ಕನಕಗಿರಿ: ಐಟಿಐ ಪ್ರವೇಶಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Kanakagiri: Applications invited from candidates for ITI admission

ಕನಕಗಿರಿ: ಐಟಿಐ ಪ್ರವೇಶಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಜಾಹೀರಾತು


ಕೊಪ್ಪಳ ಏಪ್ರಿಲ್ 29 (ಕರ್ನಾಟಕ ವಾರ್ತೆ): ಕನಕಗಿರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2026–27ನೇ ಸಾಲಿಗೆ ಮೀಸಲಾತಿ ಆಧಾರಿತ ಐಟಿಐ ವಿವಿಧ ವೃತ್ತಿಯಲ್ಲಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಕಗಿರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ವೃತ್ತಿಗನುಸಾರವಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಆಸಕ್ತ ಅಭ್ಯರ್ಥಿಗಳು ಎನ್.ಸಿ.ವಿ.ಟಿ ಸಂಯೋಜಿತ ಸಿ.ಟಿ.ಎಸ್ ಅಡಿಯಲ್ಲಿ ಐಟಿಐ  ಪ್ರವೇಶಾತಿಯನ್ನು ಪಡೆಯಬಹುದಾಗಿದ್ದು, 14 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ಸಲ್ಲಿಸಲು ಮೇ 8 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ www.cite.karnataka.gov.inಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ರಾಜ್ಯದ ಯಾವುದೇ ಸರ್ಕಾರಿ ಅಥವಾ ಅನುದಾನಿತ ಐಟಿಐ ಕೇಂದ್ರಗಳಲ್ಲಿ ಅಥವಾ ಇಂಟರ್ನೆಟ್ ಕೆಫೆ/ಸೈಬರ್ ಸೆಂಟರ್‌ಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9481715142, 9448259832 ಗೆ ಸಂಪರ್ಕಿಸಬಹುದಾಗಿದೆ ಎಂದು ಕನಕಗಿರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article