
Job Fair in Graduate College
ಪದವಿ ಕಾಲೇಜಿನಲ್ಲಿಉದ್ದೋಗ ಮೇಳ

ಕನಕಗಿರಿ, ಮೇ.07: ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದಿಂದ ಮೇ.11ಕ್ಕೆ (ಸೋಮವಾರ) ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಭಾಗಗಳ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಜರಂಗಬಲಿ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಹೊಸಪೇಟೆ ಉಕ್ಕು ನಿಯಮಿತ, ಹೆಚ್.ಡಿ.ಎಫ್.ಸಿ ಬ್ಯಾಂಕ್, ಟೊಯೋಟಾ ಕಿರ್ಲೋಸ್ಕರ್, ಮೆಡ್-ಪ್ಲಸ್, ದೊಡ್ಡಾ ಡೈರಿ, ನವ ಭಾರತ್ ಗೊಬ್ಬರ ಖಾಸಗಿ ನಿಯಮಿತ, ಕ್ರೆಡಿಟ್ ಆ್ಯಕ್ಸೆಸ್ ಗ್ರಾಮೀಣ್ ಕೋಟಾ ಲಿಮಿಟೆಡ್, ಆಗು ನೀ ಅನಿಕೇತನ ಫೌಂಡೇಶನ್ (ವಿಕಲಚೇತನರಿಗೆ ಉದ್ಯೋಗಾವಕಾಶ ನೀಡುತ್ತಿರುವ ಸಂಸ್ಥೆ), ಕ್ರಿಯೇಟಿವ್ ಇಂಜಿನಿಯರ್ಸ್ ಪ್ರೈವೇಟ್ ಲಿಮಿಟೆಡ್, ಇಶಾನ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ ಹಾಗೂ ಇತರೆ ಕಂಪನಿಗಳು ಪ್ರಸ್ತುತ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಎಸ್.ಎಲ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮ್, ಕಂಪ್ಯೂಟರ್ ತರಬೇತಿ ಹಾಗೂ ಯಾವುದೇ ಪದವಿ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹಾಗೂ ವಿಕಲಚೇತನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ. ಉದ್ಯೋಗ ಮೇಳಕ್ಕಾಗಿ ಅಭ್ಯರ್ಥಿಗಳ ನೋಂದಣಿ ಕಡ್ಡಾಯವಾಗಿದ್ದು, ಆಸಕ್ತರು ಆಧಾರ್ ಕಾರ್ಡ್ (ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು) ಹಾಗೂ ಬಯೋಡಾಟಾದೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9741610456, 9448876969, 94801126255 . 9740241092 ಮಾಡಬಹುದಾಗಿದೆ.
