ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಸಿಇಒ ವರ್ಣಿತ್ ನೇಗಿ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
Give first priority to drinking water supply: CEO Varnit Negi




ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಸಿಇಒ ವರ್ಣಿತ್ ನೇಗಿ

ಜಾಹೀರಾತು

ಕೊಪ್ಪಳ ಮೇ 07, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಕೊಠಡಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (ಡಿ.ಡಬ್ಲ್ಯೂ.ಎಸ್.ಎಂ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಮೊಲದ ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಪ್ರಸ್ತುತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಬಾಡಿಗೆ ಆಧಾರದ ಮೇಲೆ ಖಾಸಗಿ ಕೊಳವೆ ಬಾವಿಗಳನ್ನು ತೆಗೆದುಕೊಂಡು ವಿವಿಧ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಈ ಎಲ್ಲಾ ಕೊಳವೆ ಬಾವಿಗಳ ನೀರನ್ನು ಕಡ್ಡಾಯವಾಗಿ ಪರೀಕ್ಷಿಸಿದ ಬಳಿಕವೇ ನೀರು ಪೂರೈಸಬೇಕು. ಈಗಾಗಲೇ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನೀರಿನ ಪರೀಕ್ಷಾ ಕಿಟ್‌ಗಳನ್ನು ನೀಡಲಾಗಿದೆ. ಅಗತ್ಯವಿದ್ದಲ್ಲಿ ನಿಯಮಾನುಸಾರ ಪ್ರಸ್ತಾವನೆ ಸಲ್ಲಿಸಿ.  ಪರೀಕ್ಷೆಯಲ್ಲಿ ನೀರು ಕುಡಿಯಲು ಯೋಗ್ಯವಿಲ್ಲವೆಂದು ಕಂಡುಬAದಲ್ಲಿ ತಕ್ಷಣ ಅಂತಹ ನೀರನ್ನು ಬಳಕೆ ಮಾಡದಂತೆ ತ್ವರಿತ ಕ್ರಮವಹಿಸಬೇಕು. ಕುಡಿಯಲು ಯೋಗ್ಯವಿಲ್ಲದ ಬೋರ್‌ವೆಲ್ ಗಳನ್ನು ಸ್ಥಗಿತಗೊಳಿಸಬೇಕು. ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರವೇ ನಿರಂತರ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಯಾವುದೇ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉಲ್ಬಣಗೊಂಡರೆ, ಇದರ ಬಗ್ಗೆ ಪ್ರತಿ ವಾರಕ್ಕೊಮ್ಮೆ ಸಭೆ ನಡೆಸಿ ಆಯಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಹಂತದಲ್ಲಿಯೇ ಕ್ರಮ ಕೈಗೊಳ್ಳಬೇಕು. ಎಲ್ಲಾ ಗ್ರಾಮಗಳಲ್ಲಿರುವ ಓ.ಹೆಚ್.ಟಿ ಟ್ಯಾಂಕನ್ನು ಪ್ರತಿ ತಿಂಗಳು ಸ್ವಚ್ಛ ಮಾಡಬೇಕು. ಗ್ರಾಮಗಳಲ್ಲಿ ಈಗಾಗಲೇ ಸರಬರಾಜು ಮಾಡುತ್ತಿರುವ ನೀರಿನ ಪೈಪಲೈನ್‌ಗಳಲ್ಲಿ ಯಾವುದೇ ರೀತಿಯ ಸೋರಿಕೆ ಕಂಡುಬAದಲ್ಲಿ 24 ಗಂಟೆಗಳಲ್ಲಿ ದುರಸ್ಥಿಗೊಳಿಸಿ ನೀರು ಪೂರೈಕೆಯಾಗುವಂತೆ ಸಂಬAಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು. ಖಾಸಗಿ ಬೋರ್‌ವೆಲ್ ಹಾಗೂ ಟ್ಯಾಂಕರ್ ನೀರಿಗೆ ಸರ್ಕಾರದ ನಿಯಮಾನುಸಾರ ದರ ನಿಗದಿಪಡಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಟಿ.ಕೃಷ್ಣಮೂರ್ತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೊಪ್ಪಳ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಮಹೇಶ ಶಾಸ್ತಿç ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ವಿಭಾಗಗಳ ಎಇಇಗಳು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (ಡಿ.ಡಬ್ಲ್ಯೂ.ಎಸ್.ಎಂ) ಸಮಿತಿಯ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Total Views: 0
Share This Article