
Various training for the unemployed: Application invited
ನಿರುದ್ಯೋಗಿಗಳಿಗೆ ವಿವಿಧ ತರಬೇತಿ: ಅರ್ಜಿ ಆಹ್ವಾನ

ಕೊಪ್ಪಳ ಏಪ್ರಿಲ್ 23 (ಕರ್ನಾಟಕ ವಾರ್ತೆ): ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ 30 ದಿನಗಳ ಉಚಿತ ಸೋಲಾರ ಟೆಕ್ನೀಷಿಯನ್, ಜೆಸಿಬಿ ಆಪರೇಟರ್, ಇಲೆಕ್ಟ್ರೀಕ್ ವೇಹಿಕಲ್ ಸರ್ವಿಸಿಂಗ್, ಕಾರು ಚಾಲನೆ ಮತ್ತು ರೆಪ್ರೀಜರೇಷನ್, ಏರ್ ಕಂಡಿಷನಿAಗ್ ತರಬೇತಿಗಳು ಪ್ರಾರಂಭವಾಗಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಗಳು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಸ್ವಯಂ ಉದ್ಯೋಗ ಮಾಡಲು ಈ ತರಬೇತಿಯು ಅನುಕೂಲವಾಗಲಿದ್ದು, ಸ್ವ ಉದ್ಯೋಗ ಪ್ರಾರಂಭಿಸಿ, ಸ್ವಾವಲಂಭಿ ಜೀವನ ನಡೆಸಲು ಅನುಕೂಲವಾಗಲಿದೆ. 18 ರಿಂದ 50 ವಯಸ್ಸಿನ ಒಳಗಿರುವ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಏಪ್ರಿಲ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸಲಿಚ್ಛಿಸುವವರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ವಾಟ್ಸಾಪ್ ನಂಬರಗೆ 9483485489 ಗೆ `ಹಾಯ್’ ಎಂದು ಸಂದೇಶ ಕಳುಹಿಸುವುದರ ಮುಖಾಂತರ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 7204105812, 9482188780 ಗೆ ಸಂಪರ್ಕಿಸುವAತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
