ವೀಲಿಂಗ್ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್; ಯುವಕನ ವಿರುದ್ಧ ಪ್ರಕರಣ ದಾಖಲು

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Case registered against youth for posting on Instagram while wheeling

ವೀಲಿಂಗ್ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್; ಯುವಕನ ವಿರುದ್ಧ ಪ್ರಕರಣ ದಾಖಲು

ಜಾಹೀರಾತು

ಗಂಗಾವತಿ: ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿ ವೀಲಿಂಗ್ ಮಾಡಿದ ದೃಶ್ಯಗಳನ್ನು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದ ಯುವಕನ ವಿರುದ್ಧ ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ರಸ್ತೆ ಮೇಲೆ ವೀಲಿಂಗ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶಾರದಮ್ಮ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಂಚಾರಿ ನಿಯಮ ಉಲ್ಲಂಘನೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಂತಹ ಅಪಾಯಕಾರಿ ಸಾಹಸಗಳಲ್ಲಿ ತೊಡಗಬಾರದು ಎಂದು ಯುವಕರಿಗೆ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ರಸ್ತೆಗಳಲ್ಲಿ ವೀಲಿಂಗ್, ರೇಸಿಂಗ್ ಸೇರಿದಂತೆ ಜೀವಕ್ಕೆ ಅಪಾಯ ಉಂಟುಮಾಡುವ ಚಟುವಟಿಕೆಗಳಲ್ಲಿ ಭಾಗವಹಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.

Total Views: 1
Share This Article