
Awareness program on minority grievances in Tanakanakal on April 9
ಏ. 9ರಂದು ಟಣಕನಕಲ್‌ನಲ್ಲಿ ಅಲ್ಪಸಂಖ್ಯಾತರ ಕುಂದುಕೊರತೆಯ ಜಾಗೃತಿ ಕಾರ್ಯಕ್ರಮ

ಕೊಪ್ಪಳ ಏಪ್ರಿಲ್ 07 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆ, ಅಲ್ಪಸಂಖ್ಯಾತ ಮಹಿಳೆಯರ ಮತ್ತು ಸ್ಥಳೀಯ ಮಹಿಳಾ ಅಧಿಕಾರೇತರ ಸಂಸ್ಥೆಗಳಿಗೆ ಸಾಕ್ಷರತೆಯನ್ನು ಪ್ರೇರೇಪಿಸಲು ಜಾಗೃತಿ ಕಾರ್ಯಕ್ರಮವನ್ನು ಏಪ್ರಿಲ್ 9 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ತಾಲ್ಲೂಕಿನ ಟಣಕನಕಲ್ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಚುನಾಯಿತ ಪ್ರತಿನಿಧಿಗಳು, ಸ್ಥಳಿಯ ಅಧೀಕಾರೇತರ ಮುಖಂಡರು, ಮಹಿಳಾ ಚುನಾಯಿತ ಪ್ರತಿನಿಧಿಗಳು, ಮಹಿಳಾ ಅಧಿಕಾರೇತರ ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
