ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

Sri Huligemma Devi Temple Fair Festival




ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ

ಜಾಹೀರಾತು


ಕ್ಷೇತ್ರದಲ್ಲಿ ಸ್ವಚ್ಛತೆ ಮತ್ತು ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳಿ: ಡಾ. ಸುರೇಶ ಇಟ್ನಾಳ
ಕೊಪ್ಪಳ ಏಪ್ರಿಲ್ 23 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರಕ್ಕೆ ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಲು ಮತ್ತು ತುಂಗಭದ್ರ ಆಣೆಕಟ್ಟೆಯಿಂದ ನದಿಗೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
 ಶ್ರೀಕ್ಷೇತ್ರದ ಸ್ವಚ್ಚತೆಗಾಗಿ ದೇವಸ್ಥಾನದ ವತಿಯಿಂದ ಹೆಚ್ಚುವರಿಯಾಗಿ 50 ಜನ ಸ್ವಚ್ಛತಾ ಸಿಬ್ಬಂದಿಗಳನ್ನು ತೆಗೆದುಕೊಳ್ಳಬೇಕು. ದೇವಸ್ಥಾನ ಗೋಪುರದಿಂದ ಮುದ್ದಮ್ಮನ ಕಟ್ಟೆಯವರೆಗೆ, ಮುದ್ದಮ್ಮನ ಕಟ್ಟೆಯಿಂದ ನಂದಿ ಸರ್ಕಲ್, ಟ್ಯಾಂಕ್ ಏರಿಯಾ, ನದಿ ತೀರದ ಹತ್ತಿರ, ದೇವಸ್ಥಾನದ ಒಳ ಆವರಣ ಮತ್ತು ಪಾರ್ಕಿಂಗ್ ಪ್ರದೇಶ ಹೀಗೆ ಒಂದೊಂದು ಏರಿಯಾಗಳನ್ನು ಹಂಚಿಕೆ ಮಾಡಿ ಸದರಿ ಏರಿಯಾಗಳ ಸ್ವಚ್ಛತೆಯ ಸಂಪೂರ್ಣ ಜವಾಬ್ದಾರಿಯನ್ನು ಪ್ರತಿಯೊಂದು ತಂಡಕ್ಕೆ ನೀಡಿ, ಹಸಿಕಸ ಮತ್ತು ಒಣಕಸವನ್ನು ಹೊಸಹಳ್ಳಿ ಕಸವಿಲೇವಾರಿ ಘಟಕಕ್ಕೆ ಕಳುಹಿಸಬೇಕು. ಯಾವುದೇ ರೀತಿಯ ರೋಗ ರುಜಿನಗಳು ಬರದಂತೆ ಮುಂಜಾಗ್ರತೆ ವಹಿಸಲು ಪ್ರತಿ ವರ್ಷದಂತೆ ಬ್ಲೀಚಿಂಗ ಪೌಡರ್, ಫಿನಾಯಿಲ್‌ಗಳನ್ನು ಖರೀದಿಸಿ, ಸಿಂಪಡಿಸಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ಕೊಡಿ. ಜಾತ್ರೆಯ ನಂತರ ಹುಲಿಗಿ ಗ್ರಾಮದ ಪ್ರಮುಖ ರಸ್ತೆಗಳು, ಶಾಲೆಗಳು, ಬಸ್ ನಿಲ್ದಾಣ ಮುಂತಾದ ಕಡೆ ಸ್ವಚ್ಚತೆಗೂ ಅಗತ್ಯ ಕ್ರಮ ಕೈಗೊಳ್ಳಲು ಕೊಪ್ಪಳ ನಗರಸಭೆ ವತಿಯಿಂದ ಸಕ್ಕಿಂಗ್ ಮಷಿನ್-1 ಸ್ವಚ್ಛತೆ ಮಾಡಲು ನಗರಸಭೆ ಅಧಿಕಾರಿಗಳು, ಮತ್ತು ಗ್ರಾಮ ಪಂಚಾಯತ ಅಧಿಕಾರಿಗಳು ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದರು.
 ಜಾತ್ರೆಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಾತ್ರೆ ಪ್ರಾರಂಭವಾಗುವ ಪೂರ್ವದಲ್ಲಿ ಹಾಗೂ ಜಾತ್ರಾ ನಂತರ ಗ್ರಾಮದ ವ್ಯಾಪ್ತಿಗೆ ಬರುವ ಎಲ್ಲಾ ಚರಂಡಿಗಳನ್ನು ಗ್ರಾಮ ಪಂಚಾಯಿತಿ ಮತ್ತು ಮತ್ತು ದೇವಸ್ಥಾನದ ವ್ಯಾಪ್ತಿಗೆ ಬರುವ ಎಲ್ಲಾ ಚರಂಡಿಗಳನ್ನು ದೇವಸ್ಥಾನದ ವತಿಯಿಂದ ಸ್ವಚ್ಚಗೊಳಿಸಿ ಬ್ಲೀಚಿಂಗ್ ಪೌಡರ್ ಹಾಕಬೇಕು. ನೀರಿನ ಟ್ಯಾಂಕ್‌ಗಳಿಗೆ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಚಗೊಳಿಸಲು ಮತ್ತು ಗ್ರಾಮದಲ್ಲಿ ಜಾತ್ರಾ ವೇಳೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು, ಪ್ರಾ.ಅ.ಕೇ,ಹುಲಿಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಹುಲಿಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಜಾತ್ರಾ ಸಮಯದಲ್ಲಿ ತುಂಗಭದ್ರ ಆಣೆಕಟ್ಟೆಯಿಂದ ನದಿಗೆ ನೀರು: ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೇ 10 ರಿಂದ ಮೇ 14ರ ವರೆಗೆ, ಈ ಅವಧಿಯಲ್ಲಿ ಜಾತ್ರೆಗೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಕುಡಿಯುವ ನೀರಿನ ಅವಶ್ಯಕತೆ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಭಕ್ತರಿಗೆ ಅನಾನುಕೂಲವಾಗದಂತೆ ಪ್ರತಿ ವರ್ಷ ಕ್ರಮ ಕೈಗೊಳ್ಳುವಂತೆ, ಈ ವರ್ಷವು ಅದೇ ರೀತಿ ತುಂಗಭದ್ರ ಆಣೆಕಟ್ಟೆಯಿಂದ ನದಿಗೆ ನೀರು ಬಿಡಲು ನೀರಾವರಿ ಇಲಾಖೆ ಟಿ.ಬಿ.ಬೋರ್ಡ ಟಿ.ಬಿಡ್ಯಾಂ & ಮುನಿರಾಬಾದ್ ಡ್ಯಾಂನ ಮುಖ್ಯ ಕಾರ್ಯಪಾಲಕ ಅಭಿಯಂತರರು ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಸೂಕ್ತ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Total Views: 0
Share This Article