ಉಪಚುನಾವಣೆ ಹಿನ್ನಲೆ – ಕಾಂಗ್ರೆಸ್ ಒಳಜಗಳ ಹಮೀದ್ ಮುಲ್ಲಾ ,ಕಾಂಗ್ರೆಸ್ ಮುಖಂಡಾಸಮಾಧಾನ

Mallikarjun
1 Min Read
ಜಾಹೀರಾತು

By-election aftermath – Congress infighting, Hamid Mulla, Congress leader unhappy.



ಜಾಹೀರಾತು


ಉಪಚುನಾವಣೆ ಹಿನ್ನಲೆ – ಕಾಂಗ್ರೆಸ್ ಒಳಜಗಳ ಹಮೀದ್ ಮುಲ್ಲಾ ,ಕಾಂಗ್ರೆಸ್ ಮುಖಂಡ ಅಸಮಾಧಾನ.

ಗಂಗಾವತಿ: ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ಉಪಚುನಾವಣೆಯ ನಂತರ ಕಾಂಗ್ರೆಸ್ ಪಕ್ಷದ ಒಳಜಗಳ ಮತ್ತೆ ಬಹಿರಂಗವಾಗುತ್ತಿರುವ ಲಕ್ಷಣಗಳು ಕಂಡುಬರುತ್ತಿವೆ. ಕೆಲವು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧವೇ ಕೆಲಸ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಈ ಕುರಿತು ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ.

ಈ ಬೆಳವಣಿಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಯುವ ನಾಯಕ ಹಮೀದ್ ಮುಲ್ಲಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿ, ಪಕ್ಷದ ವಿರುದ್ಧವೇ ಕೆಲಸ ಮಾಡಿದವರ ವಿರುದ್ಧ ಕಠಿಣ ಕ್ರಮ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ.
ಇದೇ ವೇಳೆ, ಗಂಗಾವತಿ ವಿಧಾನಸಭಾ ಕ್ಷೇತ್ರದ ವಿಚಾರವನ್ನೂ ಪ್ರಸ್ತಾಪಿಸಿದ ಅವರು, 2023ರ ಚುನಾವಣೆಯ ಸಂದರ್ಭದಲ್ಲಿ ಅಭಿವೃದ್ಧಿಯ ಹರಿಕಾರ ನಮ್ಮ ನಾಯಕರಾದ ಮಾಜಿ ಸಚಿವರು ಇಕ್ಬಾಲ್ ಅನ್ಸಾರಿ ಅವರ ವಿರುದ್ಧವೂ ಕೆಲವು ನಾಯಕರು ಹಾಗೂ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗೆ ವಿರೋಧವಾಗಿ ಕೆಲಸ ಮಾಡಿದ್ದಾರೆ, ಎಂಬ ಆರೋಪಗಳನ್ನು ಹಮೀದ್ ಮುಲ್ಲಾ ಅವರು ಮುಂದಿಟ್ಟಿದ್ದಾರೆ. ಆದರೆ, ಆ ಸಮಯದಲ್ಲಿ ಅವರ ವಿರುದ್ಧ ಯಾವುದೇ ಸ್ಪಷ್ಟ ಶಿಸ್ತು ಕ್ರಮ ಕೈಗೊಂಡಿಲ್ಲ ಎಂಬುದು ಅವರ ಆಕ್ಷೇಪವಾಗಿದೆ.

ಪಕ್ಷದ ಒಳಗಟ್ಟಿನ ಏಕತೆ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದ್ದು, ಎಲ್ಲರಿಗೂ ಒಂದೇ ನಿಯಮ ಅನ್ವಯವಾಗಬೇಕು ಎಂದು ಹಮೀದ್ ಮುಲ್ಲಾ ಅವರು ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ತಪ್ಪು ಮಾಡಿದವರ ವಿರುದ್ಧ ನಿರ್ಭಯವಾಗಿ ಕ್ರಮ ಕೈಗೊಳ್ಳುವುದರಿಂದ ಮಾತ್ರ ಕಾರ್ಯಕರ್ತರಲ್ಲಿ ವಿಶ್ವಾಸ ಮೂಡುತ್ತದೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ, ಕಾಂಗ್ರೆಸ್ ಪಕ್ಷದ ಒಳಾಂಗಣ ಸಮಸ್ಯೆಗಳು ಮತ್ತೊಮ್ಮೆ ಹೊರಹೊಮ್ಮುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ನಾಯಕತ್ವ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಹಾಗೂ ಗಂಗಾವತಿಯಲ್ಲಿಯೂ ಕೂಡ ಪಕ್ಷದ ವಿರುದ್ಧ ಕೆಲಸ ಮಾಡಿದವನ್ನು ಕ್ರಮ ಕೈಗೊಳ್ಳ ಬೇಕಿದೆ.

Total Views: 0
Share This Article