ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಡಿಂಗ್ರಿ ನಾಗರಾಜ್ ಅವಿರೋಧ ಆಯ್ಕೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Dingri Nagaraj elected unopposed as the President of Karnataka Film Parents Artists Association for the third time

ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಡಿಂಗ್ರಿ ನಾಗರಾಜ್ ಅವಿರೋಧ ಆಯ್ಕೆ

ಜಾಹೀರಾತು

ಬೆಂಗಳೂರು,ಮಾ.13: ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಹಿರಿಯ ನಟ, ರಂಗಭೂಮಿ ಕಲಾವಿದ ಡಿಂಗ್ರಿ ನಾಗರಾಜ್ ಮೂರನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಡುಗೋಡಿ ಶ್ರೀನಿವಾಸ್ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಗಂಡಸಿ ಸದಾನಂದ ಸ್ವಾಮಿ ಅವರು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ, 79 ವರ್ಷ ವಯಸ್ಸಿನ ಡಿಂಗ್ರಿ ನಾಗರಾಜ್ ಅವರು 800 ಕ್ಕೂ ಅಧಿಕ ಚಲನಚಿತ್ರಗಳಲ್ಲಿ ನಟಿಸಿದ್ದು, ಹತ್ತು ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಐದು ದಶಕಗಳಿಗೂ ಅಧಿಕ ಸಮಯದಿಂದ ಕಲಾವಿದರಾಗಿರುವ ಡಿಂಗ್ರಿ ನಾಗರಾಜ್, ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಕಲಾವಿದರಿಗೆ ನೆರವು ನೀಡಿದ್ದರು ಎಂದು ಮೆಚ್ಚುಗೆ ವ್ವಕ್ತಿಪಡಿಸಿದರು

ಜೊತೆಗೆ ಚಲನಚಿತ್ರ ನಟ ಹಾಗೂ ನಿರ್ಮಾಪಕರಾದ ಗಣೇಶ್ ರಾವ್ ಕೆಸರ್ಕಾರ್ ಮತ್ತು ಹಿರಿಯ ನಟಿ ನವನೀತಂ ಅಭಿನಂದನೆ ಸಲ್ಲಿಸಿ, ಸಂಘದ ಅಭಿವೃದ್ಧಿಗೆ ನೂತನ ಪದಾಧಿಕಾರಿಗಳು ಮತ್ತಷ್ಟು ಸೇವೆ ಸಲ್ಲಿಸಲಿ ಎಂದು ಹಾರೈಸಿದ್ದಾರೆ. 

Total Views: 0
Share This Article