ಕಿರುಕುಳಕ್ಕೆ ನ್ಯಾಯಬೆಲೆ ಅಂಗಡಿ ವಿತರಕ ಬಲಿ: ಕುಟುಂಬದ ಆಕ್ರೋಶ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Fair Price Shop distributor victim of harassment: Family outraged




ಕಿರುಕುಳಕ್ಕೆ ನ್ಯಾಯಬೆಲೆ ಅಂಗಡಿ ವಿತರಕ ಬಲಿ: ಕುಟುಂಬದ ಆಕ್ರೋಶ

ಜಾಹೀರಾತು

ಗಂಗಾವತಿ: ನಗರದ ಶರಣ ಬಸವೇಶ್ವರ ನಗರದ ನಿವಾಸಿ ಹಾಗೂ ನ್ಯಾಯಬೆಲೆ ಅಂಗಡಿ ವಿತರಕ ನಾಗರಾಜ (ವ-45) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಪಡಿತರ ವಿತರಣೆಯ ಅಕ್ರಮ ಹಸ್ತಕ್ಷೇಪ ಹಾಗೂ ಮಾನಸಿಕ ಒತ್ತಡವೇ ಇವರ ಸಾವಿಗೆ ಕಾರಣ ಎಂದು ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.


ಘಟನೆಯ ವಿವರ:
ಲಿಂಗರಾಜ ಕ್ಯಾಂಪ್ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಗರಾಜ ಅವರು ಅತ್ಯಂತ ಪ್ರಾಮಾಣಿಕವಾಗಿ ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವರ ವ್ಯಾಪ್ತಿಯ ಪಡಿತರ ಚೀಟಿದಾರರನ್ನು ನಿಯಮಬಾಹಿರವಾಗಿ ಬೇರೆಡೆಗೆ ಸೆಳೆಯುವ ಪ್ರಯತ್ನಗಳು ನಡೆದಿದ್ದವು. ಈ ಅಕ್ರಮ ಹಸ್ತಕ್ಷೇಪದಿಂದಾಗಿ ನಾಗರಾಜ ಅವರು ತೀವ್ರ ಮಾನಸಿಕ ಸಂಕಟಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಬೀದಿಗೆ ಬಂದ ಕುಟುಂಬ:
ಈಗಾಗಲೇ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಾಗರಾಜ ಅವರು, ಈ ಬೆಳವಣಿಗೆಗಳಿಂದ ಮನನೊಂದು ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರ ಪತ್ನಿ ಯಶೋಧ ಮಾತನಾಡಿ, “ನಮ್ಮ ಕುಟುಂಬದ ಏಕೈಕ ಆಧಾರವಾಗಿದ್ದ ಅಂಗಡಿಯ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಯಿತು. ಇದನ್ನು ತಡೆದುಕೊಳ್ಳಲಾಗದೆ ನನ್ನ ಪತಿ ಪ್ರಾಣ ಬಿಟ್ಟಿದ್ದಾರೆ. ಈಗ ನಾನು ಮತ್ತು ನನ್ನ ಇಬ್ಬರು ಹೆಣ್ಣು ಮಕ್ಕಳು ಬೀದಿಪಾಲಾಗಿದ್ದೇವೆ” ಎಂದು ಕಣ್ಣೀರಿಟ್ಟಿದ್ದಾರೆ.

ನ್ಯಾಯಕ್ಕಾಗಿ ಆಗ್ರಹ:
ನಿಯಮಬಾಹಿರವಾಗಿ ಪಡಿತರ ಹಂಚಿಕೆಯಲ್ಲಿ ಹಸ್ತಕ್ಷೇಪ ಮಾಡಿದವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಮತ್ತು ಅನುಕಂಪದ ಆಧಾರದ ಮೇಲೆ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಸ್ಥಳೀಯರು ಹಾಗೂ ಮೃತರ ಸಂಬಂಧಿಕರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

Total Views: 2
Share This Article