Women's Day celebration under the leadership of the All India Women's Organization.

ಅಖಿಲ ಭಾರತ ಮಹಿಳಾ ಸಂಘಟನೆಯ ನೇತೃತ್ವದಲ್ಲಿ
ಗಂಗಾವತಿ ನಗರದಲ್ಲಿ ಮಹಿಳಾ ದಿನಾಚರಣೆ ಆಚರಣೆ.
ಗಂಗಾವತಿ: ಮಾರ್ಚ್-8 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಇಂದು ಗಂಗಾವತಿ ನಗರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು ಎಂದು CPIML ಪಕ್ಷದ ಜಿಲ್ಲಾ ಕಾರ್ಯದರ್ಶಿ ವಿಜಯ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಪೌರಕಾರ್ಮಿಕರ ಬದುಕು, ಬವಣೆ ಕುರಿತು ಜಾಗೃತಿ ನಾಟಕ, ಶ್ರಮಿಕರ ಕಥೆ ಎನ್ನುವ ಬೀದಿ ನಾಟಕ ಪ್ರದರ್ಶನ ಮಾಡಲಾಯಿತು.
ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಕಾ|| ನಿರ್ಮಲಾ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ AIPWA ತಂಡದ ಸದಸ್ಯರು ಕ್ರಾಂತಿ ಗೀತೆಗಳನ್ನು ಹಾಡಿದರು.
ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಡಾ|| ರತಿರಾವ್ ಮೈಸೂರು ಅವರು ಈ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಇತಿಹಾಸದ ಬಗ್ಗೆ ಮಾತನಾಡಿ ಮಹಿಳೆಯರೆಲ್ಲ ಒಗ್ಗಟ್ಟಿನಿಂದ ಹೋರಾಟ ಮಾಡಿ ನಮ್ಮ ಕಾನೂನು ಬದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದರು.
ರಂಗ ನಿರ್ದೇಶಕರಾದ ಸುಮತಿ ಕೆ.ಆರ್ ಅವರು ಈ ಕಾರ್ಯಕ್ರಮ ಕುರಿತು ಮಾತನಾಡಿದರು. AICCTU ರಾಜ್ಯ ಕಾರ್ಯದರ್ಶಿಗಳಾದ ಕಾ|| ಮೈತ್ರಿ ಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು.
ಮಾ
