ದಾವಣಗೆರೆ ಉಪಚುನಾವಣೆಗೆ ಉಸ್ತುವಾರಿಯಾಗಿ ಬಾಬರ್ ಆಯ್ಕೆ

Mallikarjun
1 Min Read

Babar selected as in-charge for Davangere by-election




ದಾವಣಗೆರೆ ಉಪಚುನಾವಣೆಗೆ ಉಸ್ತುವಾರಿಯಾಗಿ ಬಾಬರ್ ಆಯ್ಕೆ

ಗಂಗಾವತಿ:28 ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಪಕ್ಷದಲ್ಲಿ ಗುರುತಿಸಿಕೊಂಡು ಕೆಲಸ ಮಾಡಿದ್ದಕ್ಕಾಗಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಾಬರ್ ಅವರನ್ನು ಪ್ರಸ್ತುತ ನಡೆಯುತ್ತಿರುವ ದಾವಣಗೆರೆ ಉಪಚುನಾವಣೆಗೆ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ, ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಾಗಿರುವ ಬಾಬರ್ ಅವರಿಗೆ ಚುನಾವಣೆ ಉಸ್ತುವಾರಿಯನ್ನಾಗಿ ನೇಮಕ ಮಾಡಿರೋದು ಅವರ ಪರಿಶ್ರಮಕ್ಕೆ ಹಿಡಿದ ಕೈಗನ್ನಡಿಯಂತಿದೆ, ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ನೀಡಿರುವ ನಮ್ಮ ಸರಕಾರ ನುಡಿದಂತೆ ನಡೆದಿದ್ದೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಪುನಹ ಮತ್ತೊಮ್ಮೆ ನಡೆಯಲಿರುವ ಈ ಉಪಚುನಾವಣೆಯಲ್ಲಿ ರಾಜ್ಯದ ಅಭಿವೃದ್ಧಿ ಮತ್ತು ಪಂಚ ಗ್ಯಾರಂಟಿಗಳ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿ, ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ನಾವು ಅಲ್ಲಿ ಹಗಲಿರಲು ಓಡಾಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ನಮ್ಮನ್ನು ದಾವಣಗೆರೆ ಉಪ ಚುನಾವಣೆಗೆ ಉಸ್ತುವಾರಿಯನ್ನಾಗಿ ನೇಮಕ ಮಾಡಿದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ, ಹಾಗೂ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಹಾಗೂ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ ಗೌಡ ಹೆಚ್.ಎಸ್, ಕೆಪಿಸಿಸಿ ಕಾರ್ಯದರ್ಶಿಗಳಾದ ರಮೇಶ ಬಾಬು ಮತ್ತು ಜಿಲ್ಲೆಯ ಎಲ್ಲಾ ಶಾಸಕರು ಮಾಜಿ ಶಾಸಕರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Total Views: 1
Share This Article