ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ: ಸಂಪನ್ಮೂಲ ಶಿಕ್ಷಕರಿಗೆ ಸನ್ಮಾನ

Special class for SSLC students: Resource teachers felicitated
 

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ: ಸಂಪನ್ಮೂಲ ಶಿಕ್ಷಕರಿಗೆ ಸನ್ಮಾನ

ಜಾಹೀರಾತು


ಕೊಪ್ಪಳ ಮಾರ್ಚ್ 12 (ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಮಹತ್ವಾಕಾಂಕ್ಷೆಯ ಯೋಜನೆಯಾದ `ಸ್ಪೂರ್ತಿಯ ನಡೆ’ ಕಾರ್ಯಕ್ರಮದಡಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ಆನ್‌ಲೈನ್ ತರಗತಿ ನೀಡಿದ ಸಂಪನ್ಮೂಲ ಶಿಕ್ಷಕರಿಗೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು.  
“ಸ್ಪೂರ್ತಿಯ ನಡೆ” ಕಾರ್ಯಕ್ರಮವು ಕಳೆದ 2025ರ ಡಿಸೆಂಬರ್ ರಿಂದ ಆರಂಭಗೊಂಡು ಪ್ರಸ್ತುತ ಮುಕ್ತಾಯಗೊಂಡಿದ್ದು, ಸಂಪನ್ಮೂಲ ಶಿಕ್ಷಕರಾಗಿ ಜಿಲ್ಲೆಯ ವಿವಿಧ ಸರ್ಕಾರಿ ಪ್ರೌಢ ಶಾಲೆಗಳ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ಶಿಕ್ಷಕರಿಂದ ಮೂರು ತಿಂಗಳ ಕಾಲ ನಿರಂತರವಾಗಿ ಸೋಮವಾರದಿಂದ ಶನಿವಾರವರೆಗೆ ಪ್ರತಿದಿನ ಸಂಜೆ 6 ರಿಂದ ರಾತ್ರಿ 8 ಗಂಟೆಯವರೆಗೆ ಜಿಲ್ಲೆಯ ಎನ್.ಐ.ಸಿ ಕಚೇರಿಯಲ್ಲಿ ತರಗತಿಗಳನ್ನು ನಿರ್ವಹಿಸಲಾಗುತ್ತಿತ್ತು. ಇದಕ್ಕಾಗಿ ಅಗತ್ಯ ಸಹಯೋಗ ನೀಡಿದ ಎನ್.ಐ.ಸಿ ಮುಖ್ಯಸ್ಥರಾದ ಬಸವರಾಜ್ ಮತ್ತು ತರಬೇತಿ ನೀಡಿದ ಎಲ್ಲಾ  ಸಂಪನ್ಮೂಲ ಶಿಕ್ಷಕರಿಗೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಸೇರಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಾಗಮಣಿ ಹೊಸಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ, ಯಲಬುರ್ಗಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಶಂಕರ ಕರಡಕಲ್ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…

18 hours ago

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…

20 hours ago

ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ ದಿನಾಚರಣೆ ನ್ಯಾಯವಾದಿ ನಂದಿನಿ ಸಲಹೆ

Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…

21 hours ago

ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ.

Karnataka Provincial Farmers' Association demands justice for Kudathini land victims. ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು…

21 hours ago