವೈದ್ಯಕೀಯ ವೃತ್ತಿ ಪವಿತ್ರವಾದ ಕ್ಷೇತ್ರ – ಲಿಂಗರಾಜ್ ಟಿ

The medical profession is a sacred field - Lingarajti
 

ವೈದ್ಯಕೀಯ ವೃತ್ತಿ ಪವಿತ್ರವಾದ ಕ್ಷೇತ್ರ – ಲಿಂಗರಾಜ್ ಟಿ

ಗಂಗಾವತಿ,  ವೈದ್ಯಕೀಯ ವೃತ್ತಿ ಪವಿತ್ರ ವಾದದ್ದು, ವೈದ್ಯ ವಿದ್ಯಾರ್ಥಿಗಳು ಗುಣ ಮಟ್ಟದ ಶಿಕ್ಷಣ ಪಡೆದು ಸಮಾಜ ಸೇವೆಯಲ್ಲಿ ತೊಡಗ ಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಅಧಿಕಾರಿ ಲಿಂಗರಾಜ್ ಟಿ ಕರೆ ನೀಡಿದರು. ನಗರದ ಅಮರ್‌ ಗಾರ್ಡ್ ನಲ್ಲಿ ಸ್ಪೂರ್ತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಸ್ಫೂರ್ತಿ ಕಲರವ ಎನ್ನುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿ ಮಾತನಾಡಿ ದರು.

ಪ್ರಸ್ತುತ ವರ್ಷ 96 ವಿದ್ಯಾರ್ಥಿಗಳು ಕಾಲೇಜಿನಿಂದ ಹೊರಗೆ ಹೋಗುತ್ತಿದ್ದೀರಿ, ನಿಮ್ಮ ಮುಂದಿನ ಭವಿಷ್ಯದ ಕಡೆಗೆ ಗಮನಹರಿಸ ಬೇಕೆಂದು ತಿಳಿಸಿದ ಅವರು ವೈದ್ಯರಲ್ಲಿ ನಡತೆ, ಪ್ರಮಾಣಿಕತೆ ಇರ ಬೇಕು ಅಂದಾಗ ಮಾತ್ರ ಯಶಸ್ಸಿ ಯಾಗಲು ಸಾದ್ಯವಾ ಗುತ್ತದೆ ಎಂದರು.

ಸ್ಪೂರ್ತಿ ಶಿಕ್ಷಣ ಸಂಸ್ಥೆಯು ವಿವಿಧ ಕೋರ್ಸುಗಳನ್ನು ಪ್ರಾರಂಭಿಸಿ ನಗರ ಸೇರಿದಂತೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಸಂಸ್ಥೆಯ

ಮುಖ್ಯಸ್ಥರಾದ ಡಾ. ಈಶ್ವರ ಸವಡಿ ಮತ್ತು ಡಾ. ಬಸವರಾಜ್ ಸವಡಿ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಡಿವೈಎಸ್ಪಿ ಜಾಯಪ್ಪ ನ್ಯಾಮ ಗೌಡ ಮಾತನಾಡಿ ವಿದ್ಯಾರ್ಥಿಗಳು ರೋಗಿಗಳ ಕಾಯಿಲೆಯನ್ನು ಅವ ಲೋ ಕಿಸಿ ಅವರಿಗೆ ಸರಿಯಾದ ಚಿಕಿತ್ಸೆ ಕೊಡುವದರ ಮೂಲಕ ಆರೋಗ್ಯ ವಂತರನ್ನಾಗಿ ಮಾಡುವ ಕಾರ್ಯಕ್ಕೆ ಮುಂದಾಗ ಬೇಕೆಂದರು. ಹೆಚ್ಚಿನ ಆಸೆ, ಆಮೀಷಕ್ಕೆ ಒಳಗಾಗದೆ ವೈದ್ಯ ವೃತ್ತಿಗೆ ಕೀರ್ತಿ ತರ ಬೇಕೆಂದರು. ಪ್ರಾಸ್ತಾವಿಕವಾಗಿ ಡಾ.ಈಶ್ವರ ಸವಡಿ ಮಾತನಾಡಿ ಕಾಲೇಜಿನ ಬೆಳವಣಿಗೆ ಮತ್ತು ಸೌಲಭ್ಯ. ಕುರಿತು ವಿವರಿಸಿದರು. ಅಧ್ಯಕ್ಷತೆಯನ್ನು ಸ್ಫೂರ್ತಿ ಸಮೂಹ ಸಂಸ್ಥೆಯ ಅದ್ಯಕ್ಷೆಯಾದ ನಿರ್ಮಲಾ ಡಾ. ಈಶ್ವರ ಸವಡಿ ವಹಿಸಿದ್ದರು.

ವೇದಿಕೆ ಮೇಲೆ ಉದ್ಯಮಿ ವಿರೂಪಾಕ್ಷಪ್ಪ ಮುಷ್ಟಿ, ಡಾ.ಉಮೇಶ ಪುರದ, ರವಿ ರಾಜಶೇಖರ್ ಸತೀಶ ರಾಯ್ಕರ್, ಡಾ.ಬಸವರಾಜ್ ಸವಡಿ, ಕವಿತಾ ಬಸವರಾಜ್ ಸವಡಿ, ಶಾಹೀದಾ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

7 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

7 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago