2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

2022 State Level Book Selection List Published: Objection Invited




2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಜಾಹೀರಾತು

ಕೊಪ್ಪಳ ಮಾರ್ಚ್ 03, (ಕರ್ನಾಟಕ ವಾರ್ತೆ): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಮಾರ್ಚ್ 2 ರಂದು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಆಹ್ವಾನಿಸಿದೆ.
ಆಯ್ಕೆ ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ಅಧಿಕೃತ ವೆಬ್‌ಸೈಟ್  www.dpl.karnataka.gov.in     ನಲ್ಲಿ ಪ್ರಕಟಿಸಲಾಗಿದೆ.
ಆಯ್ಕೆಯಾದ ಪುಸ್ತಕಗಳ ಪಟ್ಟಿಯಲ್ಲಿರುವ ಲೇಖಕರು, ಲೇಖಕ – ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ತಮ್ಮ ಪುಸ್ತಕಗಳಿಗೆ ಸಂಬAಧಿಸಿದ ಪುಸ್ತಕದ ಶೀರ್ಷಿಕೆ, ಲೇಖಕರ / ಪ್ರಕಾಶಕರ ಹೆಸರು, ಮುಖ ಬೆಲೆ (ನಿಗದಿತ ಬೆಲೆಯಲ್ಲಿ ವ್ಯತ್ಯಾಸವಿದ್ದಲ್ಲಿ), ಪುಸ್ತಕದ ಅಳತೆ ಮತ್ತು ಪುಟಗಳ ಸಂಖ್ಯೆ ಅಥವಾ ಇತರ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ತಮ್ಮ ಆಕ್ಷೇಪಣೆ ಅಥವಾ ತಿದ್ದುಪಡಿಗಳನ್ನು ಅಧಿಕೃತ ಮಾಹಿತಿ / ದಾಖಲೆಗಳೊಂದಿಗೆ ಮಾರ್ಚ್ 16ರ ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ನಿಗದಿತ ಅವಧಿಯ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ಏಕಪಕ್ಷೀಯವಾಗಿ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆದೇಶದನ್ವಯ ಕೊಪ್ಪಳ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article