ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ:ಶಾಸಕರು, ಜಿಲ್ಲಾಧಿಕಾರಿಗಳಿಂದ ಪುಷ್ಪನಮನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Jagajyoti Shri Basaveshwara Jayanti: Floral tributes from MLAs, District Magistrates




ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ:
ಶಾಸಕರು, ಜಿಲ್ಲಾಧಿಕಾರಿಗಳಿಂದ ಪುಷ್ಪನಮನ

ಜಾಹೀರಾತು


ಕೊಪ್ಪಳ ಏಪ್ರಿಲ್ 20 (ಕ.ವಾ.): ಜಗಜ್ಯೋತಿ ಶ್ರೀ ಬಸವೇಶ್ವರರ 893ನೇ ಜಯಂತ್ಯುತ್ಸವ ನಿಮಿತ್ತ ಮಹಾನ್ ಮಾನವತಾವಾದಿ ಶ್ರೀ ಬಸವೇಶ್ವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದರಾದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ ಎಲ್ ಅರಸಿದ್ಧಿ, ಜಿಲ್ಲಾ ಪಂಚಾಯತ್ ಸಿಇಓ ವರ್ಣಿತ್ ನೇಗಿ ಹಾಗೂ ಇನ್ನೀತರ ಗಣ್ಯರು ಏಪ್ರೀಲ್ 20ರ ಬೆಳಗ್ಗೆ ಶಿವಶಾಂತವೀರ ನಗರದ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನ ವನಕ್ಕೆ ಆಗಮಿಸಿ ಜಗಜ್ಯೋತಿ ಶ್ರೀ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ತಹಸೀಲ್ದಾರ ಬಸವರಾಜ ತನ್ನಳ್ಳಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ ಕೃಷ್ಣಮೂರ್ತಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದುಂಡಪ್ಪ ತುರಾದಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಎ ವಿ ಕಣವಿ, ಮುಖಂಡರಾದ ಮುತ್ತು ಕುಷ್ಟಗಿ, ಮಂಜುನಾಥ ಸೊರಟೂರ, ಡಾ.ಮಹಾಂತೇಶ ನೆಲಾಗಣಿ, ಬಸವಶ್ರೀ ಸೋಮನಾಳ, ಬಸವರಾಜ ಬಳ್ಳೊಳ್ಳಿ, ರಾಜಶೇಖರ ಶಶಿಮಠ, ಶಿವಕುಮಾರ ಕುಕನೂರ, ಗವಿಸಿದ್ದಪ್ಪ ಯಕ್ಲಾಸಪೂರ, ಹನುಮಂತಪ್ಪ ಪೊಲೀಸ್ ಪಾಟೀಲ, ಗಾಳೆಪ್ಪ ಹೊಸಮನಿ ಸೇರಿದಂತೆ ಬಸವಪರ ಸಂಘಟಿಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ಇನ್ನೀತರರು ಉಪಸ್ಥಿತರಿದ್ದರು.

Total Views: 0
Share This Article