ಸಣ್ಣ ನೀರಾವರಿ ಸಚಿವರ ಪ್ರವಾಸ ಕಾರ್ಯಕ್ರಮ ಮೇ 3ಕ್ಕೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Minor Irrigation Minister's tour program on May 3




ಸಣ್ಣ ನೀರಾವರಿ ಸಚಿವರ ಪ್ರವಾಸ ಕಾರ್ಯಕ್ರಮ ಮೇ 3ಕ್ಕೆ

ಜಾಹೀರಾತು


ಕೊಪ್ಪಳ ಮೇ 02 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ತಿನ ಸಭಾ ನಾಯಕರು ಆಗಿರುವ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಮೇ 3 ರಂದು ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 6 ಗಂಟೆಗೆ ರಾಯಚೂರಿನಿಂದ (ರಸ್ತೆ ಮೂಲಕ ಮಾನವಿ, ಸಿಂಧನೂರು, ಗಂಗಾವತಿ ಮಾರ್ಗವಾಗಿ) ನಿರ್ಗಮಿಸಿ ಬೆಳಿಗ್ಗೆ 9 ಗಂಟೆಗೆ ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯಕ್ಕೆ ಆಗಮಿಸುವರು. 9.30ಕ್ಕೆ ಉಪ ಮುಖ್ಯಮಂತ್ರಿಗಳೊಂದಿಗೆ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಅಳವಡಿಸುವ ಕಾಮಗಾರಿಯ ಪರಿವೀಕ್ಷಣೆ ಮಾಡುವರು. ನಂತರ 11.30ಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಆವರಣದಲ್ಲಿನ ಹೆಲಿಪ್ಯಾಡ್ ದಿಂದ ಡಿಸಿಎಂ ಅವರೊಂದಿಗೆ ವಿಟಿ-ಬಿಜಿಎಂ ಹೆಲಿಕಾಪ್ಟರ್ ಮೂಲಕ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article