ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ: ರಾಜಲಕ್ಷ್ಮಿ ಫ್ಯಾನ್ಸಿ ಸ್ಟೋರ್ ಮೇಲೆ ನಗರಸಭೆ ದಾಳಿ,ಪ್ಲಾಸ್ಟಿಕ್ ಜಪ್ತಿ.

Mallikarjun
1 Min Read

Sale of banned plastic covers: Municipal Council raids Rajalakshmi Fancy Store, seizes plastic.

ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ: ರಾಜಲಕ್ಷ್ಮಿ ಫ್ಯಾನ್ಸಿ ಸ್ಟೋರ್ ಮೇಲೆ ನಗರಸಭೆ ದಾಳಿ,ಪ್ಲಾಸ್ಟಿಕ್ ಜಪ್ತಿ.

ಗಂಗಾವತಿ:ನಗರದಲ್ಲಿ ಪ್ಲಾಸ್ಟಿಕ್ ಕವರ್ ಗಳ ಮೇಲೆ ನಿಷೇಧ ಹೇರಲಾಗಿದ್ದರೂ ಪ್ಲಾಸ್ಟಿಕ್ ಕವರ್‌ಗಳ ಮಾರಾಟ ಮುಂದುವರಿದಿರುವ ಘಟನೆ ಗಂಗಾವತಿ ನಗರದ ಗಾಂಧಿ ವೃತ್ತದಲ್ಲಿರುವ ರಾಜಲಕ್ಷ್ಮಿ ಫ್ಯಾನ್ಸಿ ಸ್ಟೋರ್‌ನಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡಿ ಕಾನೂನು ಉಲ್ಲಂಘನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಖಚಿತ ಮಾಹಿತಿಯ ಆಧಾರದ ಮೇರೆಗೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳನ್ನು ಜಪ್ತಿ ಮಾಡಿದ್ದಾರೆ.

ಈ ಬಗ್ಗೆ ಅಖಿಲ ಕರ್ನಾಟಕ ಡಾ.ರಾಜಕುಮಾರ್ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಅವರು ಮಾಹಿತಿ ನೀಡಿದ್ದು, ಕಾನೂನು ಉಲ್ಲಂಘನೆ ನಡೆಯುತ್ತಿರುವ ಬಗ್ಗೆ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಅವರ ಮಾಹಿತಿ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಅಂಗಡಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳನ್ನು ಭಾರಿ ಪ್ರಮಾಣದಲ್ಲಿ ಮಾರಾಟ ಮಾಡಲಾಗುತ್ತಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅವುಗಳನ್ನು ಜಪ್ತಿ ಮಾಡಲಾಗಿದೆ.

ಈ ಕುರಿತು ನಗರಸಭೆ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇನ್ನೂ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಯಲ್ಲಿದ್ದರೂ ಕೆಲ ವ್ಯಾಪಾರಿಗಳು ನಿಯಮಗಳನ್ನು ಲೆಕ್ಕಿಸದೆ ಕಾನೂನನ್ನು ತಿರಸ್ಕರಿಸುತ್ತಿರುವುದು ಕಂಡುಬರುತ್ತಿದೆ. ಕಾನೂನಿನ ಭಯವಿಲ್ಲದೆ ನಿಷೇಧಿತ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಗರಸಭೆ ಅಧಿಕಾರಿಗಳು ಪೊಲೀಸ್ ಇಲಾಖೆ ಅಧಿಕಾರಿಗಳು ನಿರಂತರ ಪರಿಶೀಲನೆ ನಡೆಸಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಜಿಲ್ಲಾಧ್ಯಕ್ಷ ಖಾದರ್ ಭಾಷಾ ಅವರು ನಗರಸಭೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆ ಆರೋಗ್ಯ ಅಧಿಕಾರಿ ನಾಗರಾಜ್ ಪೊಲೀಸ್ ಇಲಾಖೆ ಅಧಿಕಾರಿ ಪಿಎಸ್ಐ ನಾಗರಾಜ್, ನಗರಸಭೆ ಸಿಬ್ಬಂದಿಗಳಾದ ಮೋಹಿನ್, ಜಿಲ್ಲಾಧ್ಯಕ್ಷ ಖಾದರ್ ಭಾಷ, ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸಿತರಿದ್ದರು.

Total Views: 0
Share This Article