Job fair under DDU-GKY scheme
ಡಿಡಿಯು-ಜಿಕೆವೈ ಯೋಜನೆಯಡಿ ಉದ್ಯೋಗ ಮೇಳ
ಶಿಕ್ಷಣದ ಜತೆ ತಾಂತ್ರಿಕ ಕೌಶಲ್ಯಕ್ಕೆ ಹೆಚ್ಚು ಆದ್ಯತೆ ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
ಕೊಪ್ಪಳ ಮಾರ್ಚ್ 17 (ಕರ್ನಾಟಕ ವಾರ್ತೆ): ಉದ್ಯೋಗಾಕಾಂಕ್ಷಿಗಳು ತಮ್ಮ ಶಿಕ್ಷಣದ ಜತೆಗೆ ತಾಂತ್ರಿಕ ಕೌಶಲ್ಯಗಳಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿಕೆವೈ ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.
ಯಾರು ಹೆಚ್ಚು ಓದಿಕೊಂಡಿರುತ್ತಾರೆ ಅವರು ಮಾತ್ರ ಬುದ್ದಿವಂತರು ಎಂದು ಒಂದು ಕಾಲದಲ್ಲಿ ಹೇಳಲಾಗುತ್ತಿತ್ತು. ಆದರೆ, ಈಗ ಅದು ಬದಲಾಗಿದೆ. ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾಭ್ಯಾಸ, ಜ್ಞಾನದ ಜೊತೆಗೆ ಕೌಶಲ್ಯ ಮತ್ತು ಮನೋಭಾವ ಬಹಳ ಮುಖ್ಯವಾಗಿದೆ.
ಇವೆಲ್ಲ ಅರ್ಹತೆ ಹೊಂದಿರುವವರು ಕಾರ್ಖಾನೆಗಳಲ್ಲಿ, ಖಾಸಗಿ ಅಥವಾ ಸರ್ಕಾರಿ ವಲಯಗಳಲ್ಲಿ ಸುಲಭವಾಗಿ ಉದ್ಯೋಗ ಪಡೆದುಕೊಳ್ಳಲು ಸಾದ್ಯವಾಗುತ್ತದೆ. ಇಂದಿನ ತಂತ್ರಜ್ಞಾನ ಯೋಗದಲ್ಲಿ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ತರಬೇತಿಗಳು ಅತ್ಯವಶ್ಯಕವಾಗಿರುವುದರಿಂದ ಸರ್ಕಾರಗಳು ಹಲವಾರು ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿವೆ. ಕೌಶಲಾಭಿವೃದ್ಧಿ ತರಬೇತಿಯ ಸದ್ಬಳಕೆಯನ್ನು ಮಾಡಿಕೊಳ್ಳಲು ವಿದ್ಯಾರ್ಥಿಗಳು, ಯುವ ಜನತೆ ಮುಂದೆ ಬರಬೇಕೆಂದರು.
ಭಾರತದ ಪದವಿ ಪೂರ್ಣಗೊಳಿಸಿದವರಲ್ಲಿ ಶೇ. 50ರಷ್ಟು ಜನರಿಗೆ ಮಾತ್ರ ಉದ್ಯೋಗ ಸಿಗುತ್ತಿದೆ. ಬಹಳಷ್ಟು ಜನ ನಿರುದ್ಯೋಗಿಗಳಾಗಿ ಉಳಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಷ್ನಲ್ ಸ್ಕಿಲ್ ಕ್ವಾಲಿಫಿಕೇಶನ್ ಫ್ರೇಮ್‌ವರ್ಕ್ (ಎನ್.ಎಸ್.ಕ್ಯೂ.ಎಫ್) ಮೂಲಕ ನ್ಯಾಷ್ನಲ್ ಸ್ಕಿಲ್ ಡೆವಲೆಪ್ಮೆಂಟ್ ಕೌನ್ಸಿಲ್ ರವರು ಸುಮಾರು 8 ಹಂತಗಳಲ್ಲಿ ವೃತ್ತಿಪರ ತರಬೇತಿಯನ್ನು ನೀಡುತ್ತಾರೆ. ಇದರಿಂದ ಶಾಲಾ ಶಿಕ್ಷಣದೊಂದಿಗೆ ತಾಂತ್ರಿಕ ಕೌಶಲ್ಯಗಳನ್ನು ಜೋಡಿಸಿ, ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಮತ್ತು ಕಲಿಕೆಯಲ್ಲಿ ನಮ್ಯತೆಯನ್ನು ಒದಗಿಸಲು ಸಹಾಯವಾಗುತ್ತದೆ. ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಇದರಲ್ಲಿ ನೋಂದಾಯಿಸಿಕೊಂಡು ತರಬೇತಿ ಪಡೆದು ಪ್ರಮಾಣ ಪತ್ರ ಪಡೆದುಕೊಂಡಲ್ಲಿ ನಿಮಗೆ ಸುಲಭವಾಗಿ ಉದ್ಯೋಗವನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ನಮ್ಮ ಜಿಲ್ಲೆಯ ತಳಕಲ್‌ನಲ್ಲಿ ವಿಟಿಯು ಬಹು ಕೌಶಲ್ಯ ಕೇಂದ್ರವಿದ್ದು, ವಿವಿಧ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಭಿವೃದ್ಧಿ ಅಧಿಕಾರಿ ಕೆ.ಗವಿಶಂಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಇಂದು ಉದ್ಯೋಗ ಮೇಳದಲ್ಲಿ ಸುಮಾರು 61ಕ್ಕೂ ಅಧಿಕ ಕಂಪನಿಗಳು ಪಾಲ್ಗೊಂಡಿವೆ. ಉದ್ಯೋಗಕ್ಕಾಗಿ ಎರಡು ಸಾವಿರ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದು, ಸುಮಾರು 300ಕ್ಕೂ ಹೆಚ್ಚು ಉದ್ಯೋಗಾಕಾಂಗಶಿಗಳು ಭಾಗವಹಿಸಿದ್ದಾರೆ. ಯಾವುದೇ ವಿದ್ಯಾರ್ಹತೆ ಇರಲ್ಲಿ ಎಲ್ಲರೂ ತಮ್ಮ ಕೌಶಲ್ಯಾಧಾರಿತ ಸಂದರ್ಶನ ನೀಡಿ ಉದ್ಯೋಗ ಪಡೆದುಕೊಳ್ಳಬೇಕು. ಉದ್ಯೋಗಾಕಾಂಕ್ಷೆ ಹೊಂದಿರು ಯುವಕರು ಇಂತಹ ಮೇಳಗಳಲ್ಲಿ ಭಾಗವಹಿಸಿ, ಉದ್ಯೋಗದ ನೆರವು ಪಡೆದುಕೊಳ್ಳಬೇಕು. ಉದ್ಯೋಗಾಕಾಂಕ್ಷಿಗಳು, ಈ ಮೇಳದಲ್ಲಿ ಬಂದಿರುವ ಎಲ್ಲಾ ಕಂಪನಿಗಳಿಗೆ ಸಂದರ್ಶನ ನೀಡಿ, ನಿಮಗೆ ಸಮಂಜಸ ಎನಿಸುವ ಕಂಪನಿಯನ್ನು ಆಯ್ಕೆ ಮಾಡಿಕೊಂಡು, ಸಂದರ್ಶನ ನೀಡಬೇಕು. ಉದ್ಯೋಗಾಕಾಂಕ್ಷಿಗಳು ಸರ್ಕಾರ, ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಮೂಲಕ ಹಮ್ಮಿಕೊಳ್ಳುವ ಇಂತಹ ಮೇಳಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಾಯ್.ಬಿ.ಅಂಗಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಕಮಲರಾಜ್, ಜಿಲ್ಲಾ ಉದ್ಯೋಗ ವಿನಿಮಯ ಕೆಂದ್ರ ಉದ್ಯೋಗಾಧಿಕಾರಿ ಮಂಜುಳಾ ಉಪ್ಪಾರ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಮಂಜುನಾಥ, ಸಿಬ್ಬಂದಿ ಮೌನೇಶ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಜಿಟಿಟಿಸಿ ಮುಖ್ಯಸ್ಥರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರು, ಆರ್-ಸೇಟಿಯ ನಿರ್ದೇಶಕರು, ಜಿಲ್ಲಾ ಹಾಗೂ ತಾಲೂಕ ಸಂಜೀವಿನಿ ಯೋಜನೆಯ ಸಿಬ್ಬಂದಿ, ನಲ್ಮ್ ಸಿಬ್ಬಂದಿ, ಸ್ಕೌಟ್ & ಗೈಡ್ ಹಾಗೂ ವಿವಿಧ ಕಂಪನಿಗಳ ಪ್ರತಿನಿಧಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಅರ್ಹ ಅಭ್ಯರ್ಥಿಗಳಿಗೆ ಜಾಬ್ ಆಫರ್ ಲೆಟರ್‌ಗಳನ್ನು ವಿತರಣೆ ಮಾಡಲಾಯಿತು. ಜಿ.ಪಂ ಎನ್.ಆರ್.ಎಲ್.ಎಂ. ಶಾಖೆಯ ಅಂಬಣ್ಣ ಅವರು ಕಾರ್ಯಕ್ರಮ ನಿರೂಪಿದರು.
Kayakalp from Dharmasthala constituency to Savulu Halla lake - Manjunatha Rathi ಧರ್ಮಸ್ಥಳ ಕ್ಷೇತ್ರದಿಂದ ಸವುಳು ಹಳ್ಳದ…
There should be no negligence in the implementation of the Prime Minister's 15-point program -…
51 fans voluntarily donate blood on Appu's 51st birthday. ಅಪ್ಪು ಅವರ 51ನೇ ಹುಟ್ಟು ಹಬ್ಬಕ್ಕೆ…
ಹನೂರು ಕ್ಷೇತ್ರಕ್ಕೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿದ ಸುತ್ತುರು ಶ್ರೀಗಳ ಬೇಟಿ : ಡಾ. ದತ್ತೇಶ್ ಕುಮಾರ್ . Dr.…
Enact the 2025 Act in the current session and abolish discriminatory waste management fees: 𝗕𝗔𝗙…
Kanakagiri: Private candidates allowed to apply for ITI admission ಕನಕಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಖಾಸಗಿ…