
Pancha Committee's illegal interference: Demand to install Hadapada Appanna statue
ಪಂಚಕಮಿಟಿ ಅಕ್ರಮ ಹಸ್ತಕ್ಷೇಪ : ಹಡಪದ ಅಪ್ಪಣ್ಣ ಮೂರ್ತಿ ಪ್ರತಿಷ್ಟಾಪಿಸಲು ಒತ್ತಾಯ


ಗಂಗಾವತಿ, 07:ಬೀದರ್ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಹತ್ತಿರ ಇರುವ ಹಡಪದ ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕೆಂದು ಗಂಗಾವತಿ ತಹಶಿಲ್ದಾರರ ಮುಖಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತ್ತು ನಂತರ ಮಾತನಾಡಿದ ತಾಲ್ಲೂಕು ಹಡಪದ ಅಪ್ಪಣ್ಣ ಸಮಾಜದ ಸಹ ಕಾರ್ಯದರ್ಶಿ ಹೆಚ್.ಮಂಜುನಾಥ ಕನಕಗಿರಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಹತ್ತಿರ 12ನೇ ಶತಮಾನದ ಅನೇಕ ಬಸವಾದಿ ಶರಣರ ಅರಿವಿನ ಗವಿಗಳು ಇರುವುದಾಗಿ ಇತಿಹಾಸ ಸಾರುತ್ತದೆ. ಅದೇರೀತಿ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನಗವಿಯೂ ಅಲ್ಲಿ ಅಸ್ತಿತ್ವದಲ್ಲಿದೆ.
ಆದರೆ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯನ್ನು ಬಸವೇಶ್ವರ ದೇವಸ್ಥಾನದ ಪಂಚಕಮಿಟಿಯವರು ಅಕ್ರಮವಾಗಿ ಹಸ್ತಕ್ಷೇಪ ಮಾಡಿ, ಅನ್ಯ ಶರಣರಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಗಮನಾರ್ಹಸಂಗತಿ. ಇದರಿಂದ ಶಿವಶರಣ ಹಡಪದ ಅಪ್ಪಣ್ಣನವರಿಗೆ ಮತ್ತು ನಮ್ಮ ಸಮುದಾಯದ ಭಕ್ತಿಭಾವನೆಗಳಿಗೆ ತೀವ್ರಅನ್ಯಾಯವಾಗಿದ್ದು, ನಮ್ಮ ಇತಿಹಾಸದ ಮೌಲ್ಯ ಕುಗ್ಗುವಂತಾಗಿದೆ.
ಹಡಪದ ಅಪ್ಪಣ್ಣನವರ ವಂಶಸ್ಥರು ಮತ್ತು ಸಮಾಜದ ಭಕ್ತರಾದ ನಾವು, ನಮ್ಮ ಶರಣರ ಇತಿಹಾಸ ಹಾಗೂ ಅರಿವಿನ ಗವಿಯನ್ನು ಕಳೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಈ ಘಟನೆ ನಮ್ಮ ಭಾವನೆಗಳಿಗೆ ಗಂಭೀರ ಧಕ್ಕೆ ಉಂಟುಮಾಡಿದೆ ಈ ಸಂಬಂಧವಾಗಿ, ಈಗಾಗಲೇ ಸಮಾಜದ ಮುಖಂಡರು, ಭಕ್ತರು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಪ್ರತಿಭಟನೆಗಳನ್ನು ಕೂಡ ನಡೆಸಲಾಗಿದೆ. ಆನೇಕ ಮಠಾಧೀಶರು ಹಾಗೂ ನಾಯಕರು ಸಹ ಹಡಪದ ಅಪ್ಪಣ್ಣನವರ ಪರವಾಗಿ ಹೋರಾಟ ನಡೆಸಿದರೂ, ಇನ್ನೂ ನ್ಯಾಯ ದೊರಕಿಲ್ಲ. ಆದುದರಿಂದ, ತಾವು ದಯವಿಟ್ಟು ಈ ಅಕ್ರಮ ಕೃತ್ಯದಲ್ಲಿ ಭಾಗಿಯಾದ ಪಂಚಕಮಿಟಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಂಡು, ಯಥಾಸ್ಥಿತಿಗೆ ತರಬೇಕು ಹಾಗೆಯೇ ಹಡಪದ ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಅವರ ಮೂರ್ತಿಯನ್ನು ಪುನಃ ಪ್ರತಿಷ್ಠಾಪನೆ ಮಾಡಿ, ಆ ಸ್ಥಳವನ್ನು ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಿ ಸಮರ್ಪಕವಾಗಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಹಡಪದ ಅಪ್ಪಣ್ಣ ಸಮಾಜದ ತಾಲೂಕು ಅಧ್ಯಕ್ಷ ನಿರುಪಾದಿ ಕೇಸರಹಟ್ಟಿ,ಗೌರವ ಸಲಹೆಗಾರರಾದ ಹನುಮಂತಪ್ಪ ಸರಿಗಮ,ಕಾರ್ಯದರ್ಶಿ ಶಿವಣ್ಣ ನೀಲಕಮಲ,ಸಂಘಟನೆ ಕಾರ್ಯದರ್ಶಿ ಶರಣಬಸವಗೌಡ,ವೀರಭದ್ರಪ್ಪ ಹೆಚ್,ವಿಕ್ರಮ ಪಾಟೀಲ್ ಹೆಚ್,ಶರಣಬಸವ ಎಸ್ ಬಿ ನಗರ,ಹೆಚ್.ಯಮನೂರಪ್ಪ,ಶರಣಬಸವ ಹೆಚ್,ಸಿದ್ದೇಶ ಹಿರೇಜಂತಕಲ್, ವಿಜಯಕುಮಾರ್ ಮಹಾಂತೇಶ, ಅಂಬ್ರೇಶ ಹೆಚ್, ಚಂದ್ರಶೇಖರ ಹೆಚ್, ಕನಕಗಿರಿ, ಹೆಚ್,ವಿ.ಹೆಚ್.ದೊಡ್ಡಮನಿ, ಸೇರಿದಂತೆ ಇತರರು ಇದ್ದರು
