ಓ ಫಾರಂಗಳ ನೋಂದಣಿ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ

Mallikarjun
1 Min Read

Legal action will be taken if fertilizer is sold without registration of O Farms




ಓ ಫಾರಂಗಳ ನೋಂದಣಿ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ

ಕೊಪ್ಪಳ ಏಪ್ರಿಲ್ 02, (ಕರ್ನಾಟಕ ವಾರ್ತೆ): ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ರಸಗೊಬ್ಬರವನ್ನು ಕೆ-ಕಿಸಾನ್  ತಂತ್ರಾಂಶದ   ಮುಖಾಂತರ ರೈತರ ಎಫ್.ಐ.ಡಿ ಯನ್ನು ನಮೂದಿಸಿ ಮಾರಾಟ ಮಾಡಬೇಕು ಹಾಗೂ ತಮ್ಮ ಎಲ್ಲಾ ಓ ಫಾರಂಗಳನ್ನು ನವೀಕರಣಗೊಳಿಸಿಕೊಳ್ಳಬೇಕು.
‎ಒಂದು ವೇಳೆ ಮಾರಾಟಗಾರರು ಓ ಫಾರಂಗಳ ನೊಂದಣಿ ಇಲ್ಲದೇ ಮಾರಾಟ ಮಾಡಿದಲ್ಲಿ ಹಾಗೂ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಿಗೆಯನ್ನು ಅಮಾನತ್ತು ಅಥವಾ ರದ್ದು ಮಾಡಲಾಗುವುದು ಹಾಗೂ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article