ಕೊಲ್ಲಿ ನಾಗೇಶ್ವರರಾವ್ ಕಾಲೇಜ್ ಅತಿಥಿ ಉಪನ್ಯಾಸಕ ಕಳಕಪ್ಪ ಕುಂಬಾರ್ಅತಿಥಿ ಉಪನ್ಯಾಸಕ ಕಳಕಪ್ಪ ಕುಂಬಾರ್ ನಿಧನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Kolli Nageswara Rao College Guest Lecturer Kalakappa Kumbar Guest Lecturer Kalakappa Kumbar Passes Away


ಗಂಗಾವತಿ,ಏ19:ನಗರದ ಕೊಲ್ಲಿ ನಾಗೇಶ್ವರರಾವ್ ಸರ್ಕಾರಿ ಮಹಾವಿದ್ಯಾಲಯದ ಸಮಾಜಶಾಸ್ತ್ರ ಅತಿಥಿ ಉಪನ್ಯಾಸಕ ಕಳಕಪ್ಪ ಕುಂಬಾರ್ (41) ಇವರು ಮಾನ್ವಿ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಅಕಾಲಿಕ ಮರಣ ಹೊಂದಿದ್ದಾರೆ. ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕರಾಗಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು.
ವಿದ್ಯಾರ್ಥಿಗಳ ಅತ್ಯಂತ ಪ್ರೀತಿಯ ಗುರುಗಳಾಗಿದ್ದರು.
ಕುಟುಂಬದವರು ನೀಡಿದ
ಮಾಹಿತಿಯ ಪ್ರಕಾರ, ಕಳಕಪ್ಪ ಅವರು ತಮ್ಮ ಅತ್ತೆಯ ಮನೆಯಾದ ಕಲ್ಲೂರು ಗ್ರಾಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಆಕಸ್ಮಿಕ ಸಾವು ಅವರ ಕುಟುಂಬಸ್ಥರು ಹಾಗೂ ಅಭಿಮಾನಿ ಬಳಗವನ್ನು ತೀವ್ರ ಆಘಾತಕ್ಕೆ ದೂಡಿದೆ.

ಜಾಹೀರಾತು

ವಿದ್ಯಾರ್ಥಿಗಳ ನೆಚ್ಚಿನ ‘ಸಮಾಜಶಾಸ್ತ್ರ ಉಪನ್ಯಾಸಕ ಕಳಕಪ್ಪ ಕುಂಬಾ‌ರ್ ಅವರು ಕೇವಲ ಪಾಠಕ್ಕಷ್ಟೇ ಸೀಮಿತವಾಗದೆ, ವಿದ್ಯಾರ್ಥಿಗಳೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ಸರಳ ವ್ಯಕ್ತಿತ್ವ ಹಾಗೂ ಬೋಧನಾ ಶೈಲಿಯಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಮನ ಗೆದ್ದಿದ್ದರು. ಕಳಕಪ್ಪ ಅವರ ನಿಧನಕ್ಕೆ ಕಾಲೇಜಿನ ಪ್ರಾಂಶುಪಾಲರು, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರು ಪತ್ನಿ, ತಂದೆ ತಾಯಿ ಸೋದರಿ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Total Views: 3
Share This Article