ವ್ಯಸನ ಮುಕ್ತ ಸಮಾಜ ನಿರ್ಮಿಸಿ:ಜಿಲ್ಲಾಧಿಕಾರಿ ಡಾ.ಸುರೇಶ ಹಿಟ್ನಾಳ ಸಲಹೆ

Mallikarjun
1 Min Read

Build an addiction-free society: District Magistrate Dr. Suresh Hitna's advice




ವ್ಯಸನ ಮುಕ್ತ ಸಮಾಜ ನಿರ್ಮಿಸಿ:ಜಿಲ್ಲಾಧಿಕಾರಿ ಡಾ.ಸುರೇಶ ಹಿಟ್ನಾಳ ಸಲಹೆ


ಗಂಗಾವತಿ:26 ಯುವಕರು ದುಶ್ಚಟಗಳಿಗೆ ದಾಸರಾಗುತ್ತಿರುವುದರಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ವ್ಯಸನ ಮುಕ್ತ ಸಮಾಜ ನಿರ್ಮಾಣ ಅವಶ್ಯವಿದೆ’ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಹಿಟ್ನಾಳ ಹೇಳಿದರು.
ನಗರದ ಉಪವಿಭಾಗ ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಉಪವಿಭಾಗ ಆಸ್ಪತ್ರೆ ಗಂಗಾವತಿ ವತಿಯಿಂದ ಗುರುವಾರ ಏರ್ಪಡಿಸಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೊಪ್ಪಳ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ.ರಾಮ ಎಲ್. ಅರಸಿದ್ದಿ ಮಾತನಾಡಿ, ‘ಖಿನ್ನತೆಯಿಂದ ವ್ಯಕ್ತಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಯುವಕರು ದುಶ್ಚಟಗಳಿಂದ ದೂರವಿರಬೇಕು ಅವರು ಜನಸಂಖ್ಯಾ ನಿಯಂತ್ರಣ ಮತ್ತು ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾತನಾಡಿದರು.ಗಂಡುಮಕ್ಕಳು 21 ಹಾಗೂ ಹೆಣ್ಣುಮಕ್ಕಳು 18 ವರ್ಷ ತುಂಬಿದ ಬಳಿಕ ಮದುವೆಯಾಗಬೇಕು. ಮೂರು ವರ್ಷದ ಬಳಿಕ ಮೊದಲ ಮಗು ಪಡೆಯಬೇಕು ಕುಟುಂಬ ಕಲ್ಯಾಣ ಕಾರ್ಯಕ್ರಮಗಳನ್ನು ಪಾಲಿಸಬೇಕು’ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಗಂಗಾವತಿ ಉಪವಿಭಾಗ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಈಶ್ವರ ಶಿ,ಸವಡಿ,ಗಂಗಾವತಿ ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್, ನಗರ ಪೊಲೀಸ್ ಠಾಣೆ ಪಿಐ ಪ್ರಕಾಶ ಮಾಳಿ,ಡಾ.ರವೀಂದ್ರ, ಡಾ.ಸೋಮಶೇಖರ್,ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ರಾಜೀವ್, ಶಿವಾನಂದ, ಯಮನೂರಪ್ಪ,ಕಿರಣ ಮಲ್ಲಿಕಾರ್ಜುನ ಹೆಚ್. ಮತ್ತು ಸ್ಪೂರ್ತಿ ಕಾಲೇಜು ವಿಧ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು

Share This Article
Leave a Comment