ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ “ಅರಿವು ಲೋನ್” ಸೌಲಭ್ಯಕ್ಕೆ ಅರ್ಜಿ ಆಹ್ವಾನ.

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Applications are invited for the “Arivu Loan” facility for minority students.




ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ “ಅರಿವು ಲೋನ್” ಸೌಲಭ್ಯಕ್ಕೆ ಅರ್ಜಿ ಆಹ್ವಾನ.

ಜಾಹೀರಾತು


ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2026-27ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ “ಅರಿವು ಲೋನ್” ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಂ.ಬಿ.ಬಿ.ಎಸ್ (MBBS), ಬಿ.ಡಿ.ಎಸ್ (BDS), ಬಿ.ಯು.ಎಂ.ಎಸ್ (BUMS), ಬಿ.ಎಚ್.ಎಂ.ಎಸ್ (BHMS), ಬಿ.ಎ/ಬಿ.ಎಸ್ಸಿ ನರ್ಸಿಂಗ್ ಹಾಗೂ ಇತರೆ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ ಪಡೆಯಬಹುದು ಎಂದು ನಿಗಮ ತಿಳಿಸಿದೆ.

ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಆರಂಭ ದಿನಾಂಕ 08-05-2026 ಆಗಿದ್ದು, ಕೊನೆಯ ದಿನಾಂಕ 30-05-2026 ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಯೋಜನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ವ್ಯಾಪಕವಾಗಿ ತಲುಪಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ.

Total Views: 0
Share This Article