Protests by farmers' organizations, Dalit organizations, women's organizations demanding the arrest of Govindananda Saraswati

ಗೋವಿಂದಾನಂದ ಸರಸ್ವತಿ ಬಂಧನಕ್ಕೆ ಆಗ್ರಹ ರೈತ ಸಂಘಟನೆ ದಲಿತ ಸಂಘಟನೆ ಮಹಿಳಾ ಸಂಘಟನೆಗಳಿಂದ ಪ್ರತಿಭಟನೆ

ಗಂಗಾವತಿ:, ಶನಿವಾರತಾಲೂಕಿನ ಅಂಜನಾದ್ರಿ ಪರ್ವತದ ಹೆಸರನ್ನು ದುರುಪಯೋಗ ಮಾಡಿಕೊಂಡು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರೈತ ಸಂಘ ಹಸಿರು ಸೇನೆ, ದಲಿತಪರ ಸಂಘಟನೆಗಳು ಹಾಗೂ ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಅಂಜನಾದ್ರಿ ಪರ್ವತದ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.
ಲಕ್ಕಡಿ ದಾಸ್ ಬಾಬಾ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಡೆಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗಿದೆ ಹೋರಾಟಗಾರರು ಹಲವು ವರ್ಷಗಳಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮಕ್ಕೆ ಈ ಬಾರಿ ಅಧಿಕಾರಿಗಳು ಅನಾವಶ್ಯಕವಾಗಿ ಅಡ್ಡಿಪಡಿಸಿದ್ದು ಭಕ್ತರಲ್ಲಿ ಆಕ್ರೋಶ ಉಂಟಾಗಿದೆ ಎಂದು ಹೇಳಿದರು.
ಅಂಜನಾದ್ರಿ ಪರ್ವತದ ಅಭಿವೃದ್ಧಿ ಹೆಸರಿನಲ್ಲಿ ಗೋವಿಂದಾನಂದ ಸರಸ್ವತಿ ಸ್ವಾಮಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಂಪೂರ್ಣ ತನಿಖೆ ನಡೆಸಬೇಕು ಮತ್ತು ದಲಿತರ ಮೇಲೆ ದೌರ್ಜನ್ಯ ಮಾಡಿರುವಂತಹ ಗೋವಿಂದಾನಂದ ಸರಸ್ವತಿ ಸ್ವಾಮಿಯನ್ನು ಕೂಡ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಧಾರ್ಮಿಕ ಪರಂಪರೆ ಹಾಗೂ ಭಕ್ತರ ಹಕ್ಕುಗಳನ್ನು ಕಾಪಾಡುವಲ್ಲಿ ಆಡಳಿತ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೋರಾಟಗಾರರಾದ ಶರಣಪ್ಪ ದೊಡ್ಮನಿ, ಹಂಪೆಶ್ ಹರಿಗೋಲು, ಕೆ. ಕಾವ್ಯ ಮಾತನಾಡಿ, ಎರಡು ದಶಕಗಳಿಂದ ನಡೆದು ಬರುತ್ತಿದ್ದ ಲಕ್ಕಡಿದಾಸ್ ಬಾಬಾ ಅವರಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಅವಕಾಶ ನೀಡದಿರುವುದಕ್ಕೆ ಭ್ರಷ್ಟ ಅಧಿಕಾರಿಗಳೇ ಕಾರಣ. ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಬೇಕು. ಅಂಜನಾದ್ರಿ ಪರ್ವತದ ಹೆಸರಿನಲ್ಲಿ ಹಣ ಸಂಗ್ರಹ ಮಾಡುತ್ತಿರುವ ಗೋವಿಂದಾನಂದ ಸರಸ್ವತಿ ಸ್ವಾಮಿಯನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯ ನಂತರ ತಾಲೂಕು ಆಡಳಿತಕ್ಕೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು ಈ ಸಂದರ್ಭದಲ್ಲಿಶರಣಪ್ಪ ದೊಡ್ಮನಿ ಹಂಪೆಶ್ ಅರಿಗೋಲ್ ಕೆ ಕಾವ್ಯ ದುರ್ಗಮ್ಮ ಲಕ್ಷ್ಮದೇವಿ ಗೀತಾಂಜಲಿ ಹುಲುಗಪ್ಪ ಕಾಮ್ಲಾಪುರ್ ಅಂಬರೀಶ ಸಿಂಗನಾಳ ದುರ್ಗಪ್ಪ ಹೊಸಳ್ಳಿ ವೆಂಕೋಬ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು