Breaking News
ಸಾಮೂಹಿಕ ಮದುವೆ ದುಂದುವೆಚ್ಚ ಆಮಬರಕ್ಕೆ ಕಡಿವಾಣ ಷಣ್ಮುಖಪ್ಪ ಸಾಹುಕಾರ್ ಕರೆ
Shanmukappa Sahukar calls Kadivana Shanmukappa Sahukar for mass marriage extravagance

ಸಾಮೂಹಿಕ ಮದುವೆ ದುಂದುವೆಚ್ಚ ಆಮಬರಕ್ಕೆ ಕಡಿವಾಣ ಷಣ್ಮುಖಪ್ಪ ಸಾಹುಕಾರ್ ಕರೆ


ಕಾರಟಗಿ,ಮಾ9: ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗುವ ಜತೆಗೆ ಪ್ರಗತಿಗೆ ಪೂರಕವಾಗುತ್ತದೆ ಎಂದು ಗ್ರಾಮದ ಹಿರಿಯ ಮುಖಂಡರಾದ ಷಣ್ಮುಖಪ್ಪ ಸಾಹುಕಾರ್ ಹೇಳಿದರು.

ತಾಲೂಕಿನ ಸಿಂಗನಾಳ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವ ಕಳಸಾರೋಹಣ ಹಾಗೂ ಮಹಾರಥೋತ್ಸವ ಮತ್ತು ಶ್ರೀ ಶರಣಬಸವೇಶ್ವರ ಪುರಾಣ ಮಹೋತ್ಸವದ ಅಂಗವಾಗಿ ಜರುಗಿದ ಸಾಮೂಹಿಕ ವಿವಾಹಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾಮೂಹಿಕ ವಿವಾಹ ಬಡವರ ಮದುವೆ ಎಂದು ಭಾವಿಸುವುದು ತಪ್ಪು. ಸಹಸ್ರಾರು ಭಕ್ತರ, ಮಠಾಧೀಶರ ಆಶೀರ್ವಾದದೊಂದಿಗೆ ಬಂಧನಕ್ಕೊಳಗಾಗುವ ಭಾಗ್ಯ ಜೀವನದ ಸಾರ್ಥಕತೆಯ ಕ್ಷಣವಾಗಿದೆ ಎಂದು ಹೇಳಿದರು.

ಸಾಮೂಹಿಕ ವಿವಾಹ ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ. ವಧು–ವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಇಂದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ-ಶ್ರೀಮಂತ, ಮೇಲು-ಕೀಳೇನ್ನದೆ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲ ಸತ್ಕಾರ್ಯ ಮಾಡಬೇಕು ಸಾಮಾಜಿಕ ಕಳಕಳಿಯೊಂದಿಗೆ ನಡೆಸುವ ಸಾಮೂಹಿಕ ವಿವಾಹ ಮಹೋತ್ಸವ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು ಒಟ್ಟು ಐದು ನೂತನ ಜೋಡಿಗಳು ನವಜೀವನಕ್ಕೆ ಕಾಲಿಟ್ಟರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ವೀರಭದ್ರಗೌಡ್ರು,ಕನಕ ರೆಡ್ಡಿ, ತಿಮ್ಮಣ್ಣ,ಶರಣಬಸವ,ಮಲ್ಲಿಕಾರ್ಜುನ, ಮಹೇಶ ಸಿಂಗನಾಳ,ಉಮೇಶ ಸಿಂಗನಾಳ, ಸೇರಿದಂತೆ ಇತರರು ಇದ್ದರು

ಚಲವಾದಿ ಸಮಾಜದ ಮುಖಂಡ ಶ್ರೀಧರ ಹಾಗೂ ಗೆಳೆಯರಿಂದ ಇಪ್ತಿ ಯಾರ್ ಕೂಟ.
A gathering of Chalavadi community leader Sridhar and his friends.

ಚಲವಾದಿ ಸಮಾಜದ ಮುಖಂಡ ಶ್ರೀಧರ ಹಾಗೂ ಗೆಳೆಯರಿಂದ ಇಪ್ತಿ ಯಾರ್ ಕೂಟ.


ಗಂಗಾವತಿ. ಇಲ್ಲಿನ ನಗರಸಭೆ ವ್ಯಾಪ್ತಿಯ 23ನೇ ಚಲವಾದಿ ಓಣಿಯಲ್ಲಿನ ಶ್ರೀಧರ್ ಹಾಗೂ ಸ್ನೇಹಿತರು ವ್ರತದಲ್ಲಿದ್ದ ಮುಸ್ಲಿಂ ಸಮಾಜ ಬಾಂಧವರಿಗೆ. ಇ ಪ್ತಿ ಯಾರ್ ಕೂಟ ವನ್ನುರವಿವಾರ ದಂದು ಅಯೋ ಜಿ ಲಾಗಿತ್ತು.
ವಾರ್ಡ್ ನ 250ಕ್ಕೂ ಮುಸ್ಲಿಂ ಬಾಂದವರು ಕೂಟದಲ್ಲಿ ಪಾಲಗುಂಡು ಭಾವೈಕ್ಯತೆಗೆ ಸಾಕ್ಷಿಯಾದರು.
ಈ ಸಂದರ್ಭದಲ್ಲಿ ಭಾವೈಕ್ಯ ಸಂಜೀವಿನಿ ಡಾll kf ಮುದ್ದಾಬಳ್ಳಿ ಮಾತನಾಡಿ ಶ್ರೀಧರ್. ಶಿವುಎಫ.
ರಾ ಘವೇಂದ್ರ ಬಸವರಾಜ್ ಸೇರಿದಂತೆ ಇತರರು ಇಪ್ತಿ ಯಾರ್ ದಾಸೋಹದ ವ್ಯವಸ್ಥೆಯನ್ನು ಮಾಡುವುದರ ಮೂಲಕ ಭಾವೈಕ್ಯತೆಗೆ ಕಾರಣೀಭೂತಾಗಿದ್ದಾರೆ. ಜೀವನದ ಮೌಲ್ಯಗಳಾದ ಪ್ರೀತಿ ವಿಶ್ವಾಸ ನಾವು ನಮ್ಮವರು ಎಂಬ ಭಾವನೆ ಜಾತಿ ಮತ ಪಂಥ ಇವೆಲ್ಲವೂಗಿಂತ ಮಿಗಿಲಾಗಿದೆ ಎಂಬ ದಿವ್ಯ ಸಂದೇಶವನ್ನು ಹೇಳಿದರು.. ಎಫ್ ರಾಘವೇಂದ್ರ ಮಾತನಾಡಿ ಯಾವುದೇ ಧರ್ಮ ಹಬ್ಬ ಆಚರಣೆಗಳಿಗೆ ಪರಸ್ಪರ ಅನ್ಯೂನ್ಯವಾಗಿ ಆಚರಿಸಿದಾಗ ಮಾತ್ರ ಹಬ್ಬ ಅರ್ಥಪೂರ್ಣವಾಗಿ ವೇ ನಿಸುತ್ತದೆ.. ಇಂತಹ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಾಗ ಮಾತ್ರ ಸುಖಿ ಸಮಾಜ ನಿರ್ಮಾಣವಾಗಲು ಸಾಧ್ಯ ಎಂಬ ಅಭಿಪ್ರಾಯವನ್ನು ತಿಳಿಸಿದರು. ವ್ಯವಸ್ಥಾಪಕ ಶ್ರೀಧರ್ ಚಲವಾದಿ ಮಾತನಾಡಿ. ಹಬ್ಬದ ಪ್ರಯುಕ್ತ ವೃತಾಚರ ಣೆಯಲ್ಲಿ ಉಪವಾಸವನ್ನು ಹೊಂದಿದ ಸಮಾಜಸಮಾಜ ಬಾಂಧವರಿಗೆ ಅನ್ನ ಸಂತರ್ಪಣೆ ನಡೆಸುವುದು ನಮ್ಮ ಸೌಭಾಗ್ಯವಾಗಿದೆ ಎಂದು ತಿಳಿಸಿದರು

ಕರಾಟೆ ತರಬೇತಿ ಎಲ್ಲಾ ವಿದ್ಯಾರ್ಥಿನಿಯರಿಗೆ ಕಡ್ಡಾಯವಾಗಲಿ -ವಿಠ್ಠಲ್ ಜಾಬಗೌಡರ
Karate training should be made mandatory for all female students - Vitthal Jabagowada

ಕರಾಟೆ ತರಬೇತಿ ಎಲ್ಲಾ ವಿದ್ಯಾರ್ಥಿನಿಯರಿಗೆ ಕಡ್ಡಾಯವಾಗಲಿ -ವಿಠ್ಠಲ್ ಜಾಬಗೌಡರ

ಕೊಪ್ಪಳ : ಇಂದಿನ ದಿನಗಳಲ್ಲಿ  ಸ್ವಯಂರಕ್ಷಣೆಗಾಗಿ ಕರಾಟೆ ಅತೀ ಅಗತ್ಯವಾಗಿ ಎಲ್ಲರೂ ಕಲಿಯಬೇಕಾದ ಕ್ರೀಡೆಯಾಗಿದೆ. ಕರಾಟೆಯನ್ನು ಎಲ್ಲ ಶಾಲೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು. ಇದರಿಂದ ದೈಹಿಕವಾಗಿಯೂ ಶಕ್ತಿವಂತರಾಗಬಹಹುದು ಜೊತೆಗೆ ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸು ಇರುತ್ತದೆ ಎನ್ನುವಂತೆ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯೂ ಸಾದ್ಯವಾಗುತ್ತದೆ ಎಂದು   ಕೊಪ್ಪಳ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ  ಹೇಳಿದರು.
ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ  ಜಿಲ್ಲಾ ಪಂಚಾಯತ, ಕೊಪ್ಪಳ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪಳ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ, ಕರಾಟೆ ಇಂಡಿಯಾ ಆರ್ಗನೈಜೇಷನ್ ಮತ್ತು ನ್ಯಾಷನಲ್ ಸ್ಟೀರಿಟ್ ಕರಾಟೆ ಅಕಾಡಮಿ, ಕೊಪ್ಪಳ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿನಿಯರ ಕರಾಟೆ ಪ್ರದರ್ಶನ-ಬೆಲ್ಸ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಘಾಟನೆಯನ್ನು ವಿದ್ಯಾರ್ಥಿನಿಯರಿಗೆ ಡ್ರಾಗನ್ ಸ್ಟಿಕ್ ನೀಡುವುದರ ಮೂಲಕ ಮಾಡಲಾಯಿತು.
ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ನಿಮಿತ್ಯ  ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ನಿಜಕ್ಕೂ ಅರ್ಥಪೂರ್ಣ.  ವಿವಿಧ ಶಾಲೆಯ ಮಕ್ಕಳು ಇದರಲ್ಲಿ ಭಾಗವಹಿಸಿ ಪ್ರದರ್ಶನ ಮಾಡಿ ಬೆಲ್ಟ್ ಪಡೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.
ಎಪಿಜೆ ಅಬ್ದುಲ್ ಕಲಾಂ ಸಿಬಿಎಸ್ಸಿ ಶಾಲೆ ಲಿಂಗದಳ್ಳಿ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಳಕಲ್ ಮತ್ತು ಹಿಟ್ನಾಳ ಶಾಲೆಯ ೨೫೦ ವಿದ್ಯಾರ್ಥಿನಿಯರು ಭಾಗವಹಿಸಿ ೨೦೨೫-೨೬ನೇ ಸಾಲಿನಲ್ಲಿ ಪಡೆದ ತರಬೇತಿಯ ಪ್ರದರ್ಶನವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಬೆಲ್ಟ್ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು
 ಪ್ರಾಸ್ತಾವಿಕವಾಗಿ ನ್ಯಾಷನಲ್ ಸ್ಟೀರಿಟ್ ಕರಾಟೆ ಅಕಾಡಮಿ ಮುಖ್ಯಸ್ಥ ರಾಜಾಬಕ್ಷಿ ಎಚ್.ವಿ ನೆರವೇರಿಸಿದರು. ಅದ್ಯಕ್ಷತೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅಜ್ಮೀರ್ ಅಲಿ ವಹಿಸಿದ್ದರು. ವೇದಿಕೆಯ ಮೇಲೆ  ನ್ಯಾಷನಲ್ ಶುಟೋಕಾನ್ ಕರಾಟೆ ಅಸೋಶಿಯೇಷನ್ ಕರ್ನಾಟಕದ ಅಧ್ಯಕ್ಷರಾದ ಬಿ.ಬಾಷಾಸಾಹೇಬ, ಹಿರಿಯ ಹೋರಾಟಗಾರ ನಜೀರ್ ಮೂಲಿಮನಿ, ಮಾಜಿ ನಗರಸಭಾ ಸದಸ್ಯ ಮಾನ್ವಿ ಪಾಷಾ, ತರಬೇತುದಾರರಾದ ದೀಪಾ ಮತ್ತು ರೋಹಿಣಿ ಉಪಸ್ತಿತರಿದ್ದರು.  ನಿರೂಪಣೆಯನ್ನು ದಾವಲಸಾಬ ಬೆಟಗೇರಿ ನಡೆಸಿಕೊಟ್ಟರು. ವಂದನಾರ್ಪಣೆಯನ್ನು ದೇವಪ್ಪ ಕಲ್ಲನ್ನವರ ಮಾಡಿದರು.

