ಮಾದಪ್ಪನ ಸನ್ನಿಧಿಯಲ್ಲಿ ನಡೆಯುವ ಯುಗಾದಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಕಾರ್ಯದರ್ಶಿ : ಎ ಇ ರಘು
All arrangements have been made for the devotees who will be attending the Ugadi fair held in the presence of Madappa. Secretary: A. E. Raghu

ಮಾದಪ್ಪನ ಸನ್ನಿಧಿಯಲ್ಲಿ ನಡೆಯುವ ಯುಗಾದಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಕಾರ್ಯದರ್ಶಿ : ಎ ಇ ರಘು.

ಜಾಹೀರಾತು


ವರದಿ: ಬಂಗಾರಪ್ಪ .ಸಿ .


ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೈ ಮಾದೇಶ್ವರ ಬೆಟ್ಟದಲ್ಲಿಇಂದಿನಿಂದ 16-03-2026 ರಿಂದ 19-03-2026 ರವರೆಗೆ ನಡೆಯಲಿರುವ ಚಂದ್ರಮಾನ ಯುಗಾದಿ ಹಬ್ಬದ ವಿಶೇಷ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕಾರ್ಯಗಳು ಹಾಗೂ ಮಹಾರಥೋತ್ಸವ ಭಕ್ತಿಭಾವದಿಂದ ನಡೆಯಲಿದೆ.
ಶ್ರೀ ಕ್ಷೇತ್ರಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಪ್ರಾಧಿಕಾರ ವತಿಯಿಂದ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಸಮಸ್ತ ಭಕ್ತಾದಿಗಳಿಗೆ ಸದುಪಯೋಗ ಪಡಿಸಿಕೊಳ್ಳಲು ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ತಿಳಿಸಿದರು.

ಇದೇ ತಿಂಗಳು ಜರುಗುವ
ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಭಕ್ತಾದಿಗಳಿಗೆ ವಿತರಿಸಲು ಲಾಡು ಪ್ರಸಾದವನ್ನು ವಿಶೇಷವಾಗಿ ತಯಾರಿಸಲಾಗುತ್ತಿದೆ.
ಭಕ್ತಾದಿಗಳಿಗೆ ಶುದ್ಧ ಹಾಗೂ ಗುಣಮಟ್ಟದ ಪ್ರಸಾದ ಸಿಗುವಂತೆ, ಲಾಡು ತಯಾರಿಕೆ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ದೇವಾಲಯದ ಪಾರುಪತ್ತೆದಾರರಾದ ಮಹಾದೇವಸ್ವಾಮಿ ಮಹಾಲಿಂಗನಕಟ್ಟೆ , ಪ್ರಾಧಿಕಾರದ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಸಹ ಉಪಸ್ಥಿತರಿದ್ದು ಸಿದ್ಧತೆಗಳನ್ನು ವೀಕ್ಷಿಸಿದರು.