ಕರ್ನಾಟಕ ಉಪಚುನಾವಣೆ, ಕೇರಳ ಕೈ ಗೆಲುವಿಗೆ ಕಾಂಗ್ರೆಸ್ ಸಂಭ್ರಮಾಚರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Congress celebrates victory in Karnataka by-election, Kerala by-election




ಕರ್ನಾಟಕ ಉಪಚುನಾವಣೆ, ಕೇರಳ ಕೈ ಗೆಲುವಿಗೆ ಕಾಂಗ್ರೆಸ್ ಸಂಭ್ರಮಾಚರಣೆ

ಜಾಹೀರಾತು

ಕೊಪ್ಪಳ: ಇಲ್ಲಿನ ಅಶೋಕ ವೃತ್ತದಲ್ಲಿ ಕರ್ನಾಟಕದ ಉಪಚುನಾವಣೆ ದಾವಣಗೆರೆ ಮತ್ತು ಬಾಗಲಕೋಟೆ ಹಾಗೂ ಕೇರಳದಲ್ಲಿ ಜಯಶಾಲಿಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ‌ ಮೂಡಿದೆ, ಇವು ಸಾಮಾನ್ಯ ಜನರ ಬದುಕಿಗೆ ಆಸರೆಯಾಗಿದ್ದು, ಕಾಂಗ್ರೆಸ್ ಉತ್ತಮ ಆಡಳಿತವನ್ನು ನೋಡಿ ಜನರು ಬಹುಮತದಿಂದ ಗೆಲ್ಲಿಸಿದ್ದಾರೆ. ಈ ಗೆಲುವು ಮೂರು ವರ್ಷದ ಆಡಳಿತಕ್ಕೆ ಹಿಡಿದ ಕನ್ನಡಿ, ಕೇರಳ‌ ಮತ್ತೆ ಕೈ ವಶವಾಗಿದ್ದು, ವಿದ್ಯಾವಂತರು ಕಾಂಗ್ರೆಸ್ ಸಾಧನೆ ಗಮನಿಸಿ ಬೆಂಬಲಿಸಿದ್ದಾರೆ ಎಂದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ಮುಖಂಡರುಗಳಾದ ಅಕ್ಬರ್ ಪಾಶಾ ಪಲ್ಟನ್, ಸುರೇಶ ದಾಸರಡ್ಡಿ, ಮಾನವಿ ಪಾಶಾ, ಚಿಕನ್ ಪೀರಾ, ಶ್ರೀನಿವಾಸ ಪಂಡಿತ, ಮೌನೇಶ ವಡ್ಡಟ್ಟಿ, ಮಲ್ಲಿಕಾರ್ಜುನ ಪೂಜಾರ, ಯಶೋಧ ಮರಡಿ, ಪದ್ಮಾ‌ ಕಂಬಳಿ, ಗಂಗಮ್ಮ, ಬಸಯ್ಯಸ್ವಾಮಿ, ನಾಸೀರಹುಸೇನ, ಅಶೋಕ ಗೋರಂಟ್ಲಿ, ಆಸೀಫ್ ಸೇರಿ ಅನೇಕರಿದ್ದರು.

Total Views: 1
Share This Article