ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ: ಹೆಸರು ನೋಂದಣಿಗೆ ಸೂಚನೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

District level summer camp: Notice for name registration




ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ: ಹೆಸರು ನೋಂದಣಿಗೆ ಸೂಚನೆ

ಜಾಹೀರಾತು

ಕೊಪ್ಪಳ ಮೇ 13, (ಕರ್ನಾಟಕ ವಾರ್ತೆ): ಬೆಂಗಳೂರಿನ ಬಾಲಭವನ ಸೊಸೈಟಿ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದು.
ಶಿಬಿರವು 15 ದಿನಗಳ ಅವಧಿಯದ್ದಾಗಿದ್ದು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ವಿವಿಧ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಕರಾಟೆ, ಯೋಗ, ಇತರೆ ಚಟುವಟಿಕೆಗಳು ನಡೆಯಲಿವೆ.
5 ರಿಂದ 16 ವರ್ಷದೊಳಗಿನ ಆಸಕ್ತ ಸರ್ಕಾರಿ ಶಾಲೆ ಅಥವಾ ಸೌಲಭ್ಯ ವಂಚಿತ ಮಕ್ಕಳು ಚಟುವಟಿಕೆಯಲ್ಲಿ ಭಾಗವಹಿಸಬಹುದು. ಆಸಕ್ತರು ಮೇ 16 ರ ಮಧ್ಯಾಹ್ನ 1.30 ಗಂಟೆಯೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೇಲಿನ ವಿಳಾಸ ಅಥವಾ ದೂ.ಸಂ: 08539-222703 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article