ಮೇ 3 ರಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Koppal District In-charge Minister's tour program on May 3rd

ಮೇ 3 ರಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಜಾಹೀರಾತು


ಕೊಪ್ಪಳ ಮೇ 02 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಮೇ 3 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 8 ಹೊಸಪೇಟೆಯಿಂದ ರಸ್ತೆ ಮೂಲಕ ನಿರ್ಗಮಿಸಿ 8.30ಕ್ಕೆ ಕೊಪ್ಪಳಕ್ಕೆ ಆಗಮಿಸಿ, ತಾಲ್ಲೂಕಿನ ಕೋಳೂರು-ಕಾಟ್ರಳ್ಳಿಯಲ್ಲಿ ಶ್ರೀ ಗವಿ ಸಿದ್ದೇಶ್ವರ ಗುರುಕುಲ ವಿದ್ಯಾರ್ಥಿನಿಯರ ಪದವಿ ಪೂರ್ವ ವಸತಿ ಕಾಲೇಜಿನ ನೂತನ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 9 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ, 9.30ಕ್ಕೆ ಹೊಸಪೇಟೆಯ ತುಂಗಭದ್ರ ಜಲಾಶಯದ ಕ್ರಸ್ಟ್ಗೇಟ್ ಅಳವಡಿಕೆ ಕಾಮಗಾರಿಯ ಪರಿವೀಕ್ಷಣೆಯಲ್ಲಿ ಉಪ ಮುಖ್ಯಮಂತ್ರಿಯವರೊಂದಿಗೆ ಪಾಲ್ಗೊಳ್ಳುವರು. ನಂತರ 11 ಗಂಟೆಗೆ ಹೊಸಪೇಟೆಯಿಂದ (ರಸ್ತೆ ಮೂಲಕ ಗಂಗಾವತಿ ಮಾರ್ಗವಾಗಿ) ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು.
ಅಂದು ಮಧ್ಯಾಹ್ನ 1.30ಕ್ಕೆ ಸಿಂಧನೂರಿನಿಂದ (ರಸ್ತೆ ಮೂಲಕ ತಾವರಗೇರ, ಕುಷ್ಟಗಿ ಮಾರ್ಗವಾಗಿ) ನಿರ್ಗಮಿಸಿ, ಮಧ್ಯಾಹ್ನ 2.30ಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹಿರೇಬನ್ನಿಗೋಳ್ ಕ್ರಾಸ್ ಅಟಲ್ ಜಿ ಸಭಾಭವನದಲ್ಲಿ ಖಾಸಗಿ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಅಂದು ಮಧ್ಯಾಹ್ನ 3.30ಕ್ಕೆ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Total Views: 0
Share This Article