ಹೋಳಿ ಹಬ್ಬ: ಮಾರ್ಚ್ 4ರ ವರೆಗೆ ಮದ್ಯ ಮಾರಾಟ ನಿಷೇಧ

ಹೋಳಿ ಹಬ್ಬ: ಮಾರ್ಚ್ 4ರ ವರೆಗೆ ಮದ್ಯ ಮಾರಾಟ ನಿಷೇಧ

Holi festival: Sale of liquor banned till March 4
 


ಕೊಪ್ಪಳ ಮಾರ್ಚ್ 02 (ಕರ್ನಾಟಕ ವಾರ್ತೆ): ಹೋಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಹಾಗೂ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಮಾರ್ಚ್ 4ರ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
 ಮಾರ್ಚ್ 3 ರಿಂದ 4ರ ವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಕಾಮದಹನ ಮತ್ತು ಹೋಳಿ ಹಬ್ಬದ ಸಮಯದಲ್ಲಿ ಶಾಂತತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಿಗೊಳಪಟ್ಟಂತೆ ಮದ್ಯ ಮಾರಾಟವನ್ನು ನಿಷೇಧಿಸಬೇಕೆಂಬ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರ ಕೋರಿಕೆ ಮೇರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21 ರನ್ವಯ ಕೊಪ್ಪಳ ಜಿಲ್ಲೆಯ ಅಳವಂಡಿ, ಹನುಮಸಾಗರ ಮತ್ತು ಯಲಬುರ್ಗಾ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾ. 2ರ ಸಂಜೆ 6 ಗಂಟೆಯಿಂದ ಮಾ. 3ರ ಮಧ್ಯರಾತ್ರಿಯವರೆಗೆ ಮದ್ಯಮಾರಾಟವನ್ನು ನಿಷೇಧಿಸಿದೆ. ಅದೇ ರೀತಿ ಈ ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿ ಹೊರತುಪಡಿಸಿ ಕೊಪ್ಪಳ ಜಿಲ್ಲೆಯಾದ್ಯಂತ ಮಾ. 3ರ ಸಂಜೆ 6 ಗಂಟೆಯಿಂದ ಮಾ. 4ರ ಮಧ್ಯರಾತ್ರಿಯವರೆಗೆ ಮದ್ಯಮಾರಾಟವನ್ನು ನಿಷೇಧಿಸಲಾಗಿದೆ.
 ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕರ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಈ ಆದೇಶದಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

4 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

4 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

4 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

4 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

4 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

4 hours ago