Applications invited for Refrigeration, Air Conditioning & Sheep Farming Training
ರೆಫ್ರಿಜರೇಷನ್, ಏರ್ ಕಂಡೀಷನಿಂಗ್ & ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ ಮಾರ್ಚ್ 16 (ಕರ್ನಾಟಕ ವಾರ್ತೆ): ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ 30 ದಿನಗಳ ಉಚಿತ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ಹಾಗೂ ಕುರಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗಾಗಿ ಏಪ್ರಿಲ್ ತಿಂಗಳಿನಲ್ಲಿ 30 ದಿನಗಳ ಉಚಿತ ತರಬೇತಿಗಳು ಪ್ರಾರಂಭಿಸಲಾಗುತ್ತಿದ್ದು, ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.
ಸ್ವಯಂ ಉದ್ಯೋಗ ಮಾಡಲು ಈ ತರಬೇತಿಯು ಅನುಕೂಲವಾಗಲಿದ್ದು, 18 ರಿಂದ 50 ವಯಸ್ಸಿನ ಒಳಗಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿAದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ದೂರವಾಣಿ ಸಂಖ್ಯೆ: 8217236973, 9483485489, 9482188780 ಗೆ ಮಾರ್ಚ್ 30 ರೊಳಗಾಗಿ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳೊಂದಿಗೆ ನೋಂದಾಯಿಸಬಹುದಾಗಿದೆ ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Kanakagiri: Private candidates allowed to apply for ITI admission ಕನಕಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಖಾಸಗಿ…
Gangavathi: Applications invited from private candidates for ITI admissions ಗಂಗಾವತಿ: ಐಟಿಐ ಪ್ರವೇಶಕ್ಕೆ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ…
49,953 cases disposed of in Lok Adalat ಲೋಕ ಅದಾಲತ್‌ನಲ್ಲಿ 49,953 ಪ್ರಕರಣಗಳ ಇತ್ಯರ್ಥ ಕೊಪ್ಪಳ ಮಾರ್ಚ್ 16…
Which fruits are good for health? Which fruits are good for health? ಯಾವ ಹಣ್ಣುಗಳು ಆರೋಗ್ಯಕ್ಕೆ…
Don't listen to false rumors about cooking gas: Dr. Suresh B. Itnal ಅಡುಗೆ ಅನಿಲದ ಬಗೆಗಿನ…