ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

Legal action if domestic gas is used for commercial purposes
 

ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

ಜಾಹೀರಾತು

ವಿಜಯನಗರ, (ಹೊಸಪೇಟೆ):ಗೃಹ ಬಳಕೆಗಾಗಿ ರಿಯಾಯಿತಿ ದರದಲ್ಲಿ ನೀಡಲಾಗುವ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಜಿಲ್ಲೆಯ ವಾಣಿಜ್ಯ ಸಂಸ್ಥೆಗಳಲ್ಲಿ ನಿಯಮಬಾಹಿರವಾಗಿ ಬಳಸುತ್ತಿರುವುದನ್ನು ಪತ್ತೆ ಹಚ್ಚಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಹಾರ ನಿರೀಕ್ಷಕರು ಶನಿವಾರ ಜಿಲ್ಲೆಯಾದ್ಯಂತ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಹೋಟೆಲ್‌, ಬೇಕರಿ, ಫಾಸ್ಟ್ ಫುಡ್ ಸೆಂಟರ್‌, ಜನನಿಬಿಡ ಆಟೋ ಹಾಗೂ ಬಸ್ ನಿಲ್ದಾಣಗಳ ಬಳಿಯಿರುವ ಉಪಾಹಾರ ಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾಲೀಕರಿಗೆ ಗೃಹ ಬಳಕೆ ಸಿಲಿಂಡರ್‌ಗಳನ್ನು ಯಾವುದೇ ಕಾರಣಕ್ಕೂ ವಾಣಿಜ್ಯ ಉದ್ದೇಶಗಳಿಗೆ ಬಳಸಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ರುವುದು ಕಂಡುಬಂದಲ್ಲಿ, ಅಂತಹ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಮಾಲೀಕರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ಆಹಾರ ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಎಚ್ಚರಿಕೆ ನೀಡಿದರು.

Mallikarjun

Share
Published by
Mallikarjun

Recent Posts

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…

5 hours ago

ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ ದಿನಾಚರಣೆ ನ್ಯಾಯವಾದಿ ನಂದಿನಿ ಸಲಹೆ

Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…

5 hours ago

ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ.

Karnataka Provincial Farmers' Association demands justice for Kudathini land victims. ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು…

6 hours ago