ಎಲ್ಲಾ ಜಾತಿಗಳ ಮನುಷ್ಯರು ಒಂದೇ ಎಂದು ಸಾರಿದವರು ರೇಣುಕರು : ತಿಪ್ಪೇರುದ್ರಸ್ವಾಮಿ ವಕೀಲರು

ಎಲ್ಲಾ ಜಾತಿಗಳ ಮನುಷ್ಯರು ಒಂದೇ ಎಂದು ಸಾರಿದವರು ರೇಣುಕರು : ತಿಪ್ಪೇರುದ್ರಸ್ವಾಮಿ ವಕೀಲರು

Renukas were the ones who preached that all castes are the same: Thipperudraswamy, advocate
 

ಗಂಗಾವತಿ : ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದ ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ ಮನುಕುಲಕ್ಕೆ ಅತ್ಯಂತ ಹತ್ತಿರವಾದ ವಿಷಯವಾಗಿದೆ. ಎಲ್ಲಾ ಜಾತಿಗಳ ಮನುಷ್ಯರು ಒಂದೇ ಎಂದು ಸಾರಿದವರು ರೇಣುಕರು ಎಂದು ಜಂಗಮ ಸಮಾಜದ ಹಿರಿಯ ಮುಖಂಡರು ಮಾಜಿ ಕಾಡಾ ಅಧ್ಯಕ್ಷರಾದ ಬಿ.ಹೆಚ್.ಎಂ.ತಿಪ್ಪೇರುದ್ರಸ್ವಾಮಿ ವಕೀಲರು ಹೇಳಿದರು.

ಅವರು ನಗರದ ಶ್ರೀ ಚನ್ನಬಸವ ಮಲ್ಲಿಕಾರ್ಜುನ ಮಠದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತೋತ್ಸವದಲ್ಲಿ ಪಾಲ್ಗೋಂಡು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ನಂತರ ಬಿಜೆಪಿ ಪಕ್ಷದ ರೈತ ಮೋರ್ಚಾ ನಗರ ಘಟಕ ಅಧ್ಯಕ್ಷ ಮಹಾಂತೇಶ ಶಾಸ್ತ್ರಿಮಠ ಮಾತನಾಡಿ ಶ್ರೀ ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮದ ಮಹಾನ್ ಶರಣ ಮತ್ತು ಗುರುಗಳಲ್ಲಿ ಒಬ್ಬರು. ಇವರ ತತ್ವ ಬದುಕಿನ ಚರಿತ್ರೆ ಮತ್ತು ಧಾರ್ಮಿಕ ಸಾಧನೆಗಳು ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಇವರ ಬದುಕು ಮತ್ತು ತತ್ವಗಳನ್ನು ವಿವರಿಸುವ ಹಲವು ಪುರಾಣಗಳು ಮತ್ತು ಗ್ರಂಥಗಳಿವೆ ಎಂದರು.

ಜಗದ್ಗುರು ರೇಣುಕಾಚಾರ್ಯರು ಶೈವ ತತ್ವ ಶಾಸ್ತ್ರವನ್ನು ಜನಸಾಮಾನ್ಯರಿಗೆ ಪರಿಚಯಿಸಿ ಅದನ್ನು ಜೀವನದ ಭಾಗವನ್ನಾಗಿ ಮಾಡಿದ ಮಹಾನ್ ಶರಣ ಅವರ ಬದುಕು ಮತ್ತು ತತ್ವಗಳು ಕನ್ನಡ ಸಮಾಜಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಮನೋಹರಸ್ವಮಿ ಹಿರೇಮಠ, ಸಂಗಯ್ಯಸ್ವಾಮಿ ಸಂಶಿಮಠ, ಶಂಕ್ರಯ್ಯಸ್ವಾಮಿ ಹಿರೇಮಠ,ಮಲ್ಲಯ್ಯಸ್ವಾಮಿ ಹಿರೇಮಠ, ಹಕ್ಕಿ ಪ್ರಕಾಶ, ರುದ್ರಯ್ಯಸ್ವಾಮಿ ಹಿರೇಮಠ, ಸಿದ್ರಾಮಯ್ಯಸ್ವಾಮಿ,ಶಿವಕುಮಾರಸ್ವಾಮಿ.ಸಂಗಯ್ಯಸ್ವಾಮಿ, ಕೋಟೆ ಸಂಗಮೇಶ,ಸಿಂಗನಾಳ ಸಾಹುಕಾರ್, ಶರಣ ಸೇರಿದಂತೆ ಅನೇಕರು ರೇಣುಕಾಚಾರ್ಯರ ಜಯಂತಿಯಲ್ಲಿ ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

6 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

6 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

6 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

7 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

7 hours ago