
Take necessary steps to protect the health of devotees: District Collector Dr. Suresh Itnal

ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ

ಭಕ್ತರ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
ಕೊಪ್ಪಳ ಏಪ್ರಿಲ್ 27 (ಕರ್ನಾಟಕ ವಾರ್ತೆ): ಶ್ರೀ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಬರುವ ಭಕ್ತರ ಆರೋಗ್ಯ ರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ ಮಾಡಿ ಶುದ್ಧ ನೀರನ್ನು ಮಾತ್ರ ಭಕ್ತಾದಿಗಳಿಗೆ ಕುಡಿಯಲು ನೀರು ಒದಗಿಸಲು ಅನುಕೂಲ ಮಾಡಿಕೊಡಬೇಕು. ಜಾತ್ರೆ ಪ್ರಾರಂಭವಾಗುವ ಪೂರ್ವದಲ್ಲಿ ಹಾಗೂ ಜಾತ್ರಾ ನಂತರ ಗ್ರಾಮದ ವ್ಯಾಪ್ತಿಗೆ ಬರುವ ಮತ್ತು ದೇವಸ್ಥಾನದ ವ್ಯಾಪ್ತಿಗೆ ಬರುವ ಎಲ್ಲಾ ಚರಂಡಿಗಳನ್ನು ದೇವಸ್ಥಾನದ ವತಿಯಿಂದ ಸ್ವಚ್ಛಗೊಳಿಸಿ ಕ್ಲೀಚಿಂಗ್ ಪೌಡರ್ ಹಾಕಲು ನಿರ್ಣಯಿಸಲಾಯಿತು. ನೀರಿನ ಟ್ಯಾಂಕ್‌ಗಳಿಗೆ ಕ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಚಗೊಳಿಸಲು, ಜಾತ್ರಾ ವೇಳೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ದೇವಸ್ಥಾನದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊಳಚೆ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಲು ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಪ್ರತಿ ನಿತ್ಯ ದಾಸೋಹ ಭವನದಲ್ಲಿ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ತಯಾರಿಸಲಾಗುವ ಆಹಾರಗಳ ಪರಿಶೀಲನೆ ಮಾಡಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಬೇಕು. ಜಾತ್ರಾ ಅವಧಿಗೆ ಬೇಕಾಗುವ ಕ್ಲೀಚಿಂಗ್ ಪೌಡರ್, ಫಿನಾಯಿಲ್‌ನ್ನು ದೇವಸ್ಥಾನದ ವತಿಯಿಂದ ಖರೀದಿಸಿ ಒದಗಿಸಬೇಕು. ಆರೋಗ್ಯ ಇಲಾಖೆಯಿಂದ ಸಾಧ್ಯವಾದಷ್ಟು ಅತೀ ಹೆಚ್ಚಿನ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ಶ್ರೀ ಹುಲಿಗೆಮ್ಮ ದೇವಿ ದೇವಾಲಯಕ್ಕೆ ನಿಯೋಜಿಸಲು ಹಾಗೂ ಈ ಸೇವೆಯನ್ನು 5 ದಿನಗಳ ಕಾಲ ನಿರಂತರ ಸೇವೆ ಒದಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಹುಲಿಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಅವಧಿಯಲ್ಲಿ ಜಾತ್ರೆಗೆ ಬರುವ ಭಕ್ತರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಭಕ್ತರ ಆರೋಗ್ಯ ರಕ್ಷಣೆಗಾಗಿ ಬೇಕಾದ ಔಷದಿಗಳೊಂದಿಗೆ ಎರಡು ತಾತ್ಕಾಲಿಕ ಆರೋಗ್ಯ ಕೇಂದ್ರ, ಮುನಿರಾಬಾದ್ ಡ್ಯಾಂನಲ್ಲಿ ಒಂದು ತುರ್ತು ಚಿಕಿತ್ಸಾ ಘಟಕ ಮತ್ತು ಎಡರು ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳವುದಾಗಿ ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದರು.
