ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ: ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
 in Handloom and Textile Technology: Applications invited





ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ: ಅರ್ಜಿ ಆಹ್ವಾನ

ಜಾಹೀರಾತು

ಕೊಪ್ಪಳ ಮೇ 13, (ಕರ್ನಾಟಕ ವಾರ್ತೆ): 2026-27 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸು ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‌ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ದಿನಾಂಕ: 01-07-2026 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು.  ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) ಸಂಸ್ಥೆಯಲ್ಲಿ 22, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) ಸಂಸ್ಥೆಯಲ್ಲಿ 12, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) ಸಂಸ್ಥೆಯಲ್ಲಿ 3 ಹಾಗೂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳಂ) ಸಂಸ್ಥೆಯಲ್ಲಿ 2 ಸ್ಥಾನಗಳು ಲಭ್ಯವಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸು ಪ್ರವೇಶ ಕುರಿತಂತೆ ಕೌನ್ಸೆಲಿಂಗ್‌ಗಾಗಿ ಕರೆಯಲಾಗುವುದು. ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೊಡ್ ಮಾಡಿಕೊಳ್ಳಲು  https://khtigadag.ac.in/AdmissionForm.pdf  ಲಿಂಕ್ ಬಳಸಬಹುದು. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಮೇ 30 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಮೇಲಿನ ವಿಳಾಸಕ್ಕೆ ಅಥವಾ ದೂರವಾಣಿ ಸಂ: 08372-259664, ಮೊಬೈಲ್ ಸಂಖ್ಯೆ: 9916143619 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article