ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆಮಡಿವಾಳ ಸಮಾಜದ ಕುಲಶಾಸ್ತ್ರ ಅಧ್ಯಯನ ಮಾಡಲು ಪ್ರೊ. ಡಾ|| ಅನ್ನಪೂರ್ಣ ಅವರನ ಸಮಿತಿಯನ್ನು ನೇಮಕ ಮಾಡಿದರು

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

 
Protest at Freedom Park on March 16th, demanding that the Centre recommend inclusion of the Madiwala community in the Scheduled Caste category

ಬೆಂಗಳೂರು,ಮಾ.2: ತಲತಲಾಂತರದಿಂದಲೂ ಹಿಂದುಳಿದಿರುವ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮಾ. 16 ರಂದು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ ಮತ್ತು ಉತ್ತರ ಕರ್ನಾಟಕ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಎಂ.ಕೆ. ಹನುಮಂತಪ್ಪ, ದೇಶದ 17 ರಾಜ್ಯಗಳು, 4 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಸಮಾಜ ಪರಿಶಿಷ್ಟ ಜಾತಿ ಪಟ್ಟಿಯಲ್ಲಿದೆ.

ಮಡಿವಾಳ ಸಮಾಜದ ಹಲವು ದಶಕಗಳ ಹೋರಾಟಕ್ಕೆ 2009 ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಡಿವಾಳ ಸಮಾಜದ ಕುಲಶಾಸ್ತ್ರ ಅಧ್ಯಯನ ಮಾಡಲು ಪ್ರೊ. ಡಾ|| ಅನ್ನಪೂರ್ಣ ಅವರನ ಸಮಿತಿಯನ್ನು ನೇಮಕ ಮಾಡಿದರು. ಅದರಂತೆ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ 2011ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದರು. ಆದರೆ ವರದಿ ಅನುಷ್ಠಾನವಾಗಿಲ್ಲ ಎಂದರು.

ಕಳೆದ 2011 ರಿಂದ ಪ್ರತಿ ವರ್ಷವು ಸತತವಾಗಿ ಎಲ್ಲಾ ಸರ್ಕಾರಗಳಿಗೂ ನಮ್ಮನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿಕೊಂಡು ಬರುತ್ತಿದ್ದೇವೆ. 2022ರಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಸುವ ಸಲುವಾಗಿ  ಕಡತವನ್ನು ಸಚಿವ ಸಂಪುಟಕ್ಕೆ ಮಂಡಿಸಲು ಸಜ್ಜಾಗಿದ್ದರು. ಆದರೆ ಆಗ ಮುಖ್ಯಮಂತ್ರಿಗಳ ಅನುಮೋದನೆ ಮಾತ್ರ ಬಾಕಿ ಇತ್ತು.

ಆದರೆ ಈ ಕನಸು ಕೈಗೂಡದೇ ಮತ್ತೆ ಮಡಿವಾಳ ಸಮಾಜಕ್ಕೆ ಅನ್ಯಾಯವಾಯಿತು ಎಂದರು.2025ರಲ್ಲಿ ಸಮಾಜದ ಜಗದ್ಗುರು ಡಾ. ಬಸವಮಾಚಿದೇವ ಸ್ವಾಮಿಜಿ ಹಾಗೂ ಮುಕ್ತಾನಂದ ಸ್ವಾಮಿಜಿ ನೇತೃತ್ವದಲ್ಲಿ ಉತ್ತರ ಕರ್ನಾಟಕ ಮಡಿವಾಳರ ಸಂಘದ ಸಹಭಾಗಿತ್ವದಲ್ಲಿ 19 ಮಂತ್ರಿಗಳು 137 ಶಾಸಕರುಗಳಿಂದ ಸರ್ಕಾರಕ್ಕೆ ಶಿಫಾರಸ್ಸು ಪತ್ರಗಳನ್ನು ಸಂಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದೇವೆ.

ಆದ್ದರಿಂದ ಈ ಮುಂಬರುವ ಅದಿವೇಶನದಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಬೆಳಿಗ್ಗೆ 8ರಿಂದ ಫ್ರೀಡಂ ಪಾರ್ಕ್‌ಲ್ಲಿ ಉತ್ತರ ಕರ್ನಾಟಕ ಮಡಿವಾಳರ ಸಂಘದ ಸಹಭಾಗಿತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ.

ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು, ಹೋಬಳಿ ಭಾಗದಿಂದ  ಹೆಚ್ಚಿನ ಮಡಿವಾಳರು ಆಗಮಿಸಿ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಕೆ. ಮಲ್ಲೇಶ್‌, ಉಪಾಧ್ಯಕ್ಷರಾದ ಬಿ. ಬಸವಶೆಟ್ಟಿ, ಕೆ.ಸಿ. ರವೀಂದ್ರ, ಹಿರಣ್ಯಪ್ಪ ಕುಂಬ್ರಿ, ಟಿ. ಕುಮಾರ ಸ್ವಾಮಿ, ಖಜಾಂಚಿ ಎಸ್.‌ ಧನರಾಜ್‌, ಜಿಲ್ಲಾಧ್ಯಕ್ಷ ಎನ್.‌ ಚಂದ್ರಶೇಖರ್‌ ಮತ್ತಿರರರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

5 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

5 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

5 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

5 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

5 hours ago

ಹೋಳಿ ಹಬ್ಬ: ಮಾರ್ಚ್ 4ರ ವರೆಗೆ ಮದ್ಯ ಮಾರಾಟ ನಿಷೇಧ

ಹೋಳಿ ಹಬ್ಬ: ಮಾರ್ಚ್ 4ರ ವರೆಗೆ ಮದ್ಯ ಮಾರಾಟ ನಿಷೇಧ Holi festival: Sale of liquor banned till…

5 hours ago