ಚಿಕ್ಕ ಮಾದಿನಾಳ ಗ್ರಾಮದಲ್ಲಿ ಮಕ್ಕಳ ಹಕ್ಕುಗಳು, ಕಾನೂನುಗಳು & ಸುರಕ್ಷತೆಯ ಜಾಗೃತಿ

Mallikarjun
3 Min Read
ಜಾಹೀರಾತು

Awareness of children's rights, laws & safety in Chikka Madinala village

ಚಿಕ್ಕ ಮಾದಿನಾಳ ಗ್ರಾಮದಲ್ಲಿ ಮಕ್ಕಳ ಹಕ್ಕುಗಳು, ಕಾನೂನುಗಳು & ಸುರಕ್ಷತೆಯ ಜಾಗೃತಿ

ಜಾಹೀರಾತು


ಕೊಪ್ಪಳ ಏಪ್ರಿಲ್ 13 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಕೊಪ್ಪಳ ಹಾಗೂ ಗ್ರಾಮ ಪಂಚಾಯತ್, ಚಿಕ್ಕ ಮಾದಿನಾಳ, ಇವರುಗಳ ಸಂಯುಕ್ತಾಶ್ರಯದಲಿ ಇವರುಗಳ ಸಂಯುಕ್ತಾಶ್ರಯದಲ್ಲಿ ಕನಕಗಿರಿ ತಾಲೂಕಿನ ಚಿಕ್ಕ ಮಾದಿನಾಳ ಗ್ರಾಮದ ಶ್ರೀಮರಿಯಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ” ಮೂಡಿಸಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಅವರು ಮಾತನಾಡಿ, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು ಸರಕಾರವು ವಿವಿಧ ಕಾನೂನುಗಳನ್ನು ಜಾರಿಯಲ್ಲಿ ತಂದಿರುತ್ತದೆ. ಅವುಗಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ತಿದ್ದುಪಡಿ-2019 ಪ್ರಮುಖವಾದದ್ದು, ಈ ಕಾಯ್ದೆಯನ್ವಯ 18 ವರ್ಷದೊಳಗಿನ ಮಕ್ಕಳ ಮೇಲಿನ ಬೇಧಕ ಲೈಂಗಿಕ ಹಲ್ಲೆಗೆ ಕನಿಷ್ಠ 20 ವರ್ಷಗಳಿಂದ ಅಜೀವ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ. ಲೈಂಗಿಕ ಕಿರುಕುಳ ಅಂದರೆ ಮಕ್ಕಳಿಗೆ ಶಾಬ್ಧಿಕ, ಅಂಗಿಕ, ಭಾಷಿಕ ಹಾಗೂ ಲಿಖಿತವಾಗಿ ಅವರ ಘನತೆಗೆ ಧಕ್ಕೆ ಉಂಟುಮಾಡಬಹುದಾದ ಯಾವುದೇ ಈ ರೀತಿಯ ಕೃತ್ಯಗಳಿಗೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ. ಈ ರೀತಿಯ ಕೃತ್ಯಗಳಿಗೆ ಸಹಾಯ, ಪ್ರೋತ್ಸಾಹ ಮತ್ತು ಪ್ರಯತ್ನಪಟ್ಟವರಿಗೂ ಅಷ್ಟೇ ಪ್ರಮಾಣದ ಶಿಕ್ಷೆಯನ್ನು ವಿಧಿಸಬಹುದಾಗಿದೆ. ಸಾಮಾಜಿಕ ಜಾಲತಾಣ ಅಥವಾ ಇತರೆ ಮಾಧ್ಯಮಗಳ ಪ್ರಭಾವದಿಂದ ಪ್ರೀತಿ, ಪ್ರೇಮದ ಹೆಸರಿನಲ್ಲಿ ಮಕ್ಕಳು ತಿಳಿದೊ, ತಿಳಿಯದೆಯೋ ಈ ಕಾಯ್ದೆಯಲ್ಲಿ ಸಿಲುಕುತ್ತಿದ್ದಾರೆ ಎಂದರು.
ಅಲ್ಲದೇ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆಯನ್ನು ಮಾಡಿದಂತವರು, ಭಾಗಿಯಾದವರು, ಪ್ರೋತ್ಸಾಹಿಸಿದವರು ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಈ ಕಾಯ್ದೆಯಲ್ಲಿ ಸಿಲುಕಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಗ್ರಾಮ ಮಟ್ಟದಲ್ಲಿ ವಿವಿಧ ರೀತಿಯಲ್ಲಿ ಜಾಗೃತಿಯನ್ನು ಮೂಡಿಸಲು ಗ್ರಾಮ ಮಟ್ಟದ “ಮಕ್ಕಳ ರಕ್ಷಣಾ ಸಮಿತಿ”ಯಲ್ಲಿ ಚರ್ಚಿಸಿ, “ಮಕ್ಕಳ ಹಕ್ಕುಗಳು, ಕಾನೂನುಗಳ ಮತ್ತು ಮಕ್ಕಳ ಸುರಕ್ಷತೆ ಕುರಿತು” ಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸಿ, ತನ್ಮೂಲಕ ಮಕ್ಕಳ ಮೇಲಿನ ಲೈಂಗಿಕ ಹಲ್ಲೆ, ಬಾಲ್ಯವಿವಾಹಗಳನ್ನು ತಡೆದು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸುವಂತೆ ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಲೀಗಲ್ ಕಂ ಪ್ರೋಬೇಷನ್ ಆಫೀಸರ್ ಶಿವಲೀಲಾ ವನ್ನೂರು ಅವರು ಮಾತನಾಡಿ, ತಾಯಿ ಮರಣ, ಶಿಶು ಮರಣ, ಅಪೌಷ್ಠಿಕ ಮಕ್ಕಳ ಜನನ ನಿರ್ಮೂಲನೆಗಾಗಿ ಸರಕಾರವು ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದೆ. ಅದರನ್ವಯ 18 ವರ್ಷದೊಳಿನ ಹೆಣ್ಣು ಮಗುವಿಗೆ ಮತ್ತು 21 ವರ್ಷದೊಳಗಿನ ಗಂಡು ಮಗುವಿಗೆ ವಿವಾಹವನ್ನು ಮಾಡುವುದನ್ನು ನಿಷೇಧಿಸಿದೆ. ರಾಜ್ಯವನ್ನು ಬಾಲ್ಯವಿವಾಹ ಮುಕ್ತ ರಾಜ್ಯವನ್ನಾಗಿಸಲು ಕರ್ನಾಟಕ ರಾಜ್ಯ ಸರಕಾರವು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ತಿದ್ದುಪಡಿಯನ್ನು ತಂದಿದ್ದು, ಅದರನ್ವಯ ರಾಜ್ಯದಲ್ಲಿ ಬಾಲ್ಯವಿವಾಹಗಳು ಅಸಿಂಧು ವಿವಾಹಗಳಾಗಿವೆ. ಬಾಲ್ಯವಿವಾಹವನ್ನು ಮಾಡುವವರು, ಭಾಗವಹಿಸುವವರು, ಆಯೋಜಿಸುವವರು ಎಲ್ಲರಿಗೂ ಕನಿಷ್ಠ 1 ವರ್ಷದಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಆದ್ದರಿಂದ ಯಾರು ಸಹ ಬಾಲ್ಯವಿವಾಹಗಳನ್ನು ಮಾಡಬಾರದು. ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ ಎಂದು ತಿಳಿಸಿದರು.
ಚಿಕ್ಕ ಮಾದಿನಾಳ ಗ್ರಾಮ ಪಂಚಾಯತನ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ ಸಂಕನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಮೂಹ ಸಂಪನ್ಮೂಲ ಅಧಿಕಾರಿಗಳಾದ ವಿನಾಯಕ, ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಂಜುಮ ತಾಜ್, ಕನಕಗಿರಿ ಹೆಡ್ ಕಾನ್ಸಟೇಬಲ್ ಬೈಲಪ್ಪ, ಕನಕಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಅಂಗನವಾಡಿ ಮೇಲ್ವಿಚಾರಕಿ ಚಂದ್ರಕಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರವಿಕುಮಾರ ಪವಾರ ಪ್ರಸ್ತಾವಿಕವಾಗಿ ಮಾತನಾಡಿದರು. ರಮೇಶ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Total Views: 0
Share This Article