
Lorry driver dies after being hit by electric wire

ವಿದ್ಯುತ್ ತಂತಿ ತಗುಲಿ ಲಾರಿ ಚಾಲಕ ದುರ್ಮರಣ

ಗಂಗಾವತಿ: ನಗರದ ಕಂಪ್ಲಿ ರಸ್ತೆಯಲ್ಲಿರುವ ಕೋಳಿ ಫಾರಂ ಸಮೀಪದ ಲೇಔಟ್‌ನಲ್ಲಿ ದುರ್ಘಟನೆಯೊಂದು ಸಂಭವಿಸಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಗಂಗಾವತಿ ತಾಲೂಕಿನ ಬಂಕಾಪುರ ಗ್ರಾಮದ ನಿವಾಸಿ ಸೋಮ ಎನ್ನುವ ಯುವಕ ಟಿಪ್ಪರ್ ನಲ್ಲಿ ತರಲಾಗಿದ್ದ ಮರಮನ್ನು ಕಂಪ್ಲಿ ರಸ್ತೆಯಲ್ಲಿರುವ ಕೋಳಿ ಫಾರಂ ಪಕ್ಕದ ಲೇಔಟ್ ನಲ್ಲಿ ಅನ್ಲೋಡ್ ಮಾಡುವ ವೇಳೆ ಲಿಫ್ಟ್ ಮೇಲಕ್ಕೆ ಎತ್ತಿದ ಸಂದರ್ಭದಲ್ಲಿ ಲಾರಿಗೆ ಮೇಲ್ಭಾಗದಲ್ಲಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಭಾರತೀಯ ಪ್ರಜಾ ಸೇನೆಯ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷ ನಬಿರಸೂಲ್ ರಕ್ಷಣೆಗಾಗಿ ಮುಂದಾದರೂ, ಅಷ್ಟರಲ್ಲೇ ಚಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನಾ ನಡೆದ ತಕ್ಷಣ ಸ್ಥಳಕ್ಕೆ ಪೊಲೀಸರು ಹಾಗೂ ವಿದ್ಯುತ್ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಚಾಲಕನ ಗುರುತು ಹಾಗೂ ಮೂಲ ಊರಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದು, ಲೇಔಟ್ ಪ್ರದೇಶಗಳಲ್ಲಿ ಕಡಿಮೆ ಎತ್ತರದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳೇ ಇಂತಹ ಅವಘಡಗಳಿಗೆ ಕಾರಣವಾಗುತ್ತಿವೆ ಎಂದು ಆರೋಪಿಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಅಪಾಯಕಾರಿ ಪ್ರದೇಶಗಳಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