ದಲಿತ ಎಂಬ ಪದ ಜಾತಿ ಸೂಚಕವಲ್ಲ ಅದು ಶೋಷಿತ ವರ್ಗದ ಪ್ರತೀಕ.. ಡಾಕ್ಟರ್ ಅರ್ಜುನ್ ಗೋ ಸಂಗಿ…
The word Dalit is not a caste symbol, it is a symbol of the exploited class.. Dr. Arjun Go Sangi…

ದಲಿತ ಎಂಬ ಪದ ಜಾತಿ ಸೂಚಕವಲ್ಲ ಅದು ಶೋಷಿತ ವರ್ಗದ ಪ್ರತೀಕ.. ಡಾಕ್ಟರ್ ಅರ್ಜುನ್ ಗೋ ಸಂಗಿ


ಗಂಗಾವತಿ… ಶತಶತಮಾನಗಳಿಂದ ಶೋಷಣೆಗೆ ಒಳಗಾದ ಜನಾಂಗದವರ ಪ್ರತಿಕವೇ ದಲಿತ ಎಂದು ಕರೆಯಲಾಗುತ್ತಿದ್ದು ಇದು ಯಾವುದೇ ಒಂದು ಜಾತಿಗೆ ಸೀಮಿತವಾಗಿಲ್ಲ ಎಂದು ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ರಾಜ್ಯಾಧ್ಯಕ್ಷ ಡಾಕ್ಟರ್ ಅರ್ಜುನ್ ಗೋಸಂಗಿ ಹೇಳಿದರು.
ಅವರು ರವಿವಾರದಂದು ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ಗದಗ್ ಹಾಗೂ ತಾಲೂಕಾ ಘಟಕ ಗಂಗಾವತಿ ಸಂಯುಕ್ತ ಆಶಯದಲ್ಲಿ ಭಾರತೀಯ ವೈದ್ಯಕೀಯ ಭವನದಲ್ಲಿ ಆಯೋಜಿಸಿದ ಅಕ್ಷರದ ಅವ್ವ ಸಾವಿತ್ರಿ ಬಾಪುಲೆ ಪ್ರಶಸ್ತಿ ಪ್ರಧಾನ ಸಮಾರಂಭದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸಾವಿತ್ರಿ ಬಾಪುಲೆ ಅವರ ಭಾವಚಿತ್ರಕ್ಕೆ ನೆರವೇರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕಳೆದ 17 ವರ್ಷಗಳಿಂದ ಗದಗ್ ನಗರದಲ್ಲಿ ದಲಿತ ಸಾಹಿತ್ಯ ಘಟಕವನ್ನು ಸ್ಥಾಪಿಸುವುದರ ಮೂಲಕ ದಲಿತ ಸಾಹಿತ್ಯ ಚಳುವಳಿಯನ್ನು ನಡೆಸುತ್ತಾ ಬದಲಾಗಿದೆ. ತೋಂಟದಾರ್ಯ ಶ್ರೀಗಳ ದಿವ್ಯ ಸಾನಿಧ್ಯ ಮೂಲಕ ಆರಂಭಗೊಂಡ ರಾಜ್ಯ ಘಟಕವು ಶೋಷಣೆಗೆ ಒಳಗಾದ ಸಮುದಾಯದ ಅಭಿವೃದ್ಧಿಗೆ ಹತ್ತು ಹಲವಾರು ಸಮಾಜಮುಖಿ ಕಾರ್ಯಗಳನ್ನು ಸಮ್ಮೇಳನಗಳನ್ನು ನಡೆಸುತ್ತಾ ಬರಲಾಗಿದ್ದು ಪ್ರಸ್ತುತ ಘಟಕವು ಸಮಾನ ಮಸ್ಕರೊಂದಿಗೆ ರಾಜ್ಯದ್ಯಂತ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ ಎಂದು ತಿಳಿಸಿದರು. ಇದಕ್ಕೂ ಪೂರ್ವದಲ್ಲಿ ಸಂವಿಧಾನ ಪೀಠಿಕೆಯ ಪ್ರಮಾಣ ವಚನವನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ವಿಶೇಷ ಉಪನ್ಯಾಸವನ್ನು ಹೆಚ್ ಎಂ ಶೈಲಜಾ ಸಾವಿತ್ರಿಬಾಯಿಪುಲೆ ಸೇರಿದಂತೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ವಿಷಯಗಳ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಗೌಡ ಪಾಟೀಲ್. ಘಟಕದ ಜಿಲ್ಲಾಧ್ಯಕ್ಷ ಡಾ. ನಿಂಗಣ್ಣ ಜಂಗಮದಲ್ಲಿ. ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ.ನಟೇಶ್. ಡಾಕ್ಟರ್ ಶರಣಬಸಪ್ಪ ಕೋಲ್ಕಾರ್. ಅಜ್ಮೀರ. ನಂದಾ ಪುರ ಶಿವಕುಮಾರ್ ಮಾಲಿ ಪಾಟೀಲ್ ಕೆ ನಿಂಗಜ್ಜ ಸೇರಿದಂತೆ ಇತರರು ಇಪ್ಪತ್ತಕ್ಕೂ ಅಧಿಕ ಸಾಧಕರನ್ನು ಸಾವಿತ್ರಿ ಬಾಪುಲೆ ಪ್ರಶಸ್ತಿ ನೀಡಿ ಗೌರವಿಸಿದರು

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ
Electrical Contractors Association to protest on March 11th, demanding various demands

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು ಮಾರ್ಚ್ 9: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ತಿಳಿಸಿದ್ದಾರೆ.

ಇಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಸುಪ್ರೀಂ ಕೋರ್ಟ್ ನ ಆದೇಶದ ಅನ್ವಯ 2025 ಏಪ್ರಿಲ್‌ನಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಹಾಗೂ ವಿವಿಧ ಹಂತಗಳಲ್ಲಿ ನಿರ್ಮಾಣ ಹಂತದಲ್ಲಿರುವ, ಪೂರ್ಣಗೊಂಡಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ (ಓ.ಸಿ) ಅಥವಾ ವಾಸಯೋಗ್ಯ ಪ್ರಮಾಣ ಪತ್ರ ನೀಡುವ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು. ರಾಜ್ಯಾದ್ಯಂತ ಲಕ್ಷಾಂತರ ಗ್ರಾಹಕರು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು, ಭೂ ಪರಿವರ್ತಿತ ಹಾಗೂ ಭೂ ಪರಿವರ್ತನೆಯಾಗದ ಪ್ರದೇಶಗಳು ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಸ್ಥಳಗಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಬ್ಯಾಂಕ್‌ಗಳಿಂದ ಸಾಲ ಪಡೆದು ವಿವಿಧ ಹಂತಗಳಲ್ಲಿ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದಲ್ಲಿ ರಾಜ್ಯದ ಲಕ್ಷಾಂತರ ನಾಗರಿಕರಿಗೆ ಆರ್ಥಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ, ಅರ್ಜಿ ಸಲ್ಲಿಸಿರುವ, ಮಂಜೂರಾತಿ ಪಡೆದಿರುವ ಕಾರ್ಯಾದೇಶಗೊಂಡಿರುವ ಕಟ್ಟಡಗಳಿಗೆ ಸೂಕ್ತ ವಿನಾಯಿತಿ ನೀಡುವ ಮೂಲಕ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡಗಳ ಗ್ರಾಹಕರಿಗೆ ಅನುಕೂಲವಾಗುವಂತೆ ಸರಕಾರ ಕ್ರಮಕೈಗೊಳ್ಳಬೇಕೆಂದು” ಆಗ್ರಹಿಸಿದರು.

“ಯಾವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರ ಕಡ್ಡಾಯ ಎಂಬುದನ್ನು ಸ್ಪಷ್ಟಪಡಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಕಟ್ಟಡದ ನಕ್ಷೆಗೆ ಅನುಮೋದನೆ ಪಡೆಯದೇ ನಿರ್ಮಾಣಗೊಂಡ ಕಟ್ಟಡಗಳಿಗೆ ಸಂಬಂಧಿಸಿದ ಲಕ್ಷಾಂತರ ಅರ್ಜಿಗಳು ಬಾಕಿ ಇರುವುದರಿಂದ ಅವುಗಳನ್ನು ಒಮ್ಮೆಯ ಕ್ರಮವಾಗಿ ಪರಿಹರಿಸಲು ವಿಶೇಷ ಕಾನೂನು ರೂಪಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಎಂಎಸ್‌ಎಂಇ ಪ್ರಮಾಣ ಪತ್ರದ ಮೂಲಕ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದು, ಸಂಪರ್ಕ ನೀಡುವುದಕ್ಕೆ ಕೆಲ ಸಮಸ್ಯೆಗಳು ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗಸೂಚಿಗಳನ್ನು ನೀಡಬೇಕೆಂದು” ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಚಂದ್ರಬಾಬು ಒತ್ತಾಯಿಸಿದರು.

ಈ ಬಗ್ಗೆ ಶೀಘ್ರವಾಗಿ ನಿರ್ದಾರ ಕೈಗೊಳ್ಳುವಂತೆ ಒತ್ತಾಯಿಸಿ ಮಾ.11ರಂದು ಬೆಳಗ್ಗೆ 10.30ಕ್ಕೆ ಪ್ರೀಡಂ ಪಾರ್ಕ್ನಲ್ಲಿ ಬಹೃತ್ ಪ್ರತಿಭಟನೆ ನಡೆಸಲು ಸಂಘ ನಿರ್ಧರಿಸಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.